Friday October 20 2017

Follow on us:

Contact Us

ಎಸ್ ಐ ಓ ಸಂಸ್ಥಾಪನಾ ದಿನ: ಧ್ವಜಾರೋಹಣ, ಬಡ ಕುಟುಂಬಕ್ಕೆ ರೇಷನ್ ವಿತರಣೆ

ನ್ಯೂಸ್ ಕನ್ನಡ ವರದಿ-(20.10.17): ಬಂಟ್ವಾಳ: ಸ್ಟೂಡೆಂಟ್ಸ್ ಇಸ್ಲಾಮಿಕ್ ಆರ್ಗನೈಝೇಶನ್ ಆಫ್ ಇಂಡಿಯಾ(ಎಸ್ ಐ ಓ) 35 ನೇ ವರ್ಷದ ಸಂಸ್ಥಾಪನಾ ದಿನದ(ಅಕ್ಟೋಬರ್ 19) ಹಿನ್ನೆಲೆಯಲ್ಲಿ ಎಸ್ ಐ ಓ ಪಾಣೆಮಂಗಳೂರು ಶಾಖೆಯ ವತಿಯಿಂದ ಪಾಣೆಮಂಗಳೂರು ಬಸ್ ನಿಲ್ದಾಣದ ಬಳಿ ಧ್ವಜಾರೋಹಣ ನಡೆಸಲಾಯಿತು.

ಎಸ್ ಐ ಓ ಮಾಜಿ ದ.ಕ. ಜಿಲ್ಲಾ ಸಂಚಾಲಕ ಅಬ್ದುಲ್ ಜಲಾಲ್ ಚೆಂಡಾಡಿ ಧ್ವಜಾರೋಹಣ ನೆರವೇರಿಸಿದರು. ಜಮಾಅತೆ ಇಸ್ಲಾಮೀ ಹಿಂದ್ ಪಾಣೆಮಂಗಳೂರು ಶಾಖೆಯ ಅಧ್ಯಕ್ಷ ಮುಖ್ತಾರ್ ಅಹ್ಮದ್ ಮಾತನಾಡಿ, ಎಸ್ ಐ ಓ ಸಂಘಟನೆಯು ಸಮಾಜಕ್ಕೆ ಉತ್ತಮ ನಾಯಕರನ್ನು ನೀಡಿದ್ದು, ಅವರಿಂದು ಉನ್ನತಮಟ್ಟದ ವ್ಯಕ್ತಿಗಳಾಗಿ ಗುರುತಿಸಿಕೊಂಡು ಸಮಾಜ ಮುಖಿಯಾಗಿ ಕೆಲಸ ಮಾಡುತ್ತಿದ್ದಾರೆ. ತನ್ನ ಸಿದ್ಧಾಂತದೊಂದಿಗೆ ರಾಜಿ ಮಾಡಿಕೊಳ್ಳದೆ ಮುಂದುವರಿಯುತ್ತಿರುವುದರಿಂದ ಎಸ್ ಐ ಓ ಇಂದು ರಾಷ್ಟಮಟ್ಟದಲ್ಲಿ ಗುರುತಿಸಿಕೊಳ್ಳಲು ಕಾರಣವಾಗಿದೆ ಎಂದರು.

ಎಸ್ ಐ ಓ ರಾಜ್ಯ ಕಾರ್ಯದರ್ಶಿ ದಾನಿಶ್ ಪಾಣೆಮಂಗಳೂರು ಎಸ್ ಐ ಓ ನಡೆದು ಬಂದ ಹಾದಿಯ ಬಗ್ಗೆ ಮಾತನಾಡಿದರು. ಎಸ್ ಐ ಓ ಜಿಲ್ಲಾ ಕಾರ್ಯದರ್ಶಿ ಇರ್ಷಾದ್ ವೇಣೂರ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಈ ಸಂದರ್ಭದಲ್ಲಿ ಜಮಾಅತೆ ಇಸ್ಲಾಮೀ ಹಿಂದ್ ನ ಅಬ್ದುಲ್ಲಾ ಚೆಂಡಾಡಿ, ಅಮಾನುಲ್ಲಾ ಖಾನ್ ತರೀಕೆರೆ, ಶಾಹುಲ್ ಹಮೀದ್ ಪರ್ಲಿಯಾ, ಎಸ್ ಐ ಓ ಪಾಣೆಮಂಗಳೂರು ಶಾಖೆಯ ಅಧ್ಯಕ್ಷ ತಮೀಝ್ ಅಲಿ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು. ಮುಬಾರಿಶ್ ಚೆಂಡಾಡಿ ನಿರೂಪಿಸಿದರು. ರಿಝ್ವಾನ್ ಬೋಳಂಗಡಿ ಕಿರಾಅತ್ ಪಠಿಸಿದರು.

ಬಡ ಕುಟುಂಬಕ್ಕೆ ಮಾಸಿಕ ರೇಷನ್ ವಿತರಣೆ: ಸಂಸ್ಥಾಪನಾ ದಿನದ ಹಿನ್ನೆಲೆಯಲ್ಲಿ ಬಂಟ್ವಾಳ ತಾಲೂಕಿನ ಕುಕ್ಕಾಜೆ ಸರಕಾರಿ ಶಾಲೆಯಲ್ಲಿ ಕಳೆದ ಎರಡು ವರ್ಷಗಳ ಹಿಂದೆ ಮೈದಾನದಲ್ಲಿ ಆಟವಾಡುತ್ತಿದ್ದ ಸಂದರ್ಭದಲ್ಲಿ ಜಾರುಬಂಡಿ ಬಿದ್ದು, ಗಾಯಾಳುವಾಗಿ ಚಿಕಿತ್ಸೆ ಪಡೆಯುತ್ತಿರುವ ಕುಕ್ಕಾಜೆಯ ವಿದ್ಯಾರ್ಥಿ ಮುಹಮ್ಮದ್ ಶಾಹಿದ್ ನ ಕುಟುಂಬಕ್ಕೆ ಒಂದು ತಿಂಗಳ ರೇಷನ್ ಅನ್ನು ವಿತರಿಸಲಾಯಿತು.

Comments

ಸೂಚನೆ : ಯಾವುದೇ ತೆರನಾದ ಧಾರ್ಮಿಕ, ರಾಜಕೀಯ ಮತ್ತು ವ್ಯಕ್ತಿ ನಿಂದನಾತ್ಮಕ ಪ್ರತಿಕ್ರಿಯೆಗಳನ್ನಾಗಲೀ, ಭಾರತ ಒಕ್ಕೂಟ ವ್ಯವಸ್ಥೆಯಡಿ ಬರುವ ಪ್ರದೇಶ, ಭಾಷೆ ಅಥವಾ ಸಂಸ್ಕೃತಿಯನ್ನು ತೆಗಳುವ ಪ್ರತಿಕ್ರಿಯೆಯನ್ನಾಗಲೀ, ಸಾಮಾಜಿಕ ಸ್ವಾಸ್ಥ್ಯದ ಮೇಲೆ ಪರಿಣಾಮ ಬೀರುವ ಅಸಭ್ಯ, ಅಶ್ಲೀಲ ಪ್ರತಿಕ್ರಿಯೆಯನ್ನಾಗಲೀ ಹಾಕಬಾರದಾಗಿ ವಿನಂತಿ. ನಿಮ್ಮ ಪ್ರತಿಕ್ರಿಯೆಗೆ ಆಯಾ ವ್ಯಕ್ತಿ ಸಂಪೂರ್ಣವಾಗಿ ಜವಾಬ್ದಾರರಾಗಿದ್ದು "ನ್ಯೂಸ್ ಕನ್ನಡ" ಬಳಗ ಜವಾಬ್ದಾರರಾಗಿರುವುದಿಲ್ಲ. ಅಲ್ಲದೆ ಇಂಥಹ ಪ್ರತಿಕ್ರಿಯೆಗಳು ಕಾನೂನಾತ್ಮಕವಾಗಿ ಅಪರಾಧವಾಗಿದ್ದು, ಸಂಬಧಪಟ್ಟ ಇಲಾಖೆ ಮಾಹಿತಿಯನ್ನು ಕೇಳಿದರೆ ನಿಮ್ಮ ಸಂಪೂರ್ಣ ಹೆಸರು ಮತ್ತು ಐ.ಪಿ ವಿಳಾಸವನ್ನು ಒದಗಿಸಲು "ನ್ಯೂಸ್ ಕನ್ನಡ" ಬದ್ದವಾಗಿರುತ್ತದೆ.

ಉಡುಪಿ ಜಿಲ್ಲಾ ಎನ್.ಎಸ್.ಯು.ಐ ವತಿಯಿಂದ ವಿಶ್ವಾಸದ ಮನೆಯಲ್ಲಿ ದೀಪಾವಳಿ ಆಚರಣೆ

ಮುಂದಿನ ಸುದ್ದಿ »

ಹಿರಿಯ ಪತ್ರಕರ್ತ ಜಯಂತ್ ಪಡುಬಿದ್ರಿ ವಿಧಿವಶ

ಇತ್ತೀಚಿನ ಸುದ್ದಿಗಳು

ಸಿನೆಮಾ

  • ಜಬ್ಬಾರ್ ಎಂಬೋ ಜಬರ್ ದಸ್ತ್ ಶಕ್ತಿ ಮತ್ತು ಸ್ಫೂರ್ತಿ!

    January 9, 2018

    ಅಬ್ದುಲ್ ಜಬ್ಬಾರ್ ಪೊನ್ನೋಡಿ ಮತ್ತು ಸಹಕಲಾವಿದೆ ಮಂಜು ವರ್ಷಾ; ಈ ಇಬ್ಬರನ್ನೂ ನಾನು ಅಪ್ಪಿಕೊಂಡು, ಮುತ್ತಿಟ್ಟು ಶುಭ ಹಾರೈಸಿ ಈಗ ಚಿತ್ರೀಕರಣ ಪ್ರಾರಂಭಿಸೋಣ ಎಂದು ಹೇಳಿದ್ದೇ ಮುಹೂರ್ತ. ಚಿತ್ರೀಕರಣ ಆರಂಭವಾಯಿತು. ಕನ್ನಡ ಮತ್ತು ಇಂಗ್ಲೀಷ್ ಎರಡೂ ಭಾಷೆಗಳ ...

    Read More

ಹೆಚ್ಚಿನ ಸುದ್ದಿ

More

ನೆನಪಿನ ಸಂಚಿ

ಹೆಚ್ಚಿನ ಸುದ್ದಿ

More

ಭೂತಗನ್ನಡಿ

ಹೆಚ್ಚಿನ ಸುದ್ದಿ

More
Menu
×