Sunday December 3 2017

Follow on us:

Contact Us

ನಮ್ಮ ಪಕ್ಷವು ಅಧಿಕಾರಕ್ಕೆ ಬಂದರೆ ಎಸ್ಸಿ ಸಮುದಾಯಕ್ಕೆ ಉಪಮುಖ್ಯಮಂತ್ರಿ ಸ್ಥಾನ

ನ್ಯೂಸ್ ಕನ್ನಡ ವರದಿ: ಕರ್ನಾಟಕದಲ್ಲಿ ಮುಂದಿನ ವರ್ಷ ನಡೆಯಲಿರುವ ವಿಧಾನಸಭಾ ಚುನಾವಣೆಯ ಪ್ರಚಾರದ ಅಖಾಡಕ್ಕೆ ಇಳಿದಿರುವ ಜಾತ್ಯಾತೀತ ಜನತಾದಳದ ನಾಯಕ ಕುಮಾರಸ್ವಾಮಿ, ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಸಿದ್ದರಾಮಯ್ಯ ತಾವೇ ಮುಂದಿನ ಮುಖ್ಯಮಂತ್ರಿ ಅಭ್ಯರ್ಥಿ ಎಂದು ಬಿಂಬಿಸಿಕೊಳ್ಳುವ ಮೂಲಕ ದಲಿತ ನಾಯಕರಾದ ಜಿ ಪರಮೇಶ್ವರ ಹಾಗೂ ಮಲ್ಲಿಕಾರ್ಜುನ್ ಖರ್ಗೆ ಅವರನ್ನು ಕಡೆಗಣಿಸಿದ್ದಾರೆ. ಅವರಿಗೆ ದಲಿತರ ಬಗ್ಗೆ ಯಾವುದೇ ಬದ್ದತೆ ಇಲ್ಲ ಮತ್ತು ಅವರ ಬಗ್ಗೆ ಮಾತನಾಡುವ ನೈತಿಕತೆ ಇಲ್ಲ ಎಂದು ಟೀಕಿಸಿದ್ದಾರೆ.

ಇಷ್ಟೇ ಅಲ್ಲದೇ ಮಹತ್ತರ ಘೋಷಣೆಯನ್ನು ಮಾಡಿದ ಜೆಡಿಎಸ್ ರಾಜ್ಯಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ, ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಜೆಡಿಎಸ್‌ ಅಧಿಕಾರಕ್ಕೆ ಬಂದರೆ ಎಸ್ಸಿ ಸಮುದಾಯದವರನ್ನು ಉಪ ಮುಖ್ಯಮಂತ್ರಿ ಮಾಡುವುದಾಗಿ ಹೇಳಿದರು. ಕಾಂಗ್ರೆಸ್‌ ಹಾಗೂ ಬಿಜೆಪಿಗೆ ತಾಕತ್ತಿದ್ದರೆ ಈ ರೀತಿ ಘೋಷಣೆ ಮಾಡಲಿ ಎಂದು ಚಾಲೆಂಜ್ ಹಾಕಿದ್ದಾರೆ.

Comments

ಸೂಚನೆ : ಯಾವುದೇ ತೆರನಾದ ಧಾರ್ಮಿಕ, ರಾಜಕೀಯ ಮತ್ತು ವ್ಯಕ್ತಿ ನಿಂದನಾತ್ಮಕ ಪ್ರತಿಕ್ರಿಯೆಗಳನ್ನಾಗಲೀ, ಭಾರತ ಒಕ್ಕೂಟ ವ್ಯವಸ್ಥೆಯಡಿ ಬರುವ ಪ್ರದೇಶ, ಭಾಷೆ ಅಥವಾ ಸಂಸ್ಕೃತಿಯನ್ನು ತೆಗಳುವ ಪ್ರತಿಕ್ರಿಯೆಯನ್ನಾಗಲೀ, ಸಾಮಾಜಿಕ ಸ್ವಾಸ್ಥ್ಯದ ಮೇಲೆ ಪರಿಣಾಮ ಬೀರುವ ಅಸಭ್ಯ, ಅಶ್ಲೀಲ ಪ್ರತಿಕ್ರಿಯೆಯನ್ನಾಗಲೀ ಹಾಕಬಾರದಾಗಿ ವಿನಂತಿ. ನಿಮ್ಮ ಪ್ರತಿಕ್ರಿಯೆಗೆ ಆಯಾ ವ್ಯಕ್ತಿ ಸಂಪೂರ್ಣವಾಗಿ ಜವಾಬ್ದಾರರಾಗಿದ್ದು "ನ್ಯೂಸ್ ಕನ್ನಡ" ಬಳಗ ಜವಾಬ್ದಾರರಾಗಿರುವುದಿಲ್ಲ. ಅಲ್ಲದೆ ಇಂಥಹ ಪ್ರತಿಕ್ರಿಯೆಗಳು ಕಾನೂನಾತ್ಮಕವಾಗಿ ಅಪರಾಧವಾಗಿದ್ದು, ಸಂಬಧಪಟ್ಟ ಇಲಾಖೆ ಮಾಹಿತಿಯನ್ನು ಕೇಳಿದರೆ ನಿಮ್ಮ ಸಂಪೂರ್ಣ ಹೆಸರು ಮತ್ತು ಐ.ಪಿ ವಿಳಾಸವನ್ನು ಒದಗಿಸಲು "ನ್ಯೂಸ್ ಕನ್ನಡ" ಬದ್ದವಾಗಿರುತ್ತದೆ.

ಟಾಲಿವುಡ್ ಗೆ ಪರಿಚಯಿಸಿದ ನಿರ್ಮಾಪಕನಿಗೇ ಶಾಕ್ ನೀಡಿದ ಪ್ರೇಮಂನ ಮಲರ್!

ಮುಂದಿನ ಸುದ್ದಿ »

ಈ ಮಾಡೆಲ್ ತನ್ನ ಬಲಕಣ್ಣುಗುಡ್ಡೆಯನ್ನು ಕಳೆದುಕೊಳ್ಳಲು ಕಾರಣವೇನು ಗೊತ್ತೇ?

ಸಿನೆಮಾ

ಹೆಚ್ಚಿನ ಸುದ್ದಿ

More

ನೆನಪಿನ ಸಂಚಿ

ಹೆಚ್ಚಿನ ಸುದ್ದಿ

More

ಭೂತಗನ್ನಡಿ

ಹೆಚ್ಚಿನ ಸುದ್ದಿ

More
Menu
×