Tuesday January 10 2017

Follow on us:

Contact Us

ಜ.13 ರಂದು ಕುಂಞಿಯಡ ಕೊಡವ ಜನಪದ ಸಾಂಸ್ಕೃತಿಕ ನಮ್ಮೆ

ನ್ಯೂಸ್ ಕನ್ನಡ ವರದಿ(10.01.2017)-ಮಡಿಕೇರಿ: ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿ ವತಿಯಿಂದ 3ನೇ ವರ್ಷದ ಕುಂಞಿಯಡ ಕೊಡವ ಜನಪದ ಸಾಂಸ್ಕೃತಿಕ ನಮ್ಮೆ ಇದೇ ಜ.13 ರಂದು ಮಡಿಕೇರಿಯ ಜನರಲ್ ತಿಮ್ಮಯ್ಯ ಪಬ್ಲಿಕ್ ಸ್ಕೂಲ್‍ ನ ಆವರಣದಲ್ಲಿ ನಡೆಯಲಿದೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅಕಾಡೆಮಿ ಅಧ್ಯಕ್ಷರಾದ ಬಿ.ಎಸ್.ತಮ್ಮಯ್ಯ, ಕುಂಞಿಯಡ ಕೊಡವ ಜನಪದ ಸಾಂಸ್ಕೃತಿಕ ನಮ್ಮೆಯನ್ನು ಎರಡು ವಿಭಾಗದಲ್ಲಿ ನಡೆಸಲಾಗುತ್ತಿದ್ದು, 8 ರಿಂದ 10ನೇ ತರಗತಿಯವರೆಗಿನ ವಿದ್ಯಾರ್ಥಿಗಳಿಗೆ ಮತ್ತು 1ರಿಂದ 7ನೇ ತರಗತಿಯ ವಿದ್ಯಾರ್ಥಿಗಳಿಗೆ ವಿವಿಧ ಸ್ಪರ್ಧೆಗಳನ್ನು ನಡೆಸಲಾಗುವುದು ಎಂದರು. ಅಲ್ಲದೆ ಕೊಡವ ಭಾಷೆಯ ಕತೆ, ಕವನ, ಚುಟುಕ, ಕಾದಂಬರಿ, ವೈಚಾರಿಕ ಲೇಖನ ಬರೆದಿರುವ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಕರ ಬಹುಮಾನಗಳನ್ನು ನೀಡಲಾಗುವುದು ಎಂದರು.

ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸ್ಪಷ್ಟ ನಿರ್ದೇಶನದಂತೆ ಮಕ್ಕಳಲ್ಲಿ ಜಾನಪದ ಕಲೆಗಳನ್ನು ಕಲಿಸಿ ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಹಾಗೂ ಶಾಲಾ ಮಕ್ಕಳನ್ನು ಒಂದೆಡೆ ಸೇರಿಸಿ ಜಾನಪದ ಉತ್ಸವವನ್ನು ನಡೆಸುವ ಉದ್ದೇಶದಿಂದ ಮಕ್ಕಳ ಕೊಡವ ಜನಪದ ಹಬ್ಬವನ್ನು ಏರ್ಪಡಿಸಲಾಗಿದೆ. ಈ ಉತ್ಸವದಲ್ಲಿ ಜಿಲ್ಲೆಯ ಹಲವಾರು ಶಾಲಾ ವಿದ್ಯಾರ್ಥಿ ಹಾಗೂ ವಿದ್ಯಾರ್ಥಿನಿಯರು ಪಾಲ್ಗೊಳ್ಳಲಿದ್ದು, ಕೊಡವ ಜಾನಪದ ಸಂಸ್ಕøತಿಯನ್ನು ಬಿಂಬಿಸಲಿದ್ದಾರೆ ಎಂದು ಬಿ.ಎಸ್.ತಮ್ಮಯ್ಯ ತಿಳಿಸಿದರು.

ಕಳೆದ 2ವರ್ಷಗಳಿಂದ ಜಿಲ್ಲೆಯ ವಿವಿಧ ಶಾಲೆಗಳಲ್ಲಿ ವಿದ್ಯಾರ್ಥಿ ಹಾಗೂ ವಿದ್ಯಾರ್ಥಿನಿಯರಿಗೆ ಕೊಡವ ಜನಪದ ನೃತ್ಯ, ಬಾಳೋಪಾಟ್ ನಂತಹ ಜಾನಪದ ಕಲೆಗಳ ಬಗ್ಗೆ “ಆಟ್-ಪಾಟ್ ಪಡಿಪು” ಕಾರ್ಯಕ್ರಮದ ಮೂಲಕ ತರಬೇತಿಯನ್ನು ನೀಡಲಾಗಿದೆ. ಹಾಗೇ ಪಡಿಪು ಕಾರ್ಯಕ್ರಮದಲ್ಲಿ ಪಾಲ್ಗೊಂಡ ವಿದ್ಯಾರ್ಥಿಗಳಿಗೆ ಸಾಂಪ್ರದಾಯಿಕ ಉಡುಪುಗಳಾದ ಸೀರೆ, ಕುಪ್ಯ ಚಾಲೆಗಳನ್ನು ಅಕಾಡೆಮಿ ವತಿಯಿಂದ ವಿತರಣೆ ಮಾಡಲಾಗಿದೆ ಎಂದರು. ಜ.10 ರಂದು ನಗರದ ಜನರಲ್ ತಿಮ್ಮಯ್ಯ ಪಬ್ಲಿಕ್ ಸ್ಕೂಲ್ ಆವರಣದಲ್ಲಿ ಕೊಡವ ಮಕ್ಕಡ ಕೂಟದ ಸಹಕಾರದೊಂದಿಗೆ ನಡೆಯಲಿರುವ ಕುಂಞಿಯಡ ಕೊಡವ ಜನಪದ ಸಾಂಸ್ಕøತಿಕ ನಮ್ಮೆ ಕಾರ್ಯಕ್ರಮವನ್ನು ಜಿಲ್ಲಾಧಿಕಾರಿಗಳಾದ ಡಾ. ರಿಚರ್ಡ್ ವಿನ್ಸೆಂಡ್ ಡಿಸೋಜ ಉದ್ಘಾಟಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ನಿರ್ದೇಶಕರಾದ ಕೆ.ಎ.ದಯಾನಂದ, ಮಡಿಕೇರಿಯ ಜನರಲ್ ತಿಮ್ಮಯ್ಯ ಪಬ್ಲಿಕ್ ಶಾಲೆಯ ಅಧ್ಯಕ್ಷರು ಹಾಗೂ ಮಡಿಕೇರಿ ಕೊಡವ ಸಮಾಜದ ಅಧ್ಯಕ್ಷರಾದ ಕೊಂಗಂಡ ಎಸ್.ದೇವಯ್ಯ, ಜನರಲ್ ತಿಮ್ಮಯ್ಯ ಪಬ್ಲಿಕ್ ಶಾಲೆಯ ಪ್ರಾಂಶುಪಾಲರಾದ ಕಲ್ಮಾಡಂಡ ಸರಸ್ವತಿ ಸುಬ್ಬಯ್ಯ, ಕೊಡವ ಮಕ್ಕಡ ಕೂಟದ ಅಧ್ಯಕ್ಷರಾದ ಬೊಳ್ಳಜಿರ ಬಿ. ಅಯ್ಯಪ್ಪ ಪಾಲ್ಗೊಳ್ಳಲಿದ್ದಾರೆ.

ಸಂಜೆ 4 ಗಂಟೆಗೆ ನಡೆಯುವ ಸಮಾರೋಪ ಸಮಾರಂಭದಲ್ಲಿ ವಿಧಾನಪರಿಷತ್ ಸದಸ್ಯರುಗಳಾದ ಶಾಂತೆಯಂಡ ವೀಣಾ ಅಚ್ಚಯ್ಯ, ಮಂಡೇಪಂಡ ಸುನಿಲ್ ಸುಬ್ರಮಣಿ, ಬೆಂಗಳೂರು ಬಸವ ಸಮಿತಿ ಅಧ್ಯಕ್ಷರಾದ ಅರವಿಂದ ಜತ್ತಿ, ಜನರಲ್ ತಿಮ್ಮಯ್ಯ ಪಬ್ಲಿಕ್ ಸ್ಕೂಲಿನ ಕಾರ್ಯಾಧ್ಯಕ್ಷರಾದ ಮಣವಟ್ಟಿರ ಈ.ಚಿಣ್ಣಪ್ಪ, ಕೊಡವ ಮಕ್ಕಡ ಕೂಟದ ಅಧ್ಯಕ್ಷರಾದ ಬೊಳ್ಳಜಿರ ಬಿ.ಅಯ್ಯಪ್ಪ, ಇವರುಗಳು ಮುಖ್ಯ ಅತಿಥಿಗಳಾಗಿ ಉಪಸ್ಥಿತರಿರುವರು ಎಂದು ಬಿ.ಎಸ್.ತಮ್ಮಯ್ಯ ತಿಳಿಸಿದರು.

ಸಮಾರೋಪ ಸಮಾರಂಭದಲ್ಲಿ ಪುಸ್ತಕ ಹಾಗೂ ಸಿ.ಡಿ. ಬಿಡುಗಡೆ ನಡೆಯಲಿದೆ. ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿಯ ಸದಸ್ಯರಾದ ಡಾ. ಎಂ.ಪಿ. ರೇಖಾ ಅವರ ಸಂಪಾದಕತ್ವದಲ್ಲಿ ಬಸವ ಸಮಿತಿ ಬೆಂಗಳೂರು ಇವರಿಂದ ಪ್ರಕಟಿತವಾದ “ವಚನ” ಕೊಡವಾನುವಾದ ಪುಸ್ತಕ, ಮದ್ರೀರ ಸಂಜು ಬೆಳ್ಯಪ್ಪ ಅವರಿಂದ ಕೊಡವ ಭಾಷೆಯಲ್ಲಿ ತರ್ಜುಮೆಗೊಂಡ ನಾಟಕ ಕೃತಿ “ತೆಳ್‍ಂಗ್‍ನ ಕಾವೇರಿ”, ಐತಿಚಂಡ ರಮೇಶ್ ಉತ್ತಪ್ಪ ವಿರಚಿತ ನಾಟಕ ಕೃತಿ “ಕುಡಿಕಾರ” ಹಾಗೂ ಮೊಣ್ಣಂಡ ಶೋಭಾ ಸುಬ್ಬಯ್ಯರವರ ಸಾಹಿತ್ಯ ರಚನೆಯಲ್ಲಿ ಮೂಡಿ ಬಂದಿರುವ “ಕೊಡವ ಕೀರ್ತನ ಮಾಲೆ ಶಾಸ್ತ್ರೀಯ ಪಾಟ್” ಸಿ.ಡಿ. ಬಿಡುಗಡೆ ನಡೆಯಲಿದೆ ತಮ್ಮಯ್ಯ ಮಾಹಿತಿ ನೀಡಿದರು.

ಸದಸ್ಯರಾದ ಮಾದೇಟಿರ ಬೆಳ್ಯಪ್ಪ ಮಾತನಾಡಿ “ಆಟ್ ಪಾಟ್ ಪಡಿಪು” ಕಾರ್ಯಕ್ರಮದ ಮೂಲಕ ವಿದ್ಯಾರ್ಥಿಗಳು ಅಭ್ಯಾಸ ಮಾಡಿರುವ ಕೊಡವ ಜಾನಪದ ಕಲೆಗಳನ್ನು ಉಳಿಸಿ ಬೆಳೆಸಿಕೊಂಡು ಹೋಗುವ ಅಗತ್ಯವಿದ್ದು, ಇದಕ್ಕೆ ಪೂರಕವಾಗಿ ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತಿದೆ ಎಂದು ತಿಳಿಸಿದರು. ಕುಂಞಿಯಡ ಕೊಡವ ಜನಪದ ಸಾಂಸ್ಕøತಿಕ ನಮ್ಮೆಯಲ್ಲಿ ವಿಚಾರಗೋಷ್ಠಿ ಹಾಗೂ ಕವಿಗೋಷ್ಠಿಗಳು ಕೂಡ ನಡೆಯಲಿವೆ ಎಂದರು.

ಸುದ್ದಿಗೋಷ್ಠಿಯಲ್ಲಿ ಕೊಡವ ಮಕ್ಕಡ ಕೂಟದ ಅಧ್ಯಕ್ಷರಾದ ಬೊಳ್ಳಜಿರ ಬಿ.ಅಯ್ಯಪ್ಪ, ಪ್ರಮುಖರಾದ ಕರುಣ್ ಕಾಳಯ್ಯ ಹಾಗೂ ಅಮ್ಮಾಟಂಡ ಮೇದಪ್ಪ ಉಪಸ್ಥಿತರಿದ್ದರು.

nkicmgkp

Comments

ಸೂಚನೆ : ಯಾವುದೇ ತೆರನಾದ ಧಾರ್ಮಿಕ, ರಾಜಕೀಯ ಮತ್ತು ವ್ಯಕ್ತಿ ನಿಂದನಾತ್ಮಕ ಪ್ರತಿಕ್ರಿಯೆಗಳನ್ನಾಗಲೀ, ಭಾರತ ಒಕ್ಕೂಟ ವ್ಯವಸ್ಥೆಯಡಿ ಬರುವ ಪ್ರದೇಶ, ಭಾಷೆ ಅಥವಾ ಸಂಸ್ಕೃತಿಯನ್ನು ತೆಗಳುವ ಪ್ರತಿಕ್ರಿಯೆಯನ್ನಾಗಲೀ, ಸಾಮಾಜಿಕ ಸ್ವಾಸ್ಥ್ಯದ ಮೇಲೆ ಪರಿಣಾಮ ಬೀರುವ ಅಸಭ್ಯ, ಅಶ್ಲೀಲ ಪ್ರತಿಕ್ರಿಯೆಯನ್ನಾಗಲೀ ಹಾಕಬಾರದಾಗಿ ವಿನಂತಿ. ನಿಮ್ಮ ಪ್ರತಿಕ್ರಿಯೆಗೆ ಆಯಾ ವ್ಯಕ್ತಿ ಸಂಪೂರ್ಣವಾಗಿ ಜವಾಬ್ದಾರರಾಗಿದ್ದು "ನ್ಯೂಸ್ ಕನ್ನಡ" ಬಳಗ ಜವಾಬ್ದಾರರಾಗಿರುವುದಿಲ್ಲ. ಅಲ್ಲದೆ ಇಂಥಹ ಪ್ರತಿಕ್ರಿಯೆಗಳು ಕಾನೂನಾತ್ಮಕವಾಗಿ ಅಪರಾಧವಾಗಿದ್ದು, ಸಂಬಧಪಟ್ಟ ಇಲಾಖೆ ಮಾಹಿತಿಯನ್ನು ಕೇಳಿದರೆ ನಿಮ್ಮ ಸಂಪೂರ್ಣ ಹೆಸರು ಮತ್ತು ಐ.ಪಿ ವಿಳಾಸವನ್ನು ಒದಗಿಸಲು "ನ್ಯೂಸ್ ಕನ್ನಡ" ಬದ್ದವಾಗಿರುತ್ತದೆ.

ದೋಷ ನಿವಾರಣೆಗಾಗಿ ಜ.15 ರಂದು ಭಾಗಮಂಡಲದಲ್ಲಿ ವಿಶೇಷ ಪೂಜೆ

ಮುಂದಿನ ಸುದ್ದಿ »

ಮುನ್ಸೂಚನೆ ನೀಡದೆ ಶುಲ್ಕ ಏರಿಕೆ: ಪ್ರಾದೇಶಿಕ ಸಾರಿಗೆ ಇಲಾಖೆಯ ವಿರುದ್ಧ ಪ್ರತಿಭಟನೆ

ಇತ್ತೀಚಿನ ಸುದ್ದಿಗಳು

ಸಿನೆಮಾ

  • ತನಗಿರುವ ಅಪರೂಪದ ಕಾಯಿಲೆಯನ್ನು ಬಹಿರಂಗಪಡಿಸಿದ ನಟ ಇರ್ಫಾನ್ ಖಾನ್!

    March 16, 2018

    ನ್ಯೂಸ್ ಕನ್ನಡ ವರದಿ-(16.3.18): ಬಾಲಿವುಡ್‌ನ‌ ಪ್ರತಿಭಾವಂತ ನಟ ಇರ್ಫಾನ್‌ ಖಾನ್‌ ಅವರು ತಮ್ಮನ್ನು ಬಾಧಿಸುತ್ತಿರುವ ಅತ್ಯಪರೂಪದ ಕಾಯಿಲೆ ಯಾವುದೆಂಬುದನ್ನು ಬಹಿರಂಗಪಡಿಸಿದ್ದಾರೆ. ತಾನು ನ್ಯೂರೋ ಎಂಡೋಕ್ರೈನ್‌ ಟ್ಯೂಮರ್‌ನಿಂದ ಬಳಲುತ್ತಿರುವುದಾಗಿ ಅವರು ತಿಳಿಸಿದ್ದಾರೆ. ಕೆಲ ದಿನಗಳ ಹಿಂದೆ ಇರ್ಫಾನ್‌ ಖಾನ್‌ ...

    Read More

ಹೆಚ್ಚಿನ ಸುದ್ದಿ

More

ನೆನಪಿನ ಸಂಚಿ

ಹೆಚ್ಚಿನ ಸುದ್ದಿ

More
Menu
×