Tuesday February 13 2018

Follow on us:

Contact Us

ಪೀಸ್ ಸ್ಕೂಲ್ ಸುಳ್ಯ: ವಿಜೃಂಭಣೆಯಿಂದ ನಡೆದ ವಾರ್ಷಿಕೋತ್ಸವ ಕಾರ್ಯಕ್ರಮ

ಸುಳ್ಯ : ಪೀಸ್ ಸ್ಕೂಲ್ ಬೋಳುಬೈಲು ಇದರ ಎರಡನೇ ವರ್ಷದ ವಾರ್ಷಿಕೋತ್ಸವವು ಫೆಬ್ರವರಿ 5 ರಂದು ಶಾಲಾ ವಠಾರದಲ್ಲಿ ನಡೆಯಿತು. ಸಂಜೆ ನಡೆದ ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪೀಸ್ ಸ್ಕೂಲ್ ಸ್ಥಾಪಕಾಧ್ಯಕ್ಷರಾದ ಅಬೂಬಕ್ಕರ್ ಬೋಳುಬೈಲು ವಹಿಸಿದ್ದರು.

ಮುಖ್ಯ ಅತಿಥಿಗಳಾಗಿ ಆಗಮಿಸಿದ ರೆಡ್ ಕ್ಯಾಮೆಲ್ ಇಸ್ಲಾಮಿಕ್ ಸ್ಕೂಲ್ ಮಂಗಳೂರು ಇದರ ಚೇರ್ಮೆನ್ ಆದ ಮುಹಮ್ಮದ್ ನವಾಝ್ ಅವರು ಮಾತನಾಡಿ,”ಈ ವಿಧ್ಯಾ ಸಂಸ್ಥೆಯು ಪ್ರಾರಂಭದಿಂದಲೇ ಉತ್ತಮ ರೀತಿಯಲ್ಲಿ ಪ್ರವರ್ತಿಸುತ್ತಿದ್ದು ಭೌತಿಕ ಮತ್ತು ಧಾರ್ಮಿಕ ಶಿಕ್ಷಣವನ್ನು ಒಂದೇ ಸೂರಿನಡಿಯಲ್ಲಿ ನೀಡಿ ವಿದ್ಯಾರ್ಥಿಗಳ ಶಿಕ್ಷಣದ ಹೊರೆಯನ್ನು ಕಡಿಮೆ ಮಾಡುವಂತಹ ಕಾರ್ಯವನ್ನು ಮಾಡುತ್ತಿದೆ.ಪೀಸ್ ಸ್ಕೂಲ್ ಸಮಾಜಕ್ಕೆ ಒಳಿತನ್ನು ಮಾಡುವಂತಹ ಪ್ರಜೆಗಳನ್ನು ನೀಡಲಿದೆ” ಎನ್ನುತ್ತಾ ಮುಂಬರುವ ಶೈಕ್ಷಣಿಕ ವರ್ಷದಲ್ಲಿ ಪ್ರಾರಂಭವಾಗುವ ತರಗತಿಗಳ ಪ್ರಯೋಜನವನ್ನು ಪಡೆದು ಕೊಳ್ಳುವಂತೆ ಸಾರ್ವಜನಿಕರಲ್ಲಿ ವಿನಂತಿಸಿದರು.

ಮತ್ತೋರ್ವ ಮುಖ್ಯ ಅತಿಥಿ ನಗರ ಪಂಚಾಯತ್ ಸದಸ್ಯರಾದ ಉಮ್ಮರ್ ರವರು ಮಾತನಾಡಿ “ಪೀಸ್ ಸ್ಕೂಲ್ ವಿದ್ಯಾರ್ಥಿಗಳನ್ನು ಪಠ್ಯ ಚಟುವಟಿಕೆಗಳ ಜೊತೆಗೆ ಉತ್ತಮ ಗುಣ ನಡತೆಗಳನ್ನು ಮೈಗೂಡಿಸುವಂತೆ ಮಾಡುತ್ತಿದೆ.ಇಲ್ಲಿ ವಿಧ್ಯಾಭ್ಯಾಸ ಪಡೆದಂತಹ ವಿದ್ಯಾರ್ಥಿಗಳು ಸಮುದಾಯಕ್ಕೆ ಉತ್ತಮ ಕೊಡುಗೆಗಳನ್ನು ನೀಡಲಿದ್ದಾರೆ” ಎನ್ನುತ್ತಾ ತನ್ನ ಮಾತುಗಳನ್ನು ಭಾಷಣಕ್ಕೇ ಮೀಸಲಿರಿಸದೆ ತನ್ನ ಮಗುವನ್ನು ಮುಂದಿನ ಶೈಕ್ಷಣಿಕ ವರ್ಷದಲ್ಲಿ ಪೀಸ್ ಸ್ಕೂಲ್ ನಲ್ಲಿ ದಾಖಲಿಸುವುದಾಗಿ ಘೋಷಿಸಿ ಪೀಸ್ ಸ್ಕೂಲ್ ನ ಬಗ್ಗೆ ತನಗಿರುವ ಅಭಿಮಾನವನ್ನು ಪ್ರಾಯೋಗಿಕವಾಗಿ ತಿಳಿಸಿದರು.

ಇನ್ನೋರ್ವ ಅತಿಥಿಯಾದ ಗೋಪಿನಾಥ್ ಬೋಳುಬೈಲು ಕಾರ್ಯಕ್ರಮಕ್ಕೆ ಶುಭ ಹಾರೈಸಿ ಮಾತನಾಡಿದರು. ಆ ನಂತರ ಶಾಲಾ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.ವೇದಿಕೆಯಲ್ಲಿ ಹಲವಾರು ಗಣ್ಯರು ಉಪಸ್ಥಿತರಿದ್ದರು.

Comments

ಸೂಚನೆ : ಯಾವುದೇ ತೆರನಾದ ಧಾರ್ಮಿಕ, ರಾಜಕೀಯ ಮತ್ತು ವ್ಯಕ್ತಿ ನಿಂದನಾತ್ಮಕ ಪ್ರತಿಕ್ರಿಯೆಗಳನ್ನಾಗಲೀ, ಭಾರತ ಒಕ್ಕೂಟ ವ್ಯವಸ್ಥೆಯಡಿ ಬರುವ ಪ್ರದೇಶ, ಭಾಷೆ ಅಥವಾ ಸಂಸ್ಕೃತಿಯನ್ನು ತೆಗಳುವ ಪ್ರತಿಕ್ರಿಯೆಯನ್ನಾಗಲೀ, ಸಾಮಾಜಿಕ ಸ್ವಾಸ್ಥ್ಯದ ಮೇಲೆ ಪರಿಣಾಮ ಬೀರುವ ಅಸಭ್ಯ, ಅಶ್ಲೀಲ ಪ್ರತಿಕ್ರಿಯೆಯನ್ನಾಗಲೀ ಹಾಕಬಾರದಾಗಿ ವಿನಂತಿ. ನಿಮ್ಮ ಪ್ರತಿಕ್ರಿಯೆಗೆ ಆಯಾ ವ್ಯಕ್ತಿ ಸಂಪೂರ್ಣವಾಗಿ ಜವಾಬ್ದಾರರಾಗಿದ್ದು "ನ್ಯೂಸ್ ಕನ್ನಡ" ಬಳಗ ಜವಾಬ್ದಾರರಾಗಿರುವುದಿಲ್ಲ. ಅಲ್ಲದೆ ಇಂಥಹ ಪ್ರತಿಕ್ರಿಯೆಗಳು ಕಾನೂನಾತ್ಮಕವಾಗಿ ಅಪರಾಧವಾಗಿದ್ದು, ಸಂಬಧಪಟ್ಟ ಇಲಾಖೆ ಮಾಹಿತಿಯನ್ನು ಕೇಳಿದರೆ ನಿಮ್ಮ ಸಂಪೂರ್ಣ ಹೆಸರು ಮತ್ತು ಐ.ಪಿ ವಿಳಾಸವನ್ನು ಒದಗಿಸಲು "ನ್ಯೂಸ್ ಕನ್ನಡ" ಬದ್ದವಾಗಿರುತ್ತದೆ.

ಕಣ್ಣೂರು: ಯುವ ಕಾಂಗ್ರೆಸ್ ಮುಖಂಡ ಶುಹೈಬ್ ಬರ್ಬರ ಹತ್ಯೆ!

ಮುಂದಿನ ಸುದ್ದಿ »

ಆರ್’ಟಿಐ ನಿರ್ಲಕ್ಷ್ಯ: ನಿರ್ಗಮಿತ ಕ್ಷೇತ್ರಶಿಕ್ಷಣಾಧಿಕಾರಿ ಬಿ.ಜಗದೀಶ್ ಗೆ ದಂಡ

ಇತ್ತೀಚಿನ ಸುದ್ದಿಗಳು

ಸಿನೆಮಾ

ಹೆಚ್ಚಿನ ಸುದ್ದಿ

More

ನೆನಪಿನ ಸಂಚಿ

ಹೆಚ್ಚಿನ ಸುದ್ದಿ

More
Menu
×