Saturday January 7 2017

Follow on us:

Contact Us

ಸಂಸದನ ದುರ್ವರ್ತನೆ ಖಂಡಿಸಿ ವೈದ್ಯರಿಂದ ಪ್ರತಿಭಟನೆ

ನ್ಯೂಸ್ ಕನ್ನಡ ವರದಿ (7-1-17): ಭಟ್ಕಳ: ಕೆನರಾ ಲೋಕಸಭಾ ಕ್ಷೇತ್ರದ ಸಂಸದ ಅನಂತ್ ಕುಮಾರ್ ಹೆಗಡೆ ಶಿರಶಿಯ ಟಿ.ಎಸ್.ಎಸ್. ಆಸ್ಪತ್ರೆಯ ಸೇವಾ ನಿರತ ವೈದ್ಯರ ಮೇಲೆ ಹಲ್ಲೆ ಮಾಡಿದ್ದನ್ನು ಭಟ್ಕಳ ವೈದ್ಯರ ಸಂಘ ತೀವ್ರವಾಗಿ ಖಂಡಿಸಿ ಅರ್ಧ  ದಿನ ವೈದ್ಯಕೀಯ ಸೇವೆ ಸ್ಥಗಿತಗೊಳಿಸಿ ಪ್ರತಿಭಟನೆ ನಡಿಸಿದರು.

ಈ ಕುರಿತು ಶನಿವಾರ ಇಲ್ಲಿನ ಸಹಾಯಕ ಆಯುಕ್ತರ ಮೂಲಕ ಸರ್ಕಾರಕ್ಕೆ ಮನವಿಯೊಂದನ್ನು ಸಲ್ಲಿಸಿದ್ದು, ಸಂಸದರು ವೈದ್ಯರ ಮೇಲೆ ಅಮಾನುಷವಾಗಿ ಹಲ್ಲೆಗೈದಿದ್ದಾರೆ. ಸರ್ಕಾರದ ಅಧಿಸೂಚನೆಯಂತೆ ಆಸ್ಪತ್ರೆಯ ಸಿಬ್ಬಂಧಿಗಳ ಮೇಲೆ ಹಲ್ಲೆ ಮಾಡುವ ವ್ಯಕ್ತಿಗೆ 3ವರ್ಷದ ಕಾರಾಗೃಹವಾಸ ಹಾಗೂ 50 ಸಾವಿರ ರೂ ದಂಡ ವಿಧಿಸಬೇಕೆಂಬ ಆದೇಶವಿದ್ದು, ಈ ಕಾನೂನಿನಂತೆ ಸಂಸದನ ಮೇಲೆ ಕ್ರಮ ಜರಗಸಬೇಕೆಂದು ಮನವಿಯಲ್ಲಿ ಆಗ್ರಹಿಸಲಾಗಿದೆ.

ರಾಜ್ಯದಲ್ಲಿ ಹಲವಾರು ವೈದ್ಯರ ಮೇಲೆ ಹಲ್ಲೆ ಪ್ರಕರಣಗಳು ನಡೆಯುತ್ತಿದ್ದರೂ ಅವರ ಮೇಲೆ ಯಾವುದೇ ಕಾನೂನು ಕ್ರಮ ಜರಗಿಸುತ್ತಿಲ್ಲ. ಇದು ಆಸ್ಪತ್ರೆಯ ವೈದ್ಯರಿಗೆ ಹಾಗೂ ಸಿಬ್ಬಂದಿಗಳಿಗೆ ಅಘಾತವನ್ನುಂಟು ಮಾಡಿದೆ ಎಂದು ಮನವಿಯಲ್ಲಿ ತಿಳಿಸಿದೆ.

ಈ ಸಂದರ್ಭದಲ್ಲಿ ಇಂಡಿಯನ್ ಮೆಡಿಕಲ್ ಅಸೋಸಿಯೇಶನ್ ಭಟ್ಕಳದ ಅಧ್ಯಕ್ಷ ಡಾ.ಆರ್.ವಿ.ಸರಾಫ್, ಕಾರ್ಯದರ್ಶ ಡಾ.ಎಂ. ಚೇತನ್ ಕಲ್ಕೂರ್, ಡಾ.ಸುರೇಶ್ ನಾಯಕ, ಡಾ.ನಸೀಮ್ ಖಾನ್, ಸೇರಿದಂತೆ ಸಂಘದ ಪದಾಧಿಕಾರಿಗಳು ಉಪಸ್ಥಿತರಿದ್ದರು.

nkrmbhap

Comments

ಸೂಚನೆ : ಯಾವುದೇ ತೆರನಾದ ಧಾರ್ಮಿಕ, ರಾಜಕೀಯ ಮತ್ತು ವ್ಯಕ್ತಿ ನಿಂದನಾತ್ಮಕ ಪ್ರತಿಕ್ರಿಯೆಗಳನ್ನಾಗಲೀ, ಭಾರತ ಒಕ್ಕೂಟ ವ್ಯವಸ್ಥೆಯಡಿ ಬರುವ ಪ್ರದೇಶ, ಭಾಷೆ ಅಥವಾ ಸಂಸ್ಕೃತಿಯನ್ನು ತೆಗಳುವ ಪ್ರತಿಕ್ರಿಯೆಯನ್ನಾಗಲೀ, ಸಾಮಾಜಿಕ ಸ್ವಾಸ್ಥ್ಯದ ಮೇಲೆ ಪರಿಣಾಮ ಬೀರುವ ಅಸಭ್ಯ, ಅಶ್ಲೀಲ ಪ್ರತಿಕ್ರಿಯೆಯನ್ನಾಗಲೀ ಹಾಕಬಾರದಾಗಿ ವಿನಂತಿ. ನಿಮ್ಮ ಪ್ರತಿಕ್ರಿಯೆಗೆ ಆಯಾ ವ್ಯಕ್ತಿ ಸಂಪೂರ್ಣವಾಗಿ ಜವಾಬ್ದಾರರಾಗಿದ್ದು "ನ್ಯೂಸ್ ಕನ್ನಡ" ಬಳಗ ಜವಾಬ್ದಾರರಾಗಿರುವುದಿಲ್ಲ. ಅಲ್ಲದೆ ಇಂಥಹ ಪ್ರತಿಕ್ರಿಯೆಗಳು ಕಾನೂನಾತ್ಮಕವಾಗಿ ಅಪರಾಧವಾಗಿದ್ದು, ಸಂಬಧಪಟ್ಟ ಇಲಾಖೆ ಮಾಹಿತಿಯನ್ನು ಕೇಳಿದರೆ ನಿಮ್ಮ ಸಂಪೂರ್ಣ ಹೆಸರು ಮತ್ತು ಐ.ಪಿ ವಿಳಾಸವನ್ನು ಒದಗಿಸಲು "ನ್ಯೂಸ್ ಕನ್ನಡ" ಬದ್ದವಾಗಿರುತ್ತದೆ.

ಜಿಂಕೆ ಬೇಟೆ; ಆರೋಪಿ ಪೊಲೀಸ್ ಬಲೆಗೆ

ಮುಂದಿನ ಸುದ್ದಿ »

ಪರೀಕ್ಷೆಗೆ ಪ್ರವೇಶ ಪತ್ರ ನೀಡುವಂತೆ ಆಗ್ರಹಿಸಿ ವಿದ್ಯಾರ್ಥಿಗಳಿಂದ ಬಿ.ಇ.ಓ ಕಚೇರಿ ಮುಂದೆ ಧರಣಿ

ಸಿನೆಮಾ

ಹೆಚ್ಚಿನ ಸುದ್ದಿ

More

ನೆನಪಿನ ಸಂಚಿ

ಹೆಚ್ಚಿನ ಸುದ್ದಿ

More

ಭೂತಗನ್ನಡಿ

ಹೆಚ್ಚಿನ ಸುದ್ದಿ

More
Menu
×