Saturday January 7 2017

Follow on us:

Contact Us

ನೋಟ್ ಬ್ಯಾನ್ ಸಂಪೂರ್ಣ ವಿಫಲ: ಪ್ರಧಾನಿ ಅವರ ಏಕಾಏಕಿ ನಿರ್ಧಾರ ತಪ್ಪು- ಕಾಂಗ್ರೆಸ್

ನ್ಯೂಸ್ ಕನ್ನಡ ವರದಿ (7-1-17): ಕಾರವಾರ: ದೇಶದಲ್ಲಿ ಕೇಂದ್ರ ಬಿಜೆಪಿ ಸರಕಾರ ಅಧಿಕಾರ ವೈಫಲ್ಯದ ವಿರುದ್ಧ ಜಿಲ್ಲಾ ಕಾಂಗ್ರೆಸ್ ಘಟಕದ ವತಿಯಿಂದ ನಗರದಲ್ಲಿ ಬೃಹತ್ ಪ್ರತಿಭಟನೆ ನಡೆಸಿದರು.

ನಗರದ ಬಿಲ್ಟ್ ಸರ್ಕಲ್ ಬಳಿ ಸೇರಿದ ಜಿಲ್ಲೆಯ ವಿವಿಧ ತಾಲೂಕಿನ ಕಾಂಗ್ರೆಸ್ ಕಾರ್ಯಕರ್ತರು ಮಿತ್ರಸಮಾಜದ ಮಾರ್ಗವಾಗಿ ಬೃಹತ್ ಮೆರವಣೆ ನಡೆಸಿದರು. ಬಳಿಕ ಜಿಲ್ಲಾಧಿಕಾರಿ ಕಚೇರಿಯ ಹೊರ ಆವರಣದಲ್ಲಿ ಸೇರಿ ತಮ್ಮ ಪ್ರತಿಭಟನೆ ವ್ಯಕ್ತಪಡಿಸಿ, ಜಿಲ್ಲಾಧಿಕಾರಿ ಕಚೇರಿಯ ಒಳಗೆ ನುಗ್ಗಲು ಯತ್ನಿಸಿದರಾದರೂ ಪೊಲೀಸರು ಕಾಂಗ್ರೆಸ್ ಕಾರ್ಯಕರ್ತರನ್ನು ತಡೆದರು.

ಈ ಸಂದರ್ಭದಲ್ಲಿ ಪ್ರತಿಭಟನಾಕಾರರನ್ನು ಉದ್ದೇಶಿಸಿ ಮಾತನಾಡಿದ ಜಿಲ್ಲಾ ಕಾಂಗ್ರೆಸ್ ಘಟಕದ ಜಿಲ್ಲಾಧ್ಯಕ್ಷ ಭೀಮಣ್ಣ ನಾಯ್ಕ, ಐದುನೂರು ಹಾಗೂ ಸಾವಿರ ಮುಖಬೆಲೆಯ ನೋಟು ರದ್ದತಿಯಿಂದ ಜನ ಸಾಮಾನ್ಯರಿಗೆ ತೀವ್ರ ತೊಂದರೆಯಾಗಿದೆ. 50 ದಿನದೊಳಗೆ ಸಮಸ್ಯೆ ಬಗೆಹರಿಸುವ ಭರವಸೆ ನೀಡಿದ್ದ ಕೇಂದ್ರ ಸರಕಾರ ಸಂಪೂರ್ಣ ವಿಫಲವಾಗಿದೆ. ಕೂಲಿ ಮಾಡಿ ಜೀವನ ಮಾಡುತ್ತಿದ್ದ ಜನರು ಇಂದು ಹೊತ್ತಿನ ಊಟಕ್ಕೂ ಪರದಾಡುವಂಥ ಸ್ಥಿತಿ ನಿರ್ಮಾಣವಾಗಿದೆ ಎಂದರು.

ಇಂದಿನ ದಿನದಲ್ಲಿ ಜನ ಸಾಮಾನ್ಯರು ಹಣಕ್ಕಾಗಿ ದಿನವಿಡಿ ಬ್ಯಾಂಕ್‍ ಗಳ ಮುಂದೆ ನಿಲ್ಲುವ ಪರಿಸ್ಥಿತಿ ಬಂದೊದಗಿದೆ. ಕಟ್ಟಡ ನಿರ್ಮಾಣಗಳ ಕೆಲಸ ಕುಂಠಿತಗೊಂಡಿದೆ. ಚಿಲ್ಲರೆ ಅಭಾವ ಎದುರಿಸುತ್ತಿದ್ದು, ಕಪ್ಪುಹಣವನ್ನು ಮಟ್ಟ ಹಾಕುವದಕ್ಕಿಂತ ದೊಡ್ಡ ಸಮಸ್ಯೆಯನ್ನು ಸೃಷ್ಠಿಸಿಕೊಂಡಂತಾಗಿದೆ. ಯಾವುದೇ ಪೂರ್ವ ತಯಾರಿ ಇಲ್ಲದೇ ಗರಿಷ್ಠ ಮುಖಬೆಲೆಯ ನೋಟುಗಳನ್ನು ರದ್ದು ಮಾಡಿರುವದರಿಂದ ಈ ರೀತಿ ಸಮಸ್ಯೆಗೆ ಕಾರಣವಾಗುತ್ತಿದೆ. ಪ್ರಧಾನಿ ಅವರ ಏಕಾಏಕಿ ನಿರ್ಣಯ ಇಂದು ಆರ್ಥಿಕ ನೀತಿಯನ್ನೇ ಬದಲಾಯಿಸಿರುವುದು ಸರಿಯಲ್ಲ ಎಂದು ದೂರಿದರು.

ಪ್ರಧಾನಿ ನರೇಂದ್ರ ಮೋದಿ ಆರಂಭದಲ್ಲಿ ಯೋಜನೆಯನ್ನು ಜಾರಿಗೆ ತಂದಾಗ ಕಾಂಗ್ರೆಸ್ ಪಕ್ಷದವರು ಸೇರಿದಂತೆ ಎಲ್ಲರೂ ಅವರ ಕ್ರಮವನ್ನು ಸ್ವಾಗತಿಸಿದ್ದೇವು. ಆದರೆ 50 ದಿನದೊಳಗೆ ಸಮಸ್ಯೆ ಬಗೆಹರಿಯುವುದಾಗಿ ತಿಳಿಸಿದ್ದರು. ಆದರೆ ಇಂದಿಗೂ ಜನಸಾಮಾನ್ಯರು ಸರಿಯಾಗಿ ಹಣ ಸಿಗದೆ ಬ್ಯಾಂಕ್‍ ಗಳ ಮುಂದೆ ಪರದಾಡುತ್ತಿದ್ದಾರೆ. ಪ್ರಧಾನಿ ಅವರು ಆರಂಭದಲ್ಲಿ ಕಪ್ಪುಹಣವನ್ನು ತರುವುದಾಗಿ ಘೊಷಿಸಿದ್ದರು. ಆದರೆ ಅದನ್ನು ತರಲಾಗದೆ ಇದ್ದಾಗ ದೇಶದೊಳಗಿನ ಆರ್ಥಿಕ ಸ್ಥಿತಿಗತಿಯನ್ನು ಕದಡಿ ಜನಸಮಾನ್ಯರು ತೊಂದರೆಗೆ ಸಿಲುಕುವಂತೆ ಮಾಡಿದ್ದಾರೆ. ಇದರಿಂದ ಮೋದಿ ಜನರನ್ನು ದಾರಿ ತಪ್ಪಿಸುವ ಕೆಲಸ ಮಾಡುತ್ತಿದ್ದಾರೆ. ಇನ್ನಾದರೂ ಕೇಂದ್ರ ಸರಕಾರ ನೋಟ್ ರದ್ದುಪಡಿಸಿದ್ದರಿಂದ ಆಗಿರುವ ಸಮಸ್ಯೆಯನ್ನು ಬಗೆಹರಿಸಲು ಮುಂದಾಗಬೇಕು ಎಂದು ಆಗ್ರಹಿಸಿದರು.

ಕಾರವಾರ-ಅಂಕೋಲಾ ವಿಧಾನ ಸಭಾ ಕ್ಷೇತ್ರದ ಶಾಸಕ ಸತೀಶ್ ಸೈಲ್ ಮಾತನಾಡಿ, ಪ್ರಧಾನಿ ನರೇಂದ್ರ ಮೋದಿ ಅವರು 500 ಹಾಗೂ 1000 ಮುಖಬೆಲೆಯ ನೋಟುಗಳನ್ನು ನಿಷೇಧಿಸಿದ್ದರಿಂದ ಬಡ, ಕೂಲಿ ಕಾರ್ಮಿಕರು ಕೂಡ ತೊಂದರೆ ಅನುಭವಿಸಿದ್ದಾರೆ. ಐವತ್ತು ದಿನ ಕಳೆದರು ಸ್ಥಿತಿ ಇನ್ನೂ ಬದಲಾಗಿದೆ. ಇದು ಪ್ರಗತಿಗೆ ತೊಡಕು ಉಂಟುಮಾಡಿದೆ ಎಂದರು.

ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಎಸ್. ಎಸ್. ನಕುಲ್ ಅವರಿಗೆ ಮನವಿ ಸಲ್ಲಿಸಲಾಯಿತು. ಪ್ರತಿಭಟನೆಯಲ್ಲಿ ಈ ಸಂದರ್ಭದಲ್ಲಿ ಕಾಂಗ್ರೆಸ್‍ ನ ಪ್ರಮುಖರಾದ ಶ್ಯಾಮಲಾ ಭಂಡಾರಿ, ರಾಜೇಂದ್ರ ನಾಯ್ಕ, ಕೆ.ಎಚ್ ಗೌಡ, ದಿಗಂಬರ ಶೇಟ್, ದೀಪಕ್ ವೈಂಗಣಕರ್ ಇನ್ನಿತರರು ಇದ್ದರು.

nksbkhap

Comments

ಸೂಚನೆ : ಯಾವುದೇ ತೆರನಾದ ಧಾರ್ಮಿಕ, ರಾಜಕೀಯ ಮತ್ತು ವ್ಯಕ್ತಿ ನಿಂದನಾತ್ಮಕ ಪ್ರತಿಕ್ರಿಯೆಗಳನ್ನಾಗಲೀ, ಭಾರತ ಒಕ್ಕೂಟ ವ್ಯವಸ್ಥೆಯಡಿ ಬರುವ ಪ್ರದೇಶ, ಭಾಷೆ ಅಥವಾ ಸಂಸ್ಕೃತಿಯನ್ನು ತೆಗಳುವ ಪ್ರತಿಕ್ರಿಯೆಯನ್ನಾಗಲೀ, ಸಾಮಾಜಿಕ ಸ್ವಾಸ್ಥ್ಯದ ಮೇಲೆ ಪರಿಣಾಮ ಬೀರುವ ಅಸಭ್ಯ, ಅಶ್ಲೀಲ ಪ್ರತಿಕ್ರಿಯೆಯನ್ನಾಗಲೀ ಹಾಕಬಾರದಾಗಿ ವಿನಂತಿ. ನಿಮ್ಮ ಪ್ರತಿಕ್ರಿಯೆಗೆ ಆಯಾ ವ್ಯಕ್ತಿ ಸಂಪೂರ್ಣವಾಗಿ ಜವಾಬ್ದಾರರಾಗಿದ್ದು "ನ್ಯೂಸ್ ಕನ್ನಡ" ಬಳಗ ಜವಾಬ್ದಾರರಾಗಿರುವುದಿಲ್ಲ. ಅಲ್ಲದೆ ಇಂಥಹ ಪ್ರತಿಕ್ರಿಯೆಗಳು ಕಾನೂನಾತ್ಮಕವಾಗಿ ಅಪರಾಧವಾಗಿದ್ದು, ಸಂಬಧಪಟ್ಟ ಇಲಾಖೆ ಮಾಹಿತಿಯನ್ನು ಕೇಳಿದರೆ ನಿಮ್ಮ ಸಂಪೂರ್ಣ ಹೆಸರು ಮತ್ತು ಐ.ಪಿ ವಿಳಾಸವನ್ನು ಒದಗಿಸಲು "ನ್ಯೂಸ್ ಕನ್ನಡ" ಬದ್ದವಾಗಿರುತ್ತದೆ.

ಇಂಡಿಯಾ ಫ್ರೆಟಿನಿ೯ಟಿ ಫೋರಂ ವತಿಯಿಂದ ಹುಬ್ಬುರ್ರಸೂಲ್ ಕಾರ್ಯಕ್ರಮ

ಮುಂದಿನ ಸುದ್ದಿ »

ಟಿಪ್ಪರ್-ಬೈಕ್ ಮುಖಾಮುಖಿ ಡಿಕ್ಕಿ: ಬೈಕ್ ಸವಾರ ಸ್ಥಳದಲ್ಲೆ ಸಾವು

ಇತ್ತೀಚಿನ ಸುದ್ದಿಗಳು

ಸಿನೆಮಾ

  • ತನಗಿರುವ ಅಪರೂಪದ ಕಾಯಿಲೆಯನ್ನು ಬಹಿರಂಗಪಡಿಸಿದ ನಟ ಇರ್ಫಾನ್ ಖಾನ್!

    March 16, 2018

    ನ್ಯೂಸ್ ಕನ್ನಡ ವರದಿ-(16.3.18): ಬಾಲಿವುಡ್‌ನ‌ ಪ್ರತಿಭಾವಂತ ನಟ ಇರ್ಫಾನ್‌ ಖಾನ್‌ ಅವರು ತಮ್ಮನ್ನು ಬಾಧಿಸುತ್ತಿರುವ ಅತ್ಯಪರೂಪದ ಕಾಯಿಲೆ ಯಾವುದೆಂಬುದನ್ನು ಬಹಿರಂಗಪಡಿಸಿದ್ದಾರೆ. ತಾನು ನ್ಯೂರೋ ಎಂಡೋಕ್ರೈನ್‌ ಟ್ಯೂಮರ್‌ನಿಂದ ಬಳಲುತ್ತಿರುವುದಾಗಿ ಅವರು ತಿಳಿಸಿದ್ದಾರೆ. ಕೆಲ ದಿನಗಳ ಹಿಂದೆ ಇರ್ಫಾನ್‌ ಖಾನ್‌ ...

    Read More

ಹೆಚ್ಚಿನ ಸುದ್ದಿ

More

ನೆನಪಿನ ಸಂಚಿ

ಹೆಚ್ಚಿನ ಸುದ್ದಿ

More
Menu
×