Saturday August 12 2017

Follow on us:

Contact Us

ಸರ್ವಕಾಲೇಜು ವಿದ್ಯಾರ್ಥಿ ಸಂಘದ ರಾಜ್ಯ ಕಾರ್ಯದರ್ಶಿಯಾಗಿ ನದೀಮ್ ಅಹ್ಮದ್ ಆಯ್ಕೆ

ನ್ಯೂಸ್ ಕನ್ನಡ ವರದಿ-(12.08.17): 2017-18ನೇ ಸಾಲಿನ ಸರ್ವ ಕಾಲೇಜು ವಿದ್ಯಾರ್ಥಿ ಸಂಘ(ರಿ) ರಾಜ್ಯ ಸಂಘಟನಾ ಕಾರ್ಯದರ್ಶಿಯಾಗಿ ಮಂಗಳೂರಿನ ಸಂತ ಅಲೋಶಿಯಸ್ ಕಾಲೇಜಿನ ವಿದ್ಯಾರ್ಥಿ ನದೀಮ್ ಅಹ್ಮದ್ ಆಯ್ಕೆಯಾಗಿದ್ದಾರೆ. ಇಂದು ಮಂಗಳೂರಿನ ಪುರಭವನದಲ್ಲಿ ನಡೆದ ಮತದಾನ ಪ್ರಕ್ರಿಯೆಯಲ್ಲಿ ನದೀಮ್ ಅಹ್ಮದ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ನದೀಮ್ ಅಹ್ಮದ್ ಈ ಮುಂಚೆ ಸರ್ವಕಾಲೇಜು ವಿದ್ಯಾರ್ಥಿ ಸಂಘದ 2016-17ನೇ ಸಾಲಿನ ಶೈಕ್ಷಣಿಕ ವರ್ಷದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಅಧ್ಯಕ್ಷರಾಗಿ ಆಯ್ಕೆಯಾಗಿದ್ದರು. ಈ ವೇಳೆ ನೇತ್ರಾವತಿ ನದಿ ತಿರುವು ಹೋರಾಟ, ಕರಾವಳಿಯ ಪುರಾತನ ಮತ್ತು ಪ್ರಸಿದ್ಧ ಕ್ರೀಡೆಯಾಗಿರುವ ಕಂಬಳ ನಿಷೇಧದ ವಿರುದ್ಧದ ಹೋರಾಟ, ಬಡ ವಿದ್ಯಾರ್ಥಿಗಳಿಗೆ ಸಹಾಯ ಮುಂತಾದ ಕಾರ್ಯಗಳಲ್ಲಿ ತಮ್ಮನ್ನು ತಾವು ಸಕ್ರಿಯವಾಗಿ ತೊಡಗಿಸಿಕೊಂಡಿದ್ದರು.

ಇಂದು ಮಂಗಳೂರಿನ ಪುರಭವನದಲ್ಲಿ ಸರ್ವ ಕಾಲೇಜು ವಿದ್ಯಾರ್ಥಿ ಸಂಘದ ಪದಾಧಿಕಾರಿಗಳ ಆಯ್ಕೆಯ ಮತದಾನ ಪ್ರಕ್ರಿಯೆಯಲ್ಲಿ ನದೀಮ್ ಅಹ್ಮದ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಇವರು ನಝೀರ್ ಅಹ್ಮದ್ ಬಾವಾ ಮತ್ತು ಮುಮ್ತಾಝ್ ಅಹ್ಮದ್ ದಂಪತಿಗಳ ಪುತ್ರ.

Comments

ಸೂಚನೆ : ಯಾವುದೇ ತೆರನಾದ ಧಾರ್ಮಿಕ, ರಾಜಕೀಯ ಮತ್ತು ವ್ಯಕ್ತಿ ನಿಂದನಾತ್ಮಕ ಪ್ರತಿಕ್ರಿಯೆಗಳನ್ನಾಗಲೀ, ಭಾರತ ಒಕ್ಕೂಟ ವ್ಯವಸ್ಥೆಯಡಿ ಬರುವ ಪ್ರದೇಶ, ಭಾಷೆ ಅಥವಾ ಸಂಸ್ಕೃತಿಯನ್ನು ತೆಗಳುವ ಪ್ರತಿಕ್ರಿಯೆಯನ್ನಾಗಲೀ, ಸಾಮಾಜಿಕ ಸ್ವಾಸ್ಥ್ಯದ ಮೇಲೆ ಪರಿಣಾಮ ಬೀರುವ ಅಸಭ್ಯ, ಅಶ್ಲೀಲ ಪ್ರತಿಕ್ರಿಯೆಯನ್ನಾಗಲೀ ಹಾಕಬಾರದಾಗಿ ವಿನಂತಿ. ನಿಮ್ಮ ಪ್ರತಿಕ್ರಿಯೆಗೆ ಆಯಾ ವ್ಯಕ್ತಿ ಸಂಪೂರ್ಣವಾಗಿ ಜವಾಬ್ದಾರರಾಗಿದ್ದು "ನ್ಯೂಸ್ ಕನ್ನಡ" ಬಳಗ ಜವಾಬ್ದಾರರಾಗಿರುವುದಿಲ್ಲ. ಅಲ್ಲದೆ ಇಂಥಹ ಪ್ರತಿಕ್ರಿಯೆಗಳು ಕಾನೂನಾತ್ಮಕವಾಗಿ ಅಪರಾಧವಾಗಿದ್ದು, ಸಂಬಧಪಟ್ಟ ಇಲಾಖೆ ಮಾಹಿತಿಯನ್ನು ಕೇಳಿದರೆ ನಿಮ್ಮ ಸಂಪೂರ್ಣ ಹೆಸರು ಮತ್ತು ಐ.ಪಿ ವಿಳಾಸವನ್ನು ಒದಗಿಸಲು "ನ್ಯೂಸ್ ಕನ್ನಡ" ಬದ್ದವಾಗಿರುತ್ತದೆ.

ಉತ್ತರಪ್ರದೇಶ: ಆಕ್ಸಿಜನ್ ಇಲ್ಲದೇ ಪರದಾಡುತ್ತಿದ್ದ ಹಲವು ಮಕ್ಕಳನ್ನು ರಕ್ಷಿಸಿದ ಡಾ. ಕಫೀಲ್ ಅಹ್ಮದ್

ಮುಂದಿನ ಸುದ್ದಿ »

“ಎಸ್ ಕೆ ಪಿ ಎ” ಕಾಪು ವಲಯದ ವತಿಯಿಂದ ಕಾಪು ಪ್ರೆಸ್ ಕ್ಲಬ್ ಅಧ್ಯಕ್ಷರಿಗೆ ಸನ್ಮಾನ

ಸಿನೆಮಾ

ಹೆಚ್ಚಿನ ಸುದ್ದಿ

More

ನೆನಪಿನ ಸಂಚಿ

ಹೆಚ್ಚಿನ ಸುದ್ದಿ

More

ಭೂತಗನ್ನಡಿ

ಹೆಚ್ಚಿನ ಸುದ್ದಿ

More
Menu
×