Wednesday December 7 2016

Follow on us:

Contact Us

ಪಂಚತೀರ್ಥ-ಸಪ್ತಕ್ಷೇತ್ರ ರಥಯಾತ್ರೆಗೆ 8 ಸಾವಿರ ಮಂದಿ ನಿರೀಕ್ಷೆ: ಪುಷ್ಪರಾಜ ಶೆಟ್ಟಿ

ನ್ಯೂಸ್ ಕನ್ನಡ ವರದಿ(07.12.2016)-ಬೆಳ್ತಂಗಡಿ: ಎತ್ತಿನಹೊಳೆ ಯೋಜನೆಯನ್ನು ವಿರೋಧಿಸಿ ಸಂಸದ ನಳಿನ್ ಕುಮಾರ್ ಕಟೀಲ್ ನೇತೃತ್ವದಲ್ಲಿ ಡಿ. 10, 11, 12ರಂದು ಜಿಲ್ಲೆಯಲ್ಲಿ ನಡೆಯಲಿರುವ ಪಂಚತೀರ್ಥ ಸಪ್ತಕ್ಷೇತ್ರ ರಥಯಾತ್ರೆಗೆ ಧರ್ಮಸ್ಥಳದಲ್ಲಿ ನಡೆಯಲಿರುವ ಸಾರ್ವಜನಿಕ ಸಭೆಯಲ್ಲಿ ಬೆಳ್ತಂಗಡಿ ತಾಲೂಕಿನ ಸುಮಾರು 8 ಸಾವಿರಕ್ಕೂ ಮಿಕ್ಕಿ ಸಾರ್ವಜನಿಕರು ಭಾಗವಹಿಸಲಿದ್ದಾರೆ ಎಂದು ನೇತ್ರಾವತಿ ಉಳಿಸಿ ಹೋರಾಟ ಸಮಿತಿ ಅಧ್ಯಕ್ಷ ಪುಷ್ಪರಾಜ ಶೆಟ್ಟಿ ತಿಳಿಸಿದ್ದಾರೆ.

ಬುಧವಾರ ಇಲ್ಲಿನ ಅಂಬೇಡ್ಕರ್ ಭವನದಲ್ಲಿ ನಡೆದ ಸಮಾಲೋಚನಾ ಸಭೆಯ ಬಳಿಕ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕರಾವಳಿಯ ಹೆತ್ತ ಕರುಳ ಬಳ್ಳಿಯನ್ನು ಕತ್ತರಿಸುವ ಎತ್ತಿನಹೊಳೆ ಯೋಜನೆ ಭಯಾನಕ ವಾತಾವರಣವನ್ನು ಸೃಷ್ಟಿಸಿದೆ. ಸ್ವಾರ್ಥ ಸಾಧನೆಗೆ ಎತ್ತಿನಹೊಳೆ ಯೋಜನೆಯ ಮೂಲಕ ನೇತ್ರಾವತಿ ನದಿಯನ್ನು ಕಬಳಿಸುವ ಯತ್ನ ನಡೆಯುತ್ತಿದೆ. ನೇತ್ರಾವತಿ ನದಿಗಾಗಿ ಯಾರೇ ಹೋರಾಟ ನಡೆಸಿದರೂ ಅದರಲ್ಲಿ ಬೆಳ್ತಂಗಡಿ ತಾಲೂಕು ನೇತ್ರಾವತಿ ಉಳಿಸಿ ಹೋರಾಟ ಸಮಿತಿ ಬೆಂಬಲಿಸಲಿದೆ. ಡಿ.10ರಿಂದ ನಡೆಯುವ ರಥಯಾತ್ರೆಗೆ ಸಮಿತಿ ಸಂಪೂರ್ಣ ಬೆಂಬಲ ನೀಡಲಿದ್ದು, ಡಿ.10ರಂದು ಸಂಜೆ ಧರ್ಮಸ್ಥಳದಲ್ಲಿ ನಡೆಯಲಿರುವ ಸಾರ್ವಜನಿಕ ಸಭೆಯಲ್ಲಿ ತಾಲೂಕಿನ ಸುಮಾರು 8 ಸಾವಿರಕ್ಕೂ ಅಧಿಕ ಮಂದಿ ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.

ಡಿ. 10ರಂದು ಮಧ್ಯಾಹ್ನ 3:30ಕ್ಕೆ ಕೊಕ್ಕಡದಲ್ಲಿ ರಥವನ್ನು ಸ್ವಾಗತಿಸಲಾಗುವುದು. ಅಲ್ಲಿಂದ ವಾಹನ ಜಾಥಾದ ಮೂಲಕ ಸಂಜೆ ಸಂಜೆ 5ಗಂಟೆಗೆ ಧರ್ಮಸ್ಥಳಕ್ಕೆ ಆಗಮಿಸಲಿದೆ. ಧರ್ಮಸ್ಥಳದಲ್ಲಿ ಬೃಹತ್ ಸಾರ್ವಜನಿಕ ಸಭೆ ನಡೆಯಲಿದ್ದು, ಈ ಸಭೆಯಲ್ಲಿ ತಾಲೂಕಿನ ಮೂಲೆಮೂಲೆಗಳಿಂದ ಜನತೆ ಭಾಗವಹಿಸಬೇಕು ಎಂದು ವಿನಂತಿಸಿದರು.

ಧರ್ಮಸ್ಥಳದ ಸಭೆಯ ಬಳಿಕ ಉಜಿರೆಗೆ ಆಗಮಿಸುವ ರಥ ಜನಾರ್ದನಸ್ವಾಮಿ ದೇವಸ್ಥಾನದ ಬಳಿ ವಾಸ್ತವ್ಯವಾಗಲಿದೆ. ಡಿ.11ರಂದು ಬೆಳಿಗ್ಗೆ ಉಜಿರೆಯಿಂದ ವಾಹನ ಜಾಥಾ ಮೂಲಕ ಬೆಳ್ತಂಗಡಿಗೆ ಆಗಮಿಸಿ, ಬಳಿಕ ಗುರುವಾಯನಕೆರೆ ಮೂಲಕ ಉಪ್ಪಿನಂಗಡಿಗೆ ತೆರಳಲಿದೆ. ಈ ಸಂದರ್ಭದಲ್ಲಿ ವಾಹನಜಾಥಾವನ್ನು ಹಮ್ಮಿಕೊಳ್ಳಲಾಗಿದ್ದು, ತಾಲೂಕಿನ ಜನತೆ ಅತೀ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ವಿನಂತಿಸಿದರು. ಸಮಿತಿ ಕಾರ್ಯದರ್ಶಿ ಶಶಿಕಿರಣ್, ಧನಂಜಯ ರಾವ್, ಬಿಜೆಪಿ ಬೆಳ್ತಂಗಡಿ ಮಂಡಲ ಅಧ್ಯಕ್ಷ ರಂಜನ್ ಗೌಡ, ಯುವ ಮೋರ್ಛಾ ಜಿಲ್ಲಾಧ್ಯಕ್ಷ ಹರೀಶ್ ಪೂಂಜಾ, ಮಾಜಿ ಶಾಸಕ ಕೆ. ಪ್ರಭಾಕರ ಬಂಗೇರ ಇದ್ದರು.

nksbdgkp

Comments

ಸೂಚನೆ : ಯಾವುದೇ ತೆರನಾದ ಧಾರ್ಮಿಕ, ರಾಜಕೀಯ ಮತ್ತು ವ್ಯಕ್ತಿ ನಿಂದನಾತ್ಮಕ ಪ್ರತಿಕ್ರಿಯೆಗಳನ್ನಾಗಲೀ, ಭಾರತ ಒಕ್ಕೂಟ ವ್ಯವಸ್ಥೆಯಡಿ ಬರುವ ಪ್ರದೇಶ, ಭಾಷೆ ಅಥವಾ ಸಂಸ್ಕೃತಿಯನ್ನು ತೆಗಳುವ ಪ್ರತಿಕ್ರಿಯೆಯನ್ನಾಗಲೀ, ಸಾಮಾಜಿಕ ಸ್ವಾಸ್ಥ್ಯದ ಮೇಲೆ ಪರಿಣಾಮ ಬೀರುವ ಅಸಭ್ಯ, ಅಶ್ಲೀಲ ಪ್ರತಿಕ್ರಿಯೆಯನ್ನಾಗಲೀ ಹಾಕಬಾರದಾಗಿ ವಿನಂತಿ. ನಿಮ್ಮ ಪ್ರತಿಕ್ರಿಯೆಗೆ ಆಯಾ ವ್ಯಕ್ತಿ ಸಂಪೂರ್ಣವಾಗಿ ಜವಾಬ್ದಾರರಾಗಿದ್ದು "ನ್ಯೂಸ್ ಕನ್ನಡ" ಬಳಗ ಜವಾಬ್ದಾರರಾಗಿರುವುದಿಲ್ಲ. ಅಲ್ಲದೆ ಇಂಥಹ ಪ್ರತಿಕ್ರಿಯೆಗಳು ಕಾನೂನಾತ್ಮಕವಾಗಿ ಅಪರಾಧವಾಗಿದ್ದು, ಸಂಬಧಪಟ್ಟ ಇಲಾಖೆ ಮಾಹಿತಿಯನ್ನು ಕೇಳಿದರೆ ನಿಮ್ಮ ಸಂಪೂರ್ಣ ಹೆಸರು ಮತ್ತು ಐ.ಪಿ ವಿಳಾಸವನ್ನು ಒದಗಿಸಲು "ನ್ಯೂಸ್ ಕನ್ನಡ" ಬದ್ದವಾಗಿರುತ್ತದೆ.

ರಸ್ತೆ ನಿರ್ಮಾಣಕ್ಕೆ ಒತ್ತಾಯಿಸಿ ಧರಣಿ ಸತ್ಯಾಗ್ರಹ

ಮುಂದಿನ ಸುದ್ದಿ »

ಸಮಾಜವನ್ನು ಒಗ್ಗೂಡಿಸುವುದೇ ಸಮಸ್ತದ ಧ್ಯೇಯ: ಕರ್ನಾಟಕ ರಾಜ್ಯ ದಾರಿಮೀ ಉಲಮಾ ಒಕ್ಕೂಟ

ಇತ್ತೀಚಿನ ಸುದ್ದಿಗಳು

ಸಿನೆಮಾ

  • ತನಗಿರುವ ಅಪರೂಪದ ಕಾಯಿಲೆಯನ್ನು ಬಹಿರಂಗಪಡಿಸಿದ ನಟ ಇರ್ಫಾನ್ ಖಾನ್!

    March 16, 2018

    ನ್ಯೂಸ್ ಕನ್ನಡ ವರದಿ-(16.3.18): ಬಾಲಿವುಡ್‌ನ‌ ಪ್ರತಿಭಾವಂತ ನಟ ಇರ್ಫಾನ್‌ ಖಾನ್‌ ಅವರು ತಮ್ಮನ್ನು ಬಾಧಿಸುತ್ತಿರುವ ಅತ್ಯಪರೂಪದ ಕಾಯಿಲೆ ಯಾವುದೆಂಬುದನ್ನು ಬಹಿರಂಗಪಡಿಸಿದ್ದಾರೆ. ತಾನು ನ್ಯೂರೋ ಎಂಡೋಕ್ರೈನ್‌ ಟ್ಯೂಮರ್‌ನಿಂದ ಬಳಲುತ್ತಿರುವುದಾಗಿ ಅವರು ತಿಳಿಸಿದ್ದಾರೆ. ಕೆಲ ದಿನಗಳ ಹಿಂದೆ ಇರ್ಫಾನ್‌ ಖಾನ್‌ ...

    Read More

ಹೆಚ್ಚಿನ ಸುದ್ದಿ

More

ನೆನಪಿನ ಸಂಚಿ

ಹೆಚ್ಚಿನ ಸುದ್ದಿ

More
Menu
×