Saturday October 21 2017

Follow on us:

Contact Us

ಜಿಲ್ಲೆಯಲ್ಲಿ ವ್ಯಾಪಕ ಮಾದಕ ಜಾಲ: ಸೂಕ್ತ ಕ್ರಮಕ್ಕೆ ಆಗ್ರಹಿಸಿ ದ.ಕ. ಜಿಲ್ಲಾಧಿಕಾರಿಗೆ ಎಸ್’ಐಓ ಮನವಿ

ನ್ಯೂಸ್ ಕನ್ನಡ ವರದಿ-(21.10.17): ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳೆದ ಹಲವಾರು ವರ್ಷಗಳಿಂದ ಹಲವಾರು ಕಾಲೇಜು ಕ್ಯಾಂಪಸ್ ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಡ್ರಗ್ಸ್ ಮತ್ತು ವಿಶೇಷವಾಗಿ ಗಾಂಜಾದಂತಹ ಮಾದಕ ದ್ರವ್ಯ ಮತ್ತು ಅಮಲು ಪದಾರ್ಥಗಳು ವ್ಯಾಪಕವಾಗುತ್ತಿದ್ದು, ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ ಸ್ಟೂಡೆಂಟ್ಸ್ ಇಸ್ಲಾಮಿಕ್ ಆರ್ಗನೈಝೇಶನ್ ಆಫ್ ಇಂಡಿಯಾ(ಎಸ್‍ಐಓ) ದಕ್ಷಿಣ ಕನ್ನಡ ಜಿಲ್ಲಾ ಘಟಕದ ನಿಯೋಗವು ದ.ಕ. ನೂತನ ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ರವರಿಗೆ ಇಂದು ಮನವಿ ಸಲ್ಲಿಸಲಾಯಿತು.

ದ.ಕ. ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಅಧಿಕಾರ ಸ್ವೀಕರಿಸಿದ ಹಿನ್ನೆಲೆಯಲ್ಲಿ ಶುಭಾಶಯ ಕೋರಿದ ಎಸ್ ಐ ಓ ದ.ಕ. ಜಿಲ್ಲಾಧ್ಯಕ್ಷ ತಲ್ಹಾ ಇಸ್ಮಾಯೀಲ್ ನೇತೃತ್ವದ ನಿಯೋಗವು, ಜಿಲ್ಲೆಯಲ್ಲಿ ಮಾದಕ ದ್ರವ್ಯ ಮತ್ತು ಅಮಲು ಪದಾರ್ಥಗಳ ಜಾಲವು ಇಂದು ಕ್ಯಾಂಪಸ್ ಸಹಿತ ಸಾರ್ವಜನಿಕ ಸ್ಥಳಗಳಲ್ಲಿ ಅವ್ಯಾಹತವಾಗಿ ನಡೆಯುತ್ತಿದ್ದು, ವಿದ್ಯಾರ್ಥಿ ಸಮುದಾಯವನ್ನು ತೀವ್ರವಾಗಿ ಬಾಧಿಸಿರುವುದು ಎಸ್‍ಐಓ ಗಮನಿಸಿದೆ.

ಇದಕ್ಕೆ ಸ್ಪಷ್ಟ ಉದಾಹರಣೆ ಎಂಬಂತೆ ಕಳೆದ ಎರಡು ವಾರಗಳಿಂದ ಪತ್ರಿಕೆ ಹಾಗೂ ಮಾಧ್ಯಮಗಳಲ್ಲಿ ವರದಿಯಾಗಿರುವ ವಿಶೇಷ ವರದಿಗಳು ಇದಕ್ಕೆ ಸಾಕ್ಷಿಯಾಗಿವೆ. ಅಲ್ಲದೇ, ಇತ್ತೀಚೆಗೆ ಉಳ್ಳಾಲ ಪ್ರದೇಶದಲ್ಲಿ ಡ್ರಗ್ ಮಾಫಿಯಾಕ್ಕೆ ಝುಬೈರ್ ಎಂಬ ವ್ಯಕ್ತಿಯನ್ನು ಕೊಲೆಗೈಯ್ಯಲಾಗಿದೆ. ಜೊತೆಗೆ ಉಳ್ಳಾಲ, ಬೆಂಗ್ರೆಯಂತಹ ಪ್ರದೇಶದಲ್ಲಿ ಅವ್ಯಾಹತವಾಗಿ ನಡೆಯುತ್ತಿರುವ ಡ್ರಗ್ ಜಾಲದ ಬಗ್ಗೆ ಕೆಲವು ಪತ್ರಿಕೆಗಳು ವರದಿ ಕೂಡ ಮಾಡಿದೆ. ಬೆದರಿಕೆ, ಹಲ್ಲೆಗಳು ನಡೆಯುತ್ತಿದ್ದು, ಡ್ರಗ್ ವಿರುದ್ಧ ಕೆಲಸ ಮಾಡುವ ಜನರಿಗೆ ಧೈರ್ಯ ತುಂಬುವಂತಹಾ ಕೆಲಸಗಳು ಆಗಬೇಕಾದ ಅವಶ್ಯಕತೆ ಇದೆ ಎಂದು ಎಸ್ ಐ ಓ ಮನವಿಯಲ್ಲಿ ಒತ್ತಾಯಿಸಿದೆ.

ಪರಿಸ್ಥಿತಿಯ ಗಂಭೀರತೆಯನ್ನು ಪರಿಗಣಿಸಿ, SIO ವು ಕೆಳಗಿನ ಬೇಡಿಕೆಗಳನ್ನು ಜಿಲ್ಲಾಧಿಕಾರಿಗಳಿಗೆ ಮುಂದಿಟ್ಟಿದ್ದು, ಈ ಬೇಡಿಕೆಗಳನ್ನು ಪೂರೈಸಬೇಕೆಂದು ಆಗ್ರಹಿಸಿದೆ.

  1. ಮಾದಕ ಪದಾರ್ಥಗಳ ಮಾರಾಟ ಜಾಲದ ಮೂಲವನ್ನು ಪತ್ತೆ ಹಚ್ಚಿ, ಶೀಘ್ರವೇ ಅದರ ನಿರ್ಮೂಲನೆ ಮಾಡಬೇಕು.
  2. ಮಂಗಳೂರು ನಗರದ ಹೊರವಲಯದಿಂದ ಕ್ಯಾಂಪಸ್‍ಗಳಿಗೆ ಮಾದಕ ಪದಾರ್ಥಗಳನ್ನು ತಲುಪಿಸುವ ಮಧ್ಯವರ್ತಿಗಳ ಜಾಲವನ್ನು ತಡೆಯಬೇಕು ಮತ್ತು ಅವರನ್ನು ಕಾನೂನು ರೀತಿಯಲ್ಲಿ ಶಿಕ್ಷಿಸಬೇಕು.
  3. ಕ್ಯಾಂಪಸ್‍ಗಳಲ್ಲಿರುವAnti Drug Cell ಅನ್ನು ಬಲಪಡಿಸಬೇಕು ಮತ್ತು ಅದರ ಕಾರ್ಯ ಚಟುವಟಿಕೆಯನ್ನು ಫಲಪ್ರದಗೊಳಿಸುವಂತೆ ನಿಗಾ ವಹಿಸಬೇಕು.
  4. ಕೇರಳ ಮಾದರಿAnti Drugಪೊಲೀಸ್ ಕಾರ್ಯಾಚರಣೆಯನ್ನು(ವಿದ್ಯಾರ್ಥಿಗಳ ಹೆಸರು ಬಯಲು ಮಾಡದೆ ಕ್ಯಾಂಪಸ್ ಮುಖ್ಯಸ್ಥರು ಮತ್ತು ವಿದ್ಯಾರ್ಥಿಯ ಪೋಷಕರ ಮಧ್ಯಸ್ಥಿಕೆಯಲ್ಲಿ ಅದನ್ನು ಪರಿಹರಿಸಬೇಕು.) ನಡೆಸಬೇಕು.
  5. ಮಾದಕ ವ್ಯಸನಿಗಳ ಪುನರ್ವಸತಿಯ ಕುರಿತು ಪೊಲೀಸ್ ಇಲಾಖೆಯು ಇತರ ಸಂಘ ಸಂಸ್ಥೆಗಳ ಸಹಕಾರದೊಂದಿಗೆ ಜಾಗೃತಿಗಾಗಿ ನಿರಂತರ ಶ್ರಮಿಸಬೇಕು.
  6. ಜಿಲ್ಲೆಯಾದ್ಯಂತ ಮಾದಕ ದ್ರವ್ಯದ ದುಷ್ಪರಿಣಾಮ ಮತ್ತು ಈ ಅಪರಾಧದ ಬಗೆಗಿನ ಕಾನೂನು ಜಾಗೃತಿಯನ್ನು ಮೂಡಿಸಬೇಕು.
  7. ನಗರದಲ್ಲಿ ಮತ್ತು ನಗರದ ಹೊರವಲಯದಲ್ಲಿ ಮಾದಕ ವ್ಯಸನದ ಪ್ರಭಾವ ಹೆಚ್ಚಾಗುತ್ತಿದೆಯೋ ಅಲ್ಲಿ ಸಾಮಾಜಿಕ, ಶೈಕ್ಷಣಿಕ, ರಾಜಕೀಯ, ಧಾರ್ಮಿಕ ಮತ್ತು ವಿದ್ಯಾರ್ಥಿ ನಾಯಕರ ಸಭೆಯನ್ನು ಆಯೋಜಿಸಿ ಪರಿಹಾರ ಕಾರ್ಯಗಳ ಕುರಿತು ಚರ್ಚಿಸಬೇಕು.
  8. ಶಾಲಾ ಕಾಲೇಜಿನ 100 ಮೀಟರ್ ಅಂತರದಲ್ಲಿ ಬೀಡಿ, ಸಿಗರೇಟು, ಗುಟ್ಕಾ, ಮದ್ಯಪಾನ ಮುಂತಾದವುಗಳ ನಿಷೇಧ ಕಾನೂನು ಇದ್ದರೂ ಹಲವೆಡೆ ಅಂಗಡಿಗಳ ಹಿಂಬದಿಯ ಬಾಗಿಲುಗಳ ಮೂಲಕ ಅದರ ಮಾರಾಟ ನಡೆಯುತ್ತಿರುವುದು ಗಮನಿಸಬಹುದಾಗಿದೆ. ಇದನ್ನು ಶೀಘ್ರವಾಗಿ ತಡೆಗಟ್ಟುವಂತೆ ಮಾಡಬೇಕು.
  9. ಜಿಲ್ಲೆಯಾದ್ಯಂತ ವ್ಯಾಪಕವಾಗುತ್ತಿರುವ ಮಾದಕ ವ್ಯಸನದ ಪ್ರಭಾವದ ಕುರಿತು ಕಾನೂನು ತಜ್ಞರು, ಸಮಾಜ ಸೇವಕರು, ಸಂಶೋಧನಾ ವಿದ್ಯಾರ್ಥಿಗಳು ಮತ್ತು ಬುದ್ಧಿ ಜೀವಿಗಳನ್ನೊಳಗೊಂಡ ಒಂದು ತಂಡದಿಂದ ಜಿಲ್ಲೆಯ ಅಧ್ಯಯನ, ಪರಿಸ್ಥಿಯ ಅವಲೋಕನ ಮತ್ತು ಪರಿಹಾರ ಕಾರ್ಯಗಳ ಕುರಿತು ತೀರ್ಮಾನಗಳನ್ನು ಕೈಗೊಳ್ಳಬೇಕು.

ಈ ಬಗ್ಗೆ ಪೊಲೀಸ್ ಕಮಿಷನರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು, ಸಾರ್ವಜನಿಕರು ಹಾಗೂ ಸಂಘ-ಸಂಸ್ಥೆಗಳೊಂದಿಗೆ ಚರ್ಚಿಸಿ, ಶೀಘ್ರವಾಗಿ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು. ನಿಯೋಗದಲ್ಲಿ ಎಸ್ ಐ ಓ ಜಿಲ್ಲಾ ಕಾರ್ಯದರ್ಶಿ ಇರ್ಷಾದ್ ವೇಣೂರ್, ಜಿಲ್ಲಾ ಕ್ಯಾಂಪಸ್ ಕಾರ್ಯದರ್ಶಿ ಅಫ್ನಾನ್ ಹಸನ್, ಎಸ್ ಐ ಓ ಮಂಗಳೂರು ನಗರ ಕಾರ್ಯದರ್ಶಿ ಮುಂಝಿರ್ ಅಹ್ಸನ್ ಉಪಸ್ಥಿತರಿದ್ದರು.

Comments

ಸೂಚನೆ : ಯಾವುದೇ ತೆರನಾದ ಧಾರ್ಮಿಕ, ರಾಜಕೀಯ ಮತ್ತು ವ್ಯಕ್ತಿ ನಿಂದನಾತ್ಮಕ ಪ್ರತಿಕ್ರಿಯೆಗಳನ್ನಾಗಲೀ, ಭಾರತ ಒಕ್ಕೂಟ ವ್ಯವಸ್ಥೆಯಡಿ ಬರುವ ಪ್ರದೇಶ, ಭಾಷೆ ಅಥವಾ ಸಂಸ್ಕೃತಿಯನ್ನು ತೆಗಳುವ ಪ್ರತಿಕ್ರಿಯೆಯನ್ನಾಗಲೀ, ಸಾಮಾಜಿಕ ಸ್ವಾಸ್ಥ್ಯದ ಮೇಲೆ ಪರಿಣಾಮ ಬೀರುವ ಅಸಭ್ಯ, ಅಶ್ಲೀಲ ಪ್ರತಿಕ್ರಿಯೆಯನ್ನಾಗಲೀ ಹಾಕಬಾರದಾಗಿ ವಿನಂತಿ. ನಿಮ್ಮ ಪ್ರತಿಕ್ರಿಯೆಗೆ ಆಯಾ ವ್ಯಕ್ತಿ ಸಂಪೂರ್ಣವಾಗಿ ಜವಾಬ್ದಾರರಾಗಿದ್ದು "ನ್ಯೂಸ್ ಕನ್ನಡ" ಬಳಗ ಜವಾಬ್ದಾರರಾಗಿರುವುದಿಲ್ಲ. ಅಲ್ಲದೆ ಇಂಥಹ ಪ್ರತಿಕ್ರಿಯೆಗಳು ಕಾನೂನಾತ್ಮಕವಾಗಿ ಅಪರಾಧವಾಗಿದ್ದು, ಸಂಬಧಪಟ್ಟ ಇಲಾಖೆ ಮಾಹಿತಿಯನ್ನು ಕೇಳಿದರೆ ನಿಮ್ಮ ಸಂಪೂರ್ಣ ಹೆಸರು ಮತ್ತು ಐ.ಪಿ ವಿಳಾಸವನ್ನು ಒದಗಿಸಲು "ನ್ಯೂಸ್ ಕನ್ನಡ" ಬದ್ದವಾಗಿರುತ್ತದೆ.

ಒಂಟಿಯಾಗಿದ್ದ ವೃದ್ಧೆಯ ಮನೆಯಲ್ಲಿ ದೀಪಾವಳಿ ಆಚರಿಸಿದ ಪಡುಬಿದ್ರಿ ರೋಟರಿ ಕ್ಲಬ್ ಸದಸ್ಯರು

ಮುಂದಿನ ಸುದ್ದಿ »

ರಕ್ತದಾನ ಮನುಷ್ಯ ಸಂಬಂಧವನ್ನು ಹೆಚ್ಚಿಸುತ್ತದೆ: ನಾಗರಾಜ ಹರಪನಹಳ್ಳಿ

ಸಿನೆಮಾ

ಹೆಚ್ಚಿನ ಸುದ್ದಿ

More

ನೆನಪಿನ ಸಂಚಿ

ಹೆಚ್ಚಿನ ಸುದ್ದಿ

More
Menu
×