Wednesday October 11 2017

Follow on us:

Contact Us

ಮಂಚಿ: ಪಂಚ ವಾರ್ಷಿಕೋತ್ಸವ ಪ್ರಯುಕ್ತ ಬೃಹತ್ ರಕ್ತದಾನ ಶಿಬಿರ

ನ್ಯೂಸ್ ಕನ್ನಡ ವರದಿ-(11.10.17): ಬದ್ರಿಯಾ ಯಂಗ್ ಮೆನ್ಸ್ ಅಸೋಶಿಯೇಷನ್ ಮಂಚಿ ಕಯ್ಯೂರು ಇದರ ಪಂಚ ವಾರ್ಷಿಕೋತ್ಸವದ ಪ್ರಯುಕ್ತ ಬ್ಲಡ್ ಹೆಲ್ಪ್ ಲೈನ್ ಕರ್ನಾಟಕ (ರಿ) ಹಾಗೂ ಲಯನ್ಸ್ ಕ್ಲಬ್ ಕೊಳ್ನಾಡು ಸಾಲೆತ್ತೂರು ಇದರ ಜಂಟಿ ಆಶ್ರಯದಲ್ಲಿ ವೆನ್ಲಾಕ್ ಆಸ್ಪತ್ರೆ ಮಂಗಳೂರು ಇದರ ಸಹಯೋಗದಲ್ಲಿ ಬ್ರಹತ್ ಸಾರ್ವಜನಿಕ ರಕ್ತದಾನ ಶಿಬಿರವು ದಿನಾಂಕ 08 ಅಕ್ಟೋಬರ್ 2017 ನೇ ಭಾನುವಾರದಂದು ಬೆಳಿಗ್ಗೆ 9:30 ರಿಂದ ಮಧ್ಯಾಹ್ನ 1:30 ರ ತನಕ ಲಯನ್ಸ್ ಕ್ಲಬ್ ಮಂಚಿಕಟ್ಟೆಯಲ್ಲಿ ನಡೆಯಿತು.

ಸಭಾ ಕಾರ್ಯಕ್ರಮವನ್ನು ಬದ್ರಿಯಾ ಯಂಗ್ ಮೆನ್ಸ್ ಅಸೋಶಿಯೇಷನ್ ಮಂಚಿ ಕಯ್ಯೂರು ಇದರ ಅಧ್ಯಕ್ಷರಾದ ಜನಾಬ್ D.N.ಫಾರೂಕ್ ರವರ ಘನ ಅಧ್ಯಕ್ಷತೆಯಲ್ಲಿ ,ಕೊಳ್ನಾಡು ಮಸೀದಿಯ ಖತೀಬರಾದ ಜನಾಬ್ ಸಾಲಿಂ ಸಅದಿ ಅಲ್ ಅಫ್ಳಲಿ ಮಂಚಿ ಇವರು ದುವಾ ಆಶಿರ್ವಚನೆಯೊಂದಿಗೆ ಉದ್ಘಾಟಿಸಿದರು. SDPI ದಕ್ಷಿಣ ಕನ್ನಡ ಜಿಲ್ಲಾ ಸಮಿತಿಯ ಕಾರ್ಯದರ್ಶಿಯಾದ ಜನಾಬ್ ಅಶ್ರಫ್ ಮಂಚಿ ಇವರು ಪ್ರಾಸ್ತಾವಿಕ ಭಾಷಣ ಮಾಡಿ ರಕ್ತದಾನದ ಮಹತ್ವ ವಿವರಿಸಿದರು.

ಲಯನ್ಸ್ ರೇಮಂಡ್ ರೊಝಾರಿಯೋ,ಲಯನ್ ಗೋಪಾಲ್ ಆಚಾರ್ಯ,MD ಮಂಚಿ, ಕುಮಾರ್ ಕಯ್ಯೂರು,ಬದ್ರುದ್ದೀನ್ ಕಯ್ಯೂರು,ಮುಹಮ್ಮದ್ ಮಂಚಿ,ಇಬ್ರಾಹಿಂ GM,,ಆಸಿಫ್ CH,ಹನೀಫ್ ಮಂಚಿ,AK ಸುಲೈಮಾನ್,ಗಫ್ಫಾರ್ ಕುಕ್ಕಾಜೆ ಹಾಗು ಬ್ಲಡ್ ಹೆಲ್ಪ್ ಲೈನ್ ಕರ್ನಾಟಕದ ಅಡ್ಮೀನ್ ಗಳಾದ ಮುಸ್ತಫ ಅಡ್ಡೂರು.ಸತ್ತಾರ್ ಕ್ರಷ್ಣಾಪುರ.ಅಶ್ರಫ್ ಕಲ್ಕಟ್ಟ ಕಾರ್ಯಕಮದಲ್ಲಿ ಪಾಲ್ಗೊಂಡಿದ್ದರು.

ಈ ಸಂದರ್ಭದಲ್ಲಿ ಜನಾಬ್ ಅಶ್ರಫ್ ಮಂಚಿರವರು ಬದ್ರಿಯಾ ಯಂಗ್ ಮೆನ್ಸ್ ಅಸೋಶಿಯೇಷನ್ ಪರವಾಗಿ ಬ್ಲಡ್ ಹೆಲ್ಪ್ ಲೈನ್ ಕರ್ನಾಟಕ (ರಿ) ತಂಡಕ್ಕೆ ಸ್ಮರಣಿಕೆ ನೀಡಿ ಗೌರವಿಸಿದರು.ಅಲ್ಲದೇ ರಕ್ತ ಪೂರೈಸುವಲ್ಲಿ ತನ್ನ ನಿಸ್ವಾರ್ಥ ಸೇವೆಗಾಗಿ ಬ್ಲಡ್ ಹೆಲ್ಪ್ ಲೈನ್ ಕರ್ನಾಟಕ (ರಿ) ಇದರ ಅಡ್ಮಿನ್ ಫೈಝಲ್ ಮಂಚಿ ಇವರನ್ನು ಅಸೋಸಿಯೇಷನ್ ಪರವಾಗಿ ಸ್ಮರಣಿಕೆ ನೀಡಿ ಗೌರವಿಸಲಾಯಿತು.

ರಕ್ತ ದಾನ ಶಿಬಿರದಲ್ಲಿ 43 ಜನರು ಪಾಲ್ಗೊಂಡು ರಕ್ತದಾನ ಮಾಡಿದರು.ದಾನಿಗಳಿಂದ ರಕ್ತ ಸಂಗ್ರಹಿಸುವಲ್ಲಿ ವೆನ್ಲಾಕ್ ಆಸ್ಪತ್ರೆ ಮಂಗಳೂರು ಬ್ಲಡ್ ಬ್ಯಾಂಕ್ ಅಧಿಕಾರಿಗಳು ಹಾಗೂ ಸಿಬ್ಬಂದಿ ವರ್ಗದವರು ಸಹಕರಿಸಿದರು. ರಕ್ತ ದಾನ ಮಾಡಿದ ಸರ್ವ ಸಹೃದಯೀ ದಾನಿಗಳಿಗೂ,ಪ್ರತ್ಯಕ್ಷವಾಗಿ ಹಾಗೂ ಪರೋಕ್ಷವಾಗಿ ಸಹಕರಿಸಿದ ಪ್ರತಿಯೋರ್ವರಿಗೂ ಹಾಗೂ ಕಾರ್ಯಕ್ರಮದ ಯಶಸ್ಸಿಗಾಗಿ ಹಗಲಿರುಳು ದುಡಿದ ಎಲ್ಲಾ ಕಾರ್ಯಕರ್ತರಿಗೂ,ಸಂಘಟಕರು ಕೃತಜ್ಞತೆಗಳನ್ನು ತಿಳಿಸಿದ್ದಾರೆ.

Comments

ಸೂಚನೆ : ಯಾವುದೇ ತೆರನಾದ ಧಾರ್ಮಿಕ, ರಾಜಕೀಯ ಮತ್ತು ವ್ಯಕ್ತಿ ನಿಂದನಾತ್ಮಕ ಪ್ರತಿಕ್ರಿಯೆಗಳನ್ನಾಗಲೀ, ಭಾರತ ಒಕ್ಕೂಟ ವ್ಯವಸ್ಥೆಯಡಿ ಬರುವ ಪ್ರದೇಶ, ಭಾಷೆ ಅಥವಾ ಸಂಸ್ಕೃತಿಯನ್ನು ತೆಗಳುವ ಪ್ರತಿಕ್ರಿಯೆಯನ್ನಾಗಲೀ, ಸಾಮಾಜಿಕ ಸ್ವಾಸ್ಥ್ಯದ ಮೇಲೆ ಪರಿಣಾಮ ಬೀರುವ ಅಸಭ್ಯ, ಅಶ್ಲೀಲ ಪ್ರತಿಕ್ರಿಯೆಯನ್ನಾಗಲೀ ಹಾಕಬಾರದಾಗಿ ವಿನಂತಿ. ನಿಮ್ಮ ಪ್ರತಿಕ್ರಿಯೆಗೆ ಆಯಾ ವ್ಯಕ್ತಿ ಸಂಪೂರ್ಣವಾಗಿ ಜವಾಬ್ದಾರರಾಗಿದ್ದು "ನ್ಯೂಸ್ ಕನ್ನಡ" ಬಳಗ ಜವಾಬ್ದಾರರಾಗಿರುವುದಿಲ್ಲ. ಅಲ್ಲದೆ ಇಂಥಹ ಪ್ರತಿಕ್ರಿಯೆಗಳು ಕಾನೂನಾತ್ಮಕವಾಗಿ ಅಪರಾಧವಾಗಿದ್ದು, ಸಂಬಧಪಟ್ಟ ಇಲಾಖೆ ಮಾಹಿತಿಯನ್ನು ಕೇಳಿದರೆ ನಿಮ್ಮ ಸಂಪೂರ್ಣ ಹೆಸರು ಮತ್ತು ಐ.ಪಿ ವಿಳಾಸವನ್ನು ಒದಗಿಸಲು "ನ್ಯೂಸ್ ಕನ್ನಡ" ಬದ್ದವಾಗಿರುತ್ತದೆ.

ವಿಜಯಪುರ: ಯುವಕನಿಗೆ ಚೂರಿ ಇರಿತ

ಮುಂದಿನ ಸುದ್ದಿ »

6 ದಿನಗಳ ಹೆಣ್ಣುಮಗುವನ್ನು ಕಲ್ಲೆಸೆದು ಕೊಂದ ಹೆತ್ತವರು!

ಇತ್ತೀಚಿನ ಸುದ್ದಿಗಳು

ಸಿನೆಮಾ

  • ತನಗಿರುವ ಅಪರೂಪದ ಕಾಯಿಲೆಯನ್ನು ಬಹಿರಂಗಪಡಿಸಿದ ನಟ ಇರ್ಫಾನ್ ಖಾನ್!

    March 16, 2018

    ನ್ಯೂಸ್ ಕನ್ನಡ ವರದಿ-(16.3.18): ಬಾಲಿವುಡ್‌ನ‌ ಪ್ರತಿಭಾವಂತ ನಟ ಇರ್ಫಾನ್‌ ಖಾನ್‌ ಅವರು ತಮ್ಮನ್ನು ಬಾಧಿಸುತ್ತಿರುವ ಅತ್ಯಪರೂಪದ ಕಾಯಿಲೆ ಯಾವುದೆಂಬುದನ್ನು ಬಹಿರಂಗಪಡಿಸಿದ್ದಾರೆ. ತಾನು ನ್ಯೂರೋ ಎಂಡೋಕ್ರೈನ್‌ ಟ್ಯೂಮರ್‌ನಿಂದ ಬಳಲುತ್ತಿರುವುದಾಗಿ ಅವರು ತಿಳಿಸಿದ್ದಾರೆ. ಕೆಲ ದಿನಗಳ ಹಿಂದೆ ಇರ್ಫಾನ್‌ ಖಾನ್‌ ...

    Read More

ಹೆಚ್ಚಿನ ಸುದ್ದಿ

More

ನೆನಪಿನ ಸಂಚಿ

ಹೆಚ್ಚಿನ ಸುದ್ದಿ

More
Menu
×