Saturday January 7 2017

Follow on us:

Contact Us
2

ಪರೀಕ್ಷೆಗೆ ಪ್ರವೇಶ ಪತ್ರ ನೀಡುವಂತೆ ಆಗ್ರಹಿಸಿ ವಿದ್ಯಾರ್ಥಿಗಳಿಂದ ಬಿ.ಇ.ಓ ಕಚೇರಿ ಮುಂದೆ ಧರಣಿ

ನ್ಯೂಸ್ ಕನ್ನಡ ವರದಿ (7-1-17): ಮುಂಡಗೋಡ: ಲೊಯೋಲಾ ಕೇಂದ್ರಿಯ ವಿದ್ಯಾಲಯದ 21 ವಿದ್ಯಾರ್ಥಿಗಳು ಶುಕ್ರವಾರ ಮುಂಡಗೋಡದ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಯ ಮುಂದೆ ಪ್ರತಿಭಟನೆ ನಡೆಸಿ, ತಮಗೆ ನವೋದಯ ಪ್ರವೇಶ ಪರೀಕ್ಷೆಗೆ ಪ್ರವೇಶ ಪತ್ರ ನೀಡುವಂತೆ ಆಗ್ರಹಿಸಿ ಧರಣಿ ಕುಳಿತರು.

ಧರಣಿ ಕುಳಿತ ವಿದ್ಯಾರ್ಥಿಗಳು ಬೇಕೆ ಬೇಕು ನ್ಯಾಯಾ ಬೇಕು, ಅನ್ಯಾಯವಾದ ವಿದ್ಯಾರ್ಥಿಗಳಿಗೆ ನವೋದಯ ಪ್ರವೇಶ ಪರೀಕ್ಷೆಗೆ ಪ್ರವೇಶ ಪತ್ರ ನೀಡಬೇಕು ಎಂದು ಘೋಷಣೆ ಕೂಗುತ್ತಿದ್ದರು. ಧರಣಿ ಸಂದರ್ಭದಲ್ಲಿ ಮೂರು ಮಕ್ಕಳು ಅಸ್ವಸ್ಥರಾದ ಹಿನ್ನೆಲೆಯಲ್ಲಿ ಮುಂಡಗೋಡ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಂಡರು. ನಂತರ ಪಾಲಕರು ಜಿಲ್ಲಾಧಿಕಾರಿಗಳಿಗೆ ಮತ್ತು ಶಿಕ್ಷಣ ಇಲಾಖೆಯ ಆಯುಕ್ತರಿಗೆ ಮನವಿ ಕಳಿಸಿದರು.

ಮನವಿಯಲ್ಲಿ ಲೊಯೋಲಾ ಕೇಂದ್ರೀಯ ವಿದ್ಯಾಲಯದಿಂದ ನವೋದಯ ಪ್ರವೇಶ ಪರೀಕ್ಷೆಯ ಸಲುವಾಗಿ 5ನೇ ತರಗತಿಯ 21 ಮಕ್ಕಳ ಪ್ರವೇಶ ಅರ್ಜಿಯನ್ನು ನಿಗದಿತ ಸಮಯಕ್ಕೆ ಕ್ಷೇತ್ರ ಶಿಕ್ಷಣಾಧಿಕಾರಿಗಳು ಮುಂಡಗೋಡರವರ ಕಚೇರಿಗೆ ಸಲ್ಲಿಸಿದ್ದು, ಅವರ ಬೇಜವಾಬ್ದಾರಿಯಿಂದ 21 ಮಕ್ಕಳ ಅರ್ಜಿಯನ್ನು ಜವಾಹರ ನವೋದಯ ಪ್ರಾಧಿಕಾರಕ್ಕೆ ಸಲ್ಲಿಸದೇ ತಮ್ಮಲ್ಲಿಯೇ ಇಟ್ಟುಕೊಂಡು ಮಕ್ಕಳಿಗೆ ಪ್ರವೇಶ ಪರೀಕ್ಷೆಯಿಂದ ವಂಚಿತರನ್ನಾಗಿ ಮಾಡಿರುತ್ತಾರೆ. ಪರೀಕ್ಷೆಯು ಇದೇ ತಿಂಗಳ 8ರಂದು ಇದ್ದು, ತಮ್ಮ ವಿಶೇಷ ಅಧಿಕಾರವನ್ನು ಚಲಾಯಿಸಿ ಮಕ್ಕಳಿಗೆ ಪರೀಕ್ಷೆ ಬರೆಯಲು ಅವಕಾಶ ಮಾಡಿಕೊಡಬೇಕು ಎಂದು ತಿಳಿಸಲಾಗಿದೆ.

nkrmbhap

Comments

ಸೂಚನೆ : ಯಾವುದೇ ತೆರನಾದ ಧಾರ್ಮಿಕ, ರಾಜಕೀಯ ಮತ್ತು ವ್ಯಕ್ತಿ ನಿಂದನಾತ್ಮಕ ಪ್ರತಿಕ್ರಿಯೆಗಳನ್ನಾಗಲೀ, ಭಾರತ ಒಕ್ಕೂಟ ವ್ಯವಸ್ಥೆಯಡಿ ಬರುವ ಪ್ರದೇಶ, ಭಾಷೆ ಅಥವಾ ಸಂಸ್ಕೃತಿಯನ್ನು ತೆಗಳುವ ಪ್ರತಿಕ್ರಿಯೆಯನ್ನಾಗಲೀ, ಸಾಮಾಜಿಕ ಸ್ವಾಸ್ಥ್ಯದ ಮೇಲೆ ಪರಿಣಾಮ ಬೀರುವ ಅಸಭ್ಯ, ಅಶ್ಲೀಲ ಪ್ರತಿಕ್ರಿಯೆಯನ್ನಾಗಲೀ ಹಾಕಬಾರದಾಗಿ ವಿನಂತಿ. ನಿಮ್ಮ ಪ್ರತಿಕ್ರಿಯೆಗೆ ಆಯಾ ವ್ಯಕ್ತಿ ಸಂಪೂರ್ಣವಾಗಿ ಜವಾಬ್ದಾರರಾಗಿದ್ದು "ನ್ಯೂಸ್ ಕನ್ನಡ" ಬಳಗ ಜವಾಬ್ದಾರರಾಗಿರುವುದಿಲ್ಲ. ಅಲ್ಲದೆ ಇಂಥಹ ಪ್ರತಿಕ್ರಿಯೆಗಳು ಕಾನೂನಾತ್ಮಕವಾಗಿ ಅಪರಾಧವಾಗಿದ್ದು, ಸಂಬಧಪಟ್ಟ ಇಲಾಖೆ ಮಾಹಿತಿಯನ್ನು ಕೇಳಿದರೆ ನಿಮ್ಮ ಸಂಪೂರ್ಣ ಹೆಸರು ಮತ್ತು ಐ.ಪಿ ವಿಳಾಸವನ್ನು ಒದಗಿಸಲು "ನ್ಯೂಸ್ ಕನ್ನಡ" ಬದ್ದವಾಗಿರುತ್ತದೆ.

ಸಂಸದನ ದುರ್ವರ್ತನೆ ಖಂಡಿಸಿ ವೈದ್ಯರಿಂದ ಪ್ರತಿಭಟನೆ

ಮುಂದಿನ ಸುದ್ದಿ »

ಅರಣ್ಯ ಹಕ್ಕು ಮಸೂದೆ ಜಾರಿ : ಒಂದು ತಿಂಗಳ ಗಡುವು ನೀಡಿದ ಬುಡಕಟ್ಟು ಕೃಷಿಕರ ಸಂಘ

ಸಿನೆಮಾ

 • 3

  ನನಗೂ ತುಳು ಸಿನಿಮಾದಲ್ಲಿ ನಟಿಸುವ ಆಸೆ: ಶಿವರಾಜ್ ಕುಮಾರ್

  January 19, 2017

  – ಶಫೀ ಉಚ್ಚಿಲ ನ್ಯೂಸ್ ಕನ್ನಡ ವರದಿ (19-1-17): ಕಾಪು: ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಅಭಿನಯಿಸುತ್ತಿರುವ ಟಗರು ಚಿತ್ರದ ಮೊದಲ ಹಂತದ ಚಿತ್ರೀಕರಣ ಮುಗಿಸಿರುವ ‘ಟಗರು’ ತಂಡ ಎರಡನೇ ಹಂತವನ್ನು ಕಾಪು ಸಮೀಪದ ಉಚ್ಚಿಲದಲ್ಲಿ ಚಿತ್ರೀಕರಿಸುತ್ತಿದ್ದು, ...

  Read More
 • Chennai-Express-First-Look-tbwm

  ಚೆನ್ನೈ ಎಕ್ಸ್ ಪ್ರೆಸ್ ನಿರ್ಮಾಪಕನ ವಿರುದ್ಧ ಅತ್ಯಾಚಾರ ಆರೋಪ

  January 18, 2017

  ನ್ಯೂಸ್ ಕನ್ನಡ(18-1-2017): ಸೂಪರ್ ಹಿಟ್ ಬಾಲಿವುಡ್ ಚಲನಚಿತ್ರ “ಚೆನ್ನೈ ಎಕ್ಸ್ ಪ್ರೆಸ್”ನ ನಿರ್ಮಾಪಕ ಕರೀಂ ಮೊರಾನಿ ವಿರುದ್ಧ ಅತ್ಯಾಚಾರಕ್ಕೆ ಸಂಬಂಧಿಸಿದಂತೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 25 ವರ್ಷದ ಯುವತಿಯನ್ನು ಮದುವೆಯಾಗುವುದಾಗಿ ನಂಬಿಸಿ ಅತ್ಯಾಚಾರಗೈದಿರುವುದಾಗಿ ದೂರು ದಾಖಲಾಗಿದ್ದು, ...

  Read More
 • ra-one

  “ರಾ ಒನ್” ಚಿತ್ರದ ರಾಷ್ಟ್ರಪ್ರಶಸ್ತಿ ವಿಜೇತ ಅನಿಮೇಟರ್ ನಿಧನ

  January 18, 2017

  ನ್ಯೂಸ್ ಕನ್ನಡ(18-1-2017): ರಾ ಒನ್ ಚಿತ್ರದ ಅನಿಮೇಷನ್ ಗಾಗಿ ರಾಷ್ಟ್ರೀಯ ಪ್ರಶಸ್ತಿ ಗಳಿಸಿದ್ದ ಚಾರು ಖಂದಾಲ್ ನಿಧನರಾಗಿದ್ದಾರೆ. 4 ವರ್ಷಗಳ ಹಿಂದೆ ಸಂಭವಿಸಿದ ರಸ್ತೆ ಅಪಘಾತವೊಂದರಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಚಾರು ದೀರ್ಘಕಾಲದ ಅಸೌಖ್ಯದಿಂದ ಇಂದು ನಿಧನರಾದರು. ಶಾರುಕ್ ...

  Read More

ಹೆಚ್ಚಿನ ಸುದ್ದಿ

More

ನೆನಪಿನ ಸಂಚಿ

ಹೆಚ್ಚಿನ ಸುದ್ದಿ

More
Menu
×