Saturday August 12 2017

Follow on us:

Contact Us

ಪಡುಬಿದ್ರಿಯ ರೋಟರಿ ಕ್ಲಬ್ ಮತ್ತು ಇನ್ನರ್ವೀಲ್ ಕ್ಲಬ್ ಆಶ್ರಯದಲ್ಲಿ “ಆಟಿದ ಪಂಥ”

ನ್ಯೂಸ್ ಕನ್ನಡ ವರದಿ-(12.08.17): ಪಡುಬಿದ್ರಿ: ನಮ್ಮ ಹಿರಿಯರು ಮುಂದಾಲೋಚನೆಯಿಂದ ಆಟಿ ತಿಂಗಳಲ್ಲಿ ತಿನಿಸುಗಳನ್ನು ಸಂಗ್ರಹ ಮಾಡುತ್ತಿದ್ದರು.ಅವೆಲ್ಲವೂ ರೋಗ ನಿರೋಧಕ ಶಕ್ತಿಯನ್ನು ಹೊಂದಿದ್ದವು.ಅದನ್ನು ಕಾಪಾಡುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ ಎಂದು ಜಾನಪದ ವಿದ್ವಾಂಸ ವಾಮನ ಕೋಟ್ಯಾನ್ ನಡಿಕುದ್ರು ಕರೆನೀಡಿದರು.

ಅವರು ಪಡುಬಿದ್ರಿಯ ರೋಟರಿ ಕ್ಲಬ್ ಮತ್ತು ಇನ್ನರ್ವೀಲ್ ಕ್ಲಬ್ ಆಶ್ರಯದಲ್ಲಿ ಪಡುಬಿದ್ರಿಯ ಅ0ಬೇಡ್ಕರ್ ಭವನದಲ್ಲಿ ನಡೆದ “ಆಟಿದ ಪಂಥ” ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ಉಡುಪಿ ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯೆ ನಯನಾ ಗಣೇಶ್ ಉದ್ಯಾವರ ಮಾತನಾಡಿ, ಮಹಿಳಾಮಣಿಗಳ ಸೃಜನಶೀಲತೆಗೆ ಪೂರಕವಾಗಿ ಇದೇ ಮೊದಲಬಾರಿಗೆ ಜಿಲ್ಲೆಯಲ್ಲಿ ಹಮ್ಮಿಕೊಂಡ ಈ ಪಂಥವು ಅನುಕರಣೀಯವಾದುದು. ಆಟಿ ಆಚರಣೆಯು ಮೂಡನಂಬಿಕೆಯಲ್ಲ ಅದೊಂದು ಮೂಲ ನಂಬಿಕೆ ಎಂದರು. ಪಡುಬಿದ್ರಿ ರೋಟರಿ ಕ್ಲಬ್ ಅಧ್ಯಕ್ಷ ರಮೀಝ್ ಹುಸೈನ್ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು. ಇನ್ನರ್ವೀಲ್ ಕ್ಲಬ್ ಅಧ್ಯಕ್ಷೆ ಸುನೀತಾ ಭಕ್ತ ವತ್ಸಲ, ಪಡುಬಿದ್ರಿ ಕಲ್ಲಟ್ಟೆ ಜಾರಂದಾಯ ಸೇವಾ ಸಮಿತಿ ಅಧ್ಯಕ್ಷ ಸಂತೋಷ್ ಕುಮಾರ್ ಶೆಟ್ಟಿ, ಜೆಡಿಎಸ್ ಕಾಪು ವಿಧಾನಸಭಾ ಕ್ಷೇತ್ರಾಧ್ಯಕ್ಷ ಸುಧಾಕರ ಶೆಟ್ಟಿ ಹೆಜಮಾಡಿ, ರೋಟರಿ ವಲಯ ಸೇನಾನಿ ಕೃಷ್ಣ ಬಂಗೇರ ಮುಖ್ಯ ಅತಿಥಿಗಳಾಗಿದ್ದರು.

Comments

ಸೂಚನೆ : ಯಾವುದೇ ತೆರನಾದ ಧಾರ್ಮಿಕ, ರಾಜಕೀಯ ಮತ್ತು ವ್ಯಕ್ತಿ ನಿಂದನಾತ್ಮಕ ಪ್ರತಿಕ್ರಿಯೆಗಳನ್ನಾಗಲೀ, ಭಾರತ ಒಕ್ಕೂಟ ವ್ಯವಸ್ಥೆಯಡಿ ಬರುವ ಪ್ರದೇಶ, ಭಾಷೆ ಅಥವಾ ಸಂಸ್ಕೃತಿಯನ್ನು ತೆಗಳುವ ಪ್ರತಿಕ್ರಿಯೆಯನ್ನಾಗಲೀ, ಸಾಮಾಜಿಕ ಸ್ವಾಸ್ಥ್ಯದ ಮೇಲೆ ಪರಿಣಾಮ ಬೀರುವ ಅಸಭ್ಯ, ಅಶ್ಲೀಲ ಪ್ರತಿಕ್ರಿಯೆಯನ್ನಾಗಲೀ ಹಾಕಬಾರದಾಗಿ ವಿನಂತಿ. ನಿಮ್ಮ ಪ್ರತಿಕ್ರಿಯೆಗೆ ಆಯಾ ವ್ಯಕ್ತಿ ಸಂಪೂರ್ಣವಾಗಿ ಜವಾಬ್ದಾರರಾಗಿದ್ದು "ನ್ಯೂಸ್ ಕನ್ನಡ" ಬಳಗ ಜವಾಬ್ದಾರರಾಗಿರುವುದಿಲ್ಲ. ಅಲ್ಲದೆ ಇಂಥಹ ಪ್ರತಿಕ್ರಿಯೆಗಳು ಕಾನೂನಾತ್ಮಕವಾಗಿ ಅಪರಾಧವಾಗಿದ್ದು, ಸಂಬಧಪಟ್ಟ ಇಲಾಖೆ ಮಾಹಿತಿಯನ್ನು ಕೇಳಿದರೆ ನಿಮ್ಮ ಸಂಪೂರ್ಣ ಹೆಸರು ಮತ್ತು ಐ.ಪಿ ವಿಳಾಸವನ್ನು ಒದಗಿಸಲು "ನ್ಯೂಸ್ ಕನ್ನಡ" ಬದ್ದವಾಗಿರುತ್ತದೆ.

ಕಾಪು: ಮಾಂಸದ ತ್ಯಾಜ್ಯ ಸಂಗ್ರಹಣೆಗೆ ಚಾಲನೆ; ವೆಲ್ಲೂರು ಮಾದರಿಯಲ್ಲಿ ತ್ಯಾಜ್ಯ ವಿಲೇವಾರಿ

ಮುಂದಿನ ಸುದ್ದಿ »

6 ಎಸೆತಗಳಲ್ಲಿ 6 ವಿಕೆಟ್ ಪಡೆದು ವಿಶ್ವದಾಖಲೆ ನಿರ್ಮಿಸಿದ ಆಟಗಾರ!

ಸಿನೆಮಾ

ಹೆಚ್ಚಿನ ಸುದ್ದಿ

More

ನೆನಪಿನ ಸಂಚಿ

ಹೆಚ್ಚಿನ ಸುದ್ದಿ

More

ಭೂತಗನ್ನಡಿ

ಹೆಚ್ಚಿನ ಸುದ್ದಿ

More
Menu
×