Saturday June 10 2017

Follow on us:

Contact Us

ಪಾದೂರು ಪೈಪ್‍ಲೈನ್ ಸಂತ್ರಸ್ಥರಿಗೆ ಪರಿಹಾರ ವಿತರಣೆ

ನ್ಯೂಸ್ ಕನ್ನಡ ವರದಿ-(10.06.17)ಕಾಪು: ಪಾದೂರು ಪೈಪ್‍ಲೈನ್ ಕಾಮಗಾರಿಯಿಂದ ಹಾನಿಗೊಳಗಾದ ಮನೆಗಳವರಿಗೆ ಕಂಪೆನಿಯು ಪರಿಹಾರ ವಿತರಿಸಲು ಹಿಂದೇಟು ಹಾಕಿತ್ತು.ಇಂತಹ ಸಂದರ್ಭದಲ್ಲಿ ಜನಜಾಗೃತಿ ಸಮಿತಿ ಹಾಗೂ ಜನಪ್ರತಿನಿಧಿಗಳ ಹೋರಾಟದಿಂದ ಪರಿಹಾರ ಪಡೆಯಲು ಸಾಧ್ಯವಾಗಿದೆ. ಎಂದು ಶಾಸಕ ವಿನಯಕುಮಾರ್ ಸೊರಕೆ ಹೇಳಿದರು.

ಕಾಪು ಪುರಸಭೆ ಸಭಾಂಗಣದಲ್ಲಿ ಶನಿವಾರ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಐಎಸ್‍ಪಿಆರ್‍ಎಲ್ ಪೈಪ್‍ಲೈನ್ ಕಾಮಗಾರಿಯಿಂದ ಹಾನಿಗೊಳಗಾರ 46 ಮನೆಗಳಿಗೆ ಸುಮಾರು ರು. 48 ಲಕ್ಷ ಪರಿಹಾರ ಧನದ ಚೆಕ್ ವಿತರಿಸಿ ಮಾತನಾಡಿದರು. ಪಾದೂರು ಕಚ್ಚಾ ತೈಲ ಶೇಖರಣಾ ಘಟಕದ (ಐಎಸ್‍ಪಿಆರ್‍ಎಲ್) ಯೋಜನೆಯಿಂದ ಹಾನಿಗೊಳಗಾದ ಮನೆಗಳಿಗೆ ದೇಶದಲ್ಲಿಯೇ ಗರಿಷ್ಠ ಮಟ್ಟದ ಪರಿಹಾರವನ್ನು ವಿತರಿಸಲಾಗಿದೆ ಯುಪಿಸಿಎಲ್ ಯೋಜನೆಯಲ್ಲಿಯೂ ಹಿಂದೆ ಜಮೀನು ಕಳೆದುಕೊಂಡವರಿಗೆ ಸೆಂಟ್ಸ್‍ಗೆ ಕೇವಲ ರು. 4 ಸಾವಿರ ಪರಿಹಾರ ನೀಡಲಾಗಿತ್ತು. ಹೋರಾಟದ ಫಲವಾಗಿ ಇದೀಗ ಕಂಪೆನಿಯ ವಿಸ್ತರಣೆಗೆ ಭೂಮಿ ಕಳೆದುಕೊಳ್ಳುವವರಿಗೆ ರು. 40 ಸಾವಿರ ನೀಡಲಾಗುತ್ತಿದೆ ಎಂದರು.

ಜಿಲ್ಲಾ ಪಂಚಾಯಿತಿ ಸದಸ್ಯೆ ಶಿಲ್ಪಾ ಸುವರ್ಣ, ಪುರಸಭೆ ಉಪಾಧ್ಯಕ್ಷ ಕೆ.ಎಚ್. ಉಸ್ಮಾನ್, ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ದಿವಾಕರ ಶೆಟ್ಟಿ ಕಾಪು, ಮಜೂರು ಗ್ರಾಪಂ ಅಧ್ಯಕ್ಷ ಸಂದೀಪ್ ರಾವ್, ಬೆಳಪು ಗ್ರಾಪಂ ಅಧ್ಯಕ್ಷ ದೇವಿಪ್ರಸಾದ್ ಶೆಟ್ಟಿ, ಕುತ್ಯಾರ್ ಗ್ರಾಪಂ ಅಧ್ಯಕ್ಷ ಧೀರಜ್, ವೈ, ದೀಪಕ್, ತಹಶೀಲ್ದಾರ್ ಮಹೇಶ್ಚಂದ್ರ, ಉಪತಹಶೀಲ್ದಾರ್ ಶೌಕತ್ತುಲ್ಲ ಅಸ್ಸಾದಿ, ಕಂದಾಯ ನಿರೀಕ್ಷಕ ಆರ್.ಎಂ. ನಾಯಕ್ ಇದ್ದರು.

Comments

ಸೂಚನೆ : ಯಾವುದೇ ತೆರನಾದ ಧಾರ್ಮಿಕ, ರಾಜಕೀಯ ಮತ್ತು ವ್ಯಕ್ತಿ ನಿಂದನಾತ್ಮಕ ಪ್ರತಿಕ್ರಿಯೆಗಳನ್ನಾಗಲೀ, ಭಾರತ ಒಕ್ಕೂಟ ವ್ಯವಸ್ಥೆಯಡಿ ಬರುವ ಪ್ರದೇಶ, ಭಾಷೆ ಅಥವಾ ಸಂಸ್ಕೃತಿಯನ್ನು ತೆಗಳುವ ಪ್ರತಿಕ್ರಿಯೆಯನ್ನಾಗಲೀ, ಸಾಮಾಜಿಕ ಸ್ವಾಸ್ಥ್ಯದ ಮೇಲೆ ಪರಿಣಾಮ ಬೀರುವ ಅಸಭ್ಯ, ಅಶ್ಲೀಲ ಪ್ರತಿಕ್ರಿಯೆಯನ್ನಾಗಲೀ ಹಾಕಬಾರದಾಗಿ ವಿನಂತಿ. ನಿಮ್ಮ ಪ್ರತಿಕ್ರಿಯೆಗೆ ಆಯಾ ವ್ಯಕ್ತಿ ಸಂಪೂರ್ಣವಾಗಿ ಜವಾಬ್ದಾರರಾಗಿದ್ದು "ನ್ಯೂಸ್ ಕನ್ನಡ" ಬಳಗ ಜವಾಬ್ದಾರರಾಗಿರುವುದಿಲ್ಲ. ಅಲ್ಲದೆ ಇಂಥಹ ಪ್ರತಿಕ್ರಿಯೆಗಳು ಕಾನೂನಾತ್ಮಕವಾಗಿ ಅಪರಾಧವಾಗಿದ್ದು, ಸಂಬಧಪಟ್ಟ ಇಲಾಖೆ ಮಾಹಿತಿಯನ್ನು ಕೇಳಿದರೆ ನಿಮ್ಮ ಸಂಪೂರ್ಣ ಹೆಸರು ಮತ್ತು ಐ.ಪಿ ವಿಳಾಸವನ್ನು ಒದಗಿಸಲು "ನ್ಯೂಸ್ ಕನ್ನಡ" ಬದ್ದವಾಗಿರುತ್ತದೆ.

ಮಲೇರಿಯಾ ಮಾಸಾಚರಣೆ ಅಂಗವಾಗಿ ಅಂತರ್ ಇಲಾಖಾ ಸಮನ್ವಯ ಸಮಿತಿ ಸಭೆ

ಮುಂದಿನ ಸುದ್ದಿ »

ಟ್ರಾವೆಲರ್ ಗೆ ಇನ್ನೋವಾ ಢಿಕ್ಕಿ: ಚಾಲಕ ಗಂಭೀರ

ಇತ್ತೀಚಿನ ಸುದ್ದಿಗಳು

ಸಿನೆಮಾ

  • ತನಗಿರುವ ಅಪರೂಪದ ಕಾಯಿಲೆಯನ್ನು ಬಹಿರಂಗಪಡಿಸಿದ ನಟ ಇರ್ಫಾನ್ ಖಾನ್!

    March 16, 2018

    ನ್ಯೂಸ್ ಕನ್ನಡ ವರದಿ-(16.3.18): ಬಾಲಿವುಡ್‌ನ‌ ಪ್ರತಿಭಾವಂತ ನಟ ಇರ್ಫಾನ್‌ ಖಾನ್‌ ಅವರು ತಮ್ಮನ್ನು ಬಾಧಿಸುತ್ತಿರುವ ಅತ್ಯಪರೂಪದ ಕಾಯಿಲೆ ಯಾವುದೆಂಬುದನ್ನು ಬಹಿರಂಗಪಡಿಸಿದ್ದಾರೆ. ತಾನು ನ್ಯೂರೋ ಎಂಡೋಕ್ರೈನ್‌ ಟ್ಯೂಮರ್‌ನಿಂದ ಬಳಲುತ್ತಿರುವುದಾಗಿ ಅವರು ತಿಳಿಸಿದ್ದಾರೆ. ಕೆಲ ದಿನಗಳ ಹಿಂದೆ ಇರ್ಫಾನ್‌ ಖಾನ್‌ ...

    Read More

ಹೆಚ್ಚಿನ ಸುದ್ದಿ

More

ನೆನಪಿನ ಸಂಚಿ

ಹೆಚ್ಚಿನ ಸುದ್ದಿ

More
Menu
×