Saturday October 21 2017

Follow on us:

Contact Us

ಕಾರವಾರ: ಪೊಲೀಸ್ ಹುತಾತ್ಮರ ಸ್ಮರಣೆ ಕಾರ್ಯಕ್ರಮ

ನ್ಯೂಸ್ ಕನ್ನಡ ವರದಿ-(21.10.17): ಕಾರವಾರ: ಕರ್ತವ್ಯದಲ್ಲಿದ್ದಾಗ ಮಡಿದ ಪೊಲೀಸ್ ಹುತಾತ್ಮರಿಗೆ ಶನಿವಾರ ಇಲ್ಲಿನ ಪೊಲೀಸ್ ಕವಾಯತು ಮೈದಾನದಲ್ಲಿ ನಡೆದ ‘ಪೊಲೀಸ್ ಹುತಾತ್ಮರ ದಿನ’ದ ಕಾರ್ಯಕ್ರಮದಲ್ಲಿ ಸ್ಮರಿಸಲಾಯಿತು. ನಗರದ ಪೊಲೀಸ್ ಕವಾಯತು ಮೈದಾನದಲ್ಲಿ ನಡೆದ ಕಾರ್ಯಕ್ರಮದಲ್ಲಿ, ದೇಶದಲ್ಲಿ ಕಳೆದ ಒಂದು ವರ್ಷದ ಅವಧಿಯಲ್ಲಿ ಮೃತಪಟ್ಟ ಪೊಲೀಸರಿಗೆ ಪುಷ್ಪಗುಚ್ಛ ಸಮರ್ಪಿಸಿ ಗೌರವ ಅರ್ಪಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಜಿಲ್ಲಾ ನ್ಯಾಯಾಧೀಶ ವಿ.ಎಸ್‌.ಧಾರವಾಡಕರ್, ದೇಶದ ಗಡಿಯಲ್ಲಿ ಸೈನಿಕರು ಕಾಯುವಂತೆ ನಾಡಿನ ಒಳಗೆ ಪೊಲೀಸರು ರಕ್ಷಣೆ ನೀಡುತ್ತಾರೆ. ಹಗಲು ರಾತ್ರಿ ಎನ್ನದೇ ಕರ್ತವ್ಯ ನಿರ್ವಹಿಸುವ ಅವರ ಸೇವೆ ಶ್ಲಾಘನೀಯ. ಪೊಲೀಸರು ಇದ್ದರೆ ಮಾತ್ರ ಶಾಂತಿ, ನೆಮ್ಮಸಿ ಸಾಧ್ಯ ಎಂದರು. ಉಪ ಪೊಲೀಸ್ ಉಪಾಧೀಕ್ಷಕ ಗೋಪಾಲ ಬ್ಯಾಕೋಡ್, ಅಕ್ಟೋಬರ್ 21, 1959ರಂದು ಚೀನಾದ ಗಡಿ ಭಾಗ ಲಡಾಖ್‌ನಲ್ಲಿ ನಡೆದ ಹೋರಾಟದಲ್ಲಿ 10 ಮಂದಿ ಭಾರತೀಯ ಪೊಲೀಸರು ಮೃತಪಟ್ಟ  ನೆನಪಿನಲ್ಲಿ ಈ ದಿನ ಆಚರಿಸಲಾಗುತ್ತಿದೆ ಎಂದು ವಿವರಿಸಿ, ಕಳೆದ ಒಂದು ವರ್ಷದ ಅವಧಿಯಲ್ಲಿ ಹುತಾತ್ಮರಾದ ಸಿಬ್ಬಂದಿ ಹೆಸರುಗಳನ್ನು ಹೇಳಿದರು. ಈ ವೇಳೆ ಡಿವೈಎಸ್ ಪಿ ಪ್ರಮೋದರಾವ್ ಸೇರಿದಂತೆ ಪೊಲೀಸ್ ಕುಟುಂಬದವರು, ಸಾರ್ವಜನಿಕರು, ಸಿಬ್ಬಂದಿ ಇದ್ದರು.

Comments

ಸೂಚನೆ : ಯಾವುದೇ ತೆರನಾದ ಧಾರ್ಮಿಕ, ರಾಜಕೀಯ ಮತ್ತು ವ್ಯಕ್ತಿ ನಿಂದನಾತ್ಮಕ ಪ್ರತಿಕ್ರಿಯೆಗಳನ್ನಾಗಲೀ, ಭಾರತ ಒಕ್ಕೂಟ ವ್ಯವಸ್ಥೆಯಡಿ ಬರುವ ಪ್ರದೇಶ, ಭಾಷೆ ಅಥವಾ ಸಂಸ್ಕೃತಿಯನ್ನು ತೆಗಳುವ ಪ್ರತಿಕ್ರಿಯೆಯನ್ನಾಗಲೀ, ಸಾಮಾಜಿಕ ಸ್ವಾಸ್ಥ್ಯದ ಮೇಲೆ ಪರಿಣಾಮ ಬೀರುವ ಅಸಭ್ಯ, ಅಶ್ಲೀಲ ಪ್ರತಿಕ್ರಿಯೆಯನ್ನಾಗಲೀ ಹಾಕಬಾರದಾಗಿ ವಿನಂತಿ. ನಿಮ್ಮ ಪ್ರತಿಕ್ರಿಯೆಗೆ ಆಯಾ ವ್ಯಕ್ತಿ ಸಂಪೂರ್ಣವಾಗಿ ಜವಾಬ್ದಾರರಾಗಿದ್ದು "ನ್ಯೂಸ್ ಕನ್ನಡ" ಬಳಗ ಜವಾಬ್ದಾರರಾಗಿರುವುದಿಲ್ಲ. ಅಲ್ಲದೆ ಇಂಥಹ ಪ್ರತಿಕ್ರಿಯೆಗಳು ಕಾನೂನಾತ್ಮಕವಾಗಿ ಅಪರಾಧವಾಗಿದ್ದು, ಸಂಬಧಪಟ್ಟ ಇಲಾಖೆ ಮಾಹಿತಿಯನ್ನು ಕೇಳಿದರೆ ನಿಮ್ಮ ಸಂಪೂರ್ಣ ಹೆಸರು ಮತ್ತು ಐ.ಪಿ ವಿಳಾಸವನ್ನು ಒದಗಿಸಲು "ನ್ಯೂಸ್ ಕನ್ನಡ" ಬದ್ದವಾಗಿರುತ್ತದೆ.

ಏಕದಿನ ಕ್ರಿಕೆಟ್ ಪಂದ್ಯಾಟ: ಶ್ರೀಲಂಕಾ ವಿರುದ್ಧ ಪಾಕಿಸ್ತಾನಕ್ಕೆ ಭರ್ಜರಿ ಜಯ

ಮುಂದಿನ ಸುದ್ದಿ »

ಬಿಜೆಪಿಗೆ ಭ್ರಷ್ಟರು ಬೇಕಾಗಿದ್ದಾರೆಯೇ ಹೊರತು ನನ್ನಂಥವರಲ್ಲ: ಪ್ರಮೋದ್ ಮುತಾಲಿಕ್

ಇತ್ತೀಚಿನ ಸುದ್ದಿಗಳು

ಸಿನೆಮಾ

  • ಜಬ್ಬಾರ್ ಎಂಬೋ ಜಬರ್ ದಸ್ತ್ ಶಕ್ತಿ ಮತ್ತು ಸ್ಫೂರ್ತಿ!

    January 9, 2018

    ಅಬ್ದುಲ್ ಜಬ್ಬಾರ್ ಪೊನ್ನೋಡಿ ಮತ್ತು ಸಹಕಲಾವಿದೆ ಮಂಜು ವರ್ಷಾ; ಈ ಇಬ್ಬರನ್ನೂ ನಾನು ಅಪ್ಪಿಕೊಂಡು, ಮುತ್ತಿಟ್ಟು ಶುಭ ಹಾರೈಸಿ ಈಗ ಚಿತ್ರೀಕರಣ ಪ್ರಾರಂಭಿಸೋಣ ಎಂದು ಹೇಳಿದ್ದೇ ಮುಹೂರ್ತ. ಚಿತ್ರೀಕರಣ ಆರಂಭವಾಯಿತು. ಕನ್ನಡ ಮತ್ತು ಇಂಗ್ಲೀಷ್ ಎರಡೂ ಭಾಷೆಗಳ ...

    Read More

ಹೆಚ್ಚಿನ ಸುದ್ದಿ

More

ನೆನಪಿನ ಸಂಚಿ

ಹೆಚ್ಚಿನ ಸುದ್ದಿ

More

ಭೂತಗನ್ನಡಿ

ಹೆಚ್ಚಿನ ಸುದ್ದಿ

More
Menu
×