Saturday June 10 2017

Follow on us:

Contact Us

ಮಲೇರಿಯಾ ಮಾಸಾಚರಣೆ ಅಂಗವಾಗಿ ಅಂತರ್ ಇಲಾಖಾ ಸಮನ್ವಯ ಸಮಿತಿ ಸಭೆ

ನ್ಯೂಸ್ ಕನ್ನಡ ವರದಿ-(10.06.17): ದಿನಾಂಕ: 09-06-2017 ರಂದು ಬೆಳಿಗ್ಗೆ 11-30 ಗಂಟೆಗೆ ಡಾ:ಹೆಚ್.ಆರ್. ಮಹಾದೇವ ಮಾನ್ಯ ಜಿಲ್ಲಾಧಿಕಾರಿಗಳು ಬೀದರ ರವರ ಅಧ್ಯಕ್ಷತೆಯಲ್ಲಿ ಜಿಲ್ಲಾಧಿಕಾರಿಗಳ ಕಾರ್ಯಾಲಯದ ಸಭಾಂಗಣದಲ್ಲಿ ಮಲೇರಿಯಾ ವಿರೋಧಿ ಮಾಸಾಚರಣೆಯ ಪ್ರಯುಕ್ತ ಅಂತರ ಇಲಾಖಾ ಅಧಿಕಾರಿಗಳ ಜಿಲ್ಲಾ ಮಟ್ಟದ ಸಮನ್ವಯ ಸಭೆಯನ್ನು ನಡೆಸಲಾಯಿತು. ಸಭೆಗೆ ಹಾಜರಾದ ಮಾನ್ಯ ಜಿಲ್ಲಾಧಿಕಾರಿಯವರಿಗೆ ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳಿಗೆ , ಆರೋಗ್ಯ ಇಲಾಖೆಯ ಜಿಲ್ಲಾ ಕಾರ್ಯಕ್ರಮ ಅಧಿಕಾರಿಗಳಿಗೆ , ಎಲ್ಲಾ ತಾಲೂಕಾ ಆರೋಗ್ಯ ಅಧಿಕಾರಿಯವರಿಗೆ ಮಾನ್ಯ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳಾದ ಡಾ: ಎಂ.ಎ. ಜಬ್ಬಾರ ರವರು ಸ್ವಾಗತ ಕೋರಿದರು.

ಮಲೇರಿಯಾ ವಿರೋಧಿ ಮಾಸಾಚರಣೆಯ ಕಾರ್ಯಕ್ರಮದ ಬಗ್ಗೆ ಡಾ. ಅನೀಲ ಚಿಂತಾಮಣಿ ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣಾಧಿಕಾರಿಗಳು, ಬೀದರ ರವರು ಮಾತನಾಡುತ್ತಾ ಈ ವರ್ಷದ ಘೋಷಣೆ:- “ಒಳಿತಿಗಾಗಿ ಮಲೇರಿಯಾ ಕೊನೆಗೊಳಿಸಿ” ಇದೆ ಎಂದು ತಿಳಿಸಿತ್ತಾ ಮಲೇರಿಯಾ ರೋಗ ಹರಡುವ ಬಗ್ಗೆ ಹಾಗೂ ಹರಡದಂತೆ ಮುನ್ನೆಚ್ಚರಿಕೆ ವಹಿಸುವ ಬಗ್ಗೆ ಸಭೆಗೆ ಮಾಹಿತಿ ನೀಡಿದರು ಮತ್ತು ಮಲೇರಿಯಾ ರೋಗವು 2010ನೇ ವರ್ಷದಿಂದ ಇಲ್ಲಿಯವರೆಗೆ ಅಂಕಿ ಅಂಶಗಳೊಂದಿಗೆ ಸಭೆಗೆ ಮಾಹಿತಿ ನೀಡುತ್ತಾ ಕ್ರಮೇಣವಾಗಿ ಪ್ರಕರಣಗಳ ಸಂಖ್ಯೆಯಲ್ಲಿ ಇಳಿಮುಖವಾಗಿರುತ್ತವೆ ಎಂದು ತಿಳಿಸಿದರು. 2010 ರಲ್ಲಿ 858 , 2011 ರಲ್ಲಿ 477 , 2012 ರಲ್ಲಿ 288 , 2013 ರಲ್ಲಿ 214 , 2014 ರಲ್ಲಿ 119, 2015 ರಲ್ಲಿ 126 , 2016 ರಲ್ಲಿ 74 , 2017 ಮೇ ತಿಂಗಳವರೆಗೆ 10 ಪ್ರಕರಣಗಳಿರುತ್ತವೆ.


ಭಾರತ ಸರ್ಕಾರ 2030ನೇ ಇಸ್ವಿಗೆ ಮಲೇರಿಯಾ ನಿವಾರಣೆ ಮಾಡುವ ಗುರಿ ಹೊಂದಿದ್ದು , ಕರ್ನಾಟಕ ಸರ್ಕಾರದ ಗುರಿ 2025ನೇ ಇಸ್ವಿಗೆ ಮಲೇರಿಯಾ ನಿವಾರಣಾ ಗುರಿಯನ್ನು ಹೊಂದಿದ್ದು ಅದರಲ್ಲಿ ಬೀದರ ಜಿಲ್ಲೆಯಲ್ಲಿ ಪ್ರಕರಣಗಳು ಅತೀ ಕಡಿಮೆ ಇದ್ದು 2018ನೇ ಸಾಲಿನಲ್ಲಿ ಮಲೇರಿಯಾ ಸೊನ್ನೆ ಪ್ರಕರಣಗಳು ಬರುವ ನಿಟ್ಟಿನಲ್ಲಿ ಗುರಿ ಹಮ್ಮಿಕೊಳ್ಳಲಾಗಿದೆಯೆಂದು ಸಭೆಯ ಗಮನಕ್ಕೆ ತರಲಾಯಿತು ಮತ್ತು ಜಿಲ್ಲೆಯ ಪ್ರತಿಯೊಂದು ಗ್ರಾಮದಲ್ಲಿ ರೋಗ ಬರದಂತೆ ಮುನ್ನೆಚ್ಚರಿಕೆ ಕ್ರಮವಾಗಿ ಆರೋಗ್ಯ ಕಾರ್ಯಕರ್ತರಿಂದ , ಆಶಾ ಕಾರ್ಯಕರ್ತರಿಂದ ಸೊಳ್ಳೆ ಉತ್ಪತ್ತಿ ತಾಣಗಳ ಸಮೀಕ್ಷೆ ಮಾಡಿ ನಿರ್ಮೂಲನೆ ಮಾಡಲು ಕ್ರಮ ಕೈಕೊಳ್ಳಲಾಗುತ್ತಿದೆ.

ಮಾನ್ಯ ಜಿಲ್ಲಾಧಿಕಾರಿಗಳು ಮಾತನಾಡುತ್ತಾ ಜಿಲ್ಲೆಯ ಜನಪ್ರತಿನಿಧಿಗಳ ಸಭೆ ಕರೆದು ಮಲೇರಿಯಾ ಕಾರ್ಯಕ್ರಮದ ಬಗ್ಗೆ ಮಾಹಿತಿ ನೀಡುವುದು ಮತ್ತು ನಗರ ಸಭೆ ಪಟ್ಟಣ ಪಂಚಾಯಿತಿ, ಗ್ರಾಮ ಪಂಚಾಯಿತಿಗಳು ಈ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಲೇರಿಯಾ ನಿರ್ಮೂಲನೆಗಾಗಿ ಎಲ್ಲಿಯೂ ಚರಂಡಿ ನೀರು ನಿಲ್ಲದಂತೆ ಸರಾಗವಾಗಿ ಹರಿದು ಹೋಗುವಂತೆ ಕ್ರಮ ಕೈಕೊಳ್ಳಲು ಸಂಬಂಧಪಟ್ಟ ಇಲಾಖೆಯವರಿಗೆ ಸೂಚಿಸಿದರು. ಬೀದರ ನಗರದಲ್ಲಿ ಪ್ರತಿಯೊಂದು ಓಣಿಯಲ್ಲಿ ಚರಂಡಿ ವ್ಯವಸ್ಥೆ ಸಂಪೂರ್ಣವಾಗಿ ಕೆಟ್ಟಿದ್ದು ನನ್ನ ಸ್ವತ: ಗಮನಕ್ಕೆ ಬಂದಿರುತ್ತದೆ . ಇದರಿಂದ ಜನರಿಗೆ ಸಾಂಕ್ರಾಮಿಕ ರೋಗಗಳು ಹರಡುವ ಸಂಭವ ಹೆಚ್ಚಾಗಿದ್ದು ಕೂಡಲೇ ನಗರ ಸಭೆಯವರು ಕ್ರಮ ಕೈಕೊಳ್ಳಲು ನಿರ್ದೇಶನ ನೀಡಿದರು ಮತ್ತು ತುರ್ತಾಗಿ ಜಿಲ್ಲಾ ಮಟ್ಟದ ಅಧಿಕಾರಿಗಳ ಹಾಗೂ ಜನಪ್ರತಿನಿಧಿಗಳ ಸಭೆಯನ್ನು ಆಯೋಜಿಸಲು ಜಿಲ್ಲಾ ಆರೋಗ್ಯ ಮತ್ತು ಕು.ಕ.ಅಧಿಕಾರಿಗಳು, ಬೀದರ ಇವರಿಗೆ ಸೂಚಿಸಿದರು. ವಂದನಾರ್ಪಣೆಯೊಂದಿಗೆ ಸಭೆಯು ಮುಕ್ತಾಯಗೊಳಿಸಲಾಯಿತು.

 

Comments

ಸೂಚನೆ : ಯಾವುದೇ ತೆರನಾದ ಧಾರ್ಮಿಕ, ರಾಜಕೀಯ ಮತ್ತು ವ್ಯಕ್ತಿ ನಿಂದನಾತ್ಮಕ ಪ್ರತಿಕ್ರಿಯೆಗಳನ್ನಾಗಲೀ, ಭಾರತ ಒಕ್ಕೂಟ ವ್ಯವಸ್ಥೆಯಡಿ ಬರುವ ಪ್ರದೇಶ, ಭಾಷೆ ಅಥವಾ ಸಂಸ್ಕೃತಿಯನ್ನು ತೆಗಳುವ ಪ್ರತಿಕ್ರಿಯೆಯನ್ನಾಗಲೀ, ಸಾಮಾಜಿಕ ಸ್ವಾಸ್ಥ್ಯದ ಮೇಲೆ ಪರಿಣಾಮ ಬೀರುವ ಅಸಭ್ಯ, ಅಶ್ಲೀಲ ಪ್ರತಿಕ್ರಿಯೆಯನ್ನಾಗಲೀ ಹಾಕಬಾರದಾಗಿ ವಿನಂತಿ. ನಿಮ್ಮ ಪ್ರತಿಕ್ರಿಯೆಗೆ ಆಯಾ ವ್ಯಕ್ತಿ ಸಂಪೂರ್ಣವಾಗಿ ಜವಾಬ್ದಾರರಾಗಿದ್ದು "ನ್ಯೂಸ್ ಕನ್ನಡ" ಬಳಗ ಜವಾಬ್ದಾರರಾಗಿರುವುದಿಲ್ಲ. ಅಲ್ಲದೆ ಇಂಥಹ ಪ್ರತಿಕ್ರಿಯೆಗಳು ಕಾನೂನಾತ್ಮಕವಾಗಿ ಅಪರಾಧವಾಗಿದ್ದು, ಸಂಬಧಪಟ್ಟ ಇಲಾಖೆ ಮಾಹಿತಿಯನ್ನು ಕೇಳಿದರೆ ನಿಮ್ಮ ಸಂಪೂರ್ಣ ಹೆಸರು ಮತ್ತು ಐ.ಪಿ ವಿಳಾಸವನ್ನು ಒದಗಿಸಲು "ನ್ಯೂಸ್ ಕನ್ನಡ" ಬದ್ದವಾಗಿರುತ್ತದೆ.

ರಾಣಿಬೆನ್ನೂರು ಲಯನ್ಸ್ ಶಾಲೆಯಲ್ಲಿ ಉಚಿತ ದಂತ ತಪಾಸಣೆ ಮತ್ತು ಚಿಕಿತ್ಸಾ ಶಿಬಿರ

ಮುಂದಿನ ಸುದ್ದಿ »

ಪಾದೂರು ಪೈಪ್‍ಲೈನ್ ಸಂತ್ರಸ್ಥರಿಗೆ ಪರಿಹಾರ ವಿತರಣೆ

ಇತ್ತೀಚಿನ ಸುದ್ದಿಗಳು

ಸಿನೆಮಾ

  • ತನಗಿರುವ ಅಪರೂಪದ ಕಾಯಿಲೆಯನ್ನು ಬಹಿರಂಗಪಡಿಸಿದ ನಟ ಇರ್ಫಾನ್ ಖಾನ್!

    March 16, 2018

    ನ್ಯೂಸ್ ಕನ್ನಡ ವರದಿ-(16.3.18): ಬಾಲಿವುಡ್‌ನ‌ ಪ್ರತಿಭಾವಂತ ನಟ ಇರ್ಫಾನ್‌ ಖಾನ್‌ ಅವರು ತಮ್ಮನ್ನು ಬಾಧಿಸುತ್ತಿರುವ ಅತ್ಯಪರೂಪದ ಕಾಯಿಲೆ ಯಾವುದೆಂಬುದನ್ನು ಬಹಿರಂಗಪಡಿಸಿದ್ದಾರೆ. ತಾನು ನ್ಯೂರೋ ಎಂಡೋಕ್ರೈನ್‌ ಟ್ಯೂಮರ್‌ನಿಂದ ಬಳಲುತ್ತಿರುವುದಾಗಿ ಅವರು ತಿಳಿಸಿದ್ದಾರೆ. ಕೆಲ ದಿನಗಳ ಹಿಂದೆ ಇರ್ಫಾನ್‌ ಖಾನ್‌ ...

    Read More

ಹೆಚ್ಚಿನ ಸುದ್ದಿ

More

ನೆನಪಿನ ಸಂಚಿ

ಹೆಚ್ಚಿನ ಸುದ್ದಿ

More
Menu
×