Tuesday January 10 2017

Follow on us:

Contact Us
sullia jathre1

ಸುಳ್ಯ ಶ್ರೀಚೆನ್ನಕೇಶವನಿಗೆ ಜಾತ್ರೋತ್ಸವ ಸಂಭ್ರಮ

ನ್ಯೂಸ್ ಕನ್ನಡ ವರದಿ(10.01.2017)-ಸುಳ್ಯ: ಸುಳ್ಯ ಶ್ರೀ ಚೆನ್ನಕೇಶವ ದೇವರ ಜಾತ್ರೋತ್ಸವದ ಅಂಗವಾಗಿ ದೊಡ್ಡ ದರ್ಶನ ಬಲಿ, ಬಟ್ಟಲು ಕಾಣಿಕೆ, ಪ್ರಸಾದ ವಿತರಣೆ ನಡೆಯಿತು.

ಸೋಮವಾರ ರಾತ್ರಿ ಮಿತ್ತೂರು ಹಾಗೂ ಕಾನತ್ತಿಲ ದೈವಗಳ ಭಂಡಾರ ಬಂದು ವಾಲಸಿರಿ ಉತ್ಸವ ನಡೆಯಿತು. ದೇವಸ್ಥಾನದ ತಂತ್ರಿ ದೇಲಂಪಾಡಿ ಬಾಲಕೃಷ್ಣ ತಂತ್ರಿ ನೇತೃತ್ವದಲ್ಲಿ ವೈದಿಕ ಕಾರ್ಯಕ್ರಮಗಳು ನಡೆದವು. ಆಡಳಿತ ಮೊಕ್ತೇಸರ ಡಾ.ಹರಪ್ರಸಾದ್ ತುದಿಯಡ್ಕ, ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಡಾ.ಕೆ.ವಿ.ಚಿದಾನಂದ, ಸಮಿತಿ ಸದಸ್ಯರಾದ ಪಡ್ಡಂಬೈಲು ವೆಂಕಟ್ರಮಣ ಗೌಡ, ಲಿಂಗಪ್ಪ ಗೌಡ ಕೇರ್ಪಳ, ಕೆ.ಉಪೇಂದ್ರ ಕಾಮತ್, ಎಂ.ಮೀನಾಕ್ಷಿ ಗೌಡ, ಎನ್.ಎ.ರಾಮಚಂದ್ರ, ಎನ್.ಜಯಪ್ರಕಾಶ್ ರೈ, ರಮೇಶ್ ಬೈಪಾಡಿತ್ತಾಯ, ಎಒಎಲ್‍ಇ ನಿರ್ದೇಶಕರಾದ ಶೋಭಾ ಚಿದಾನಂದ, ಅಕ್ಷಯ್ ಕುರುಂಜಿ, , ಸವಣೂರು ವಿದ್ಯಾರಶ್ಮಿ ವಿದ್ಯಾಲಯದ ಸಂಚಾಲಕ ಸೀತಾರಾಮ ರೈ ಸವಣೂರು, ತಹಸೀಲ್ದಾರ್ ಎಂ.ಎಂ.ಗಣೇಶ್, ಕಂದಾಯ ನಿರೀಕ್ಷಕ ಅವಿನ್ ರಂಗತ್ತಮಲೆ, ಕೃಪಾಶಂಕರ ತುದಿಯಡ್ಕ, ಗಿರಿಜಾ ಶಂಕರ ತುದಿಯಡ್ಕ ಮೊದಲಾದ ಗಣ್ಯರು ಸೇರಿದಂತೆ ಸಾವಿರಾರು ಸಂಖ್ಯೆಯಲ್ಲಿ ಭಕ್ತರು ಉತ್ಸವದಲ್ಲಿ ಪಾಲ್ಗೊಂಡರು.

ಸುಳ್ಯ ಜಾತ್ರೋತ್ಸವ ಸಂದರ್ಭ ಚೊಕ್ಕಾಡಿಯ ಸತ್ಯಸಾಯಿ ಬಳಗ ಹಾಗೂ ಸುಳ್ಯದ ಶಿವಳ್ಳಿ ಸಂಪನ್ನದ ವತಿಯಿಂದ ಭಕ್ತರಿಗೆ ಉಚಿತ ಮಜ್ಜಿಗೆ, ಪಾನೀಯ ವಿತರಣೆ ನಡೆಯಿತು.

ದೇವಸ್ಥಾನದ ರಾಜಗೋಪುರದ ಎಡಬದಿಯಲ್ಲಿ ಸತ್ಯಸಾಯಿ ಬಳಗದವರು ಮಜ್ಜಿಗೆ ವಿತರಿಸಿದರೆ, ಸ್ವಾತಿಸಿಟಿ ಲಾಡ್ಜ್‍ನ ಎದುರು ಶಿವಳ್ಳಿ ಸಂಪನ್ನದಿಂದ ಮಜ್ಜಿಗೆ ಹಾಗು ಶರಬತ್ ವಿತರಣೆ ನಡೆಯಿತು. ಸಾವಿರಾರು ಭಕ್ತರು ಉಚಿತ ಪಾನೀಯವನ್ನು ಸ್ವೀಕರಿಸಿದರು.

ದೇವಸ್ಥಾನದ ಎದುರಿನ ಹೈಮಾಸ್ಟ್ ಬೀದಿದೀಪದ ಬಳಿ ವ್ಯಕ್ತಿಯೊಬ್ಬರು ಗಾಂಧೀಜಿಯ ಪ್ರತಿಮೆಯಂತೆ ನಿಂತಿದ್ದರು. ಅಡಿಕೆ ಧಾರಣೆ ಕುಸಿತ ಹಾಗೂ ಚಿಲ್ಲರೆ ಸಮಸ್ಯೆ ಇದ್ದರೂ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತ ಜನರು ಜಾತ್ರೋತ್ಸವದಲ್ಲಿ ಪಾಲ್ಗೊಂಡರು. ವರ್ಷದಂತೆ ಸಾಕಷ್ಟು ಸಂಖ್ಯೆಯಲ್ಲಿ ಸಂತೆ ಅಂಗಡಿಗಳು ಇದ್ದವು. ವಿಶೇಷ ಅಮ್ಯೂಸ್ ಮೆಂಟ್ ಪಾರ್ಕ್ ಕೂಡಾ ಜಾತ್ರೆಗೆ ಹೊಸ ಮೆರುಗು ತಂದಿತ್ತು.

nkdksgkp

Comments

ಸೂಚನೆ : ಯಾವುದೇ ತೆರನಾದ ಧಾರ್ಮಿಕ, ರಾಜಕೀಯ ಮತ್ತು ವ್ಯಕ್ತಿ ನಿಂದನಾತ್ಮಕ ಪ್ರತಿಕ್ರಿಯೆಗಳನ್ನಾಗಲೀ, ಭಾರತ ಒಕ್ಕೂಟ ವ್ಯವಸ್ಥೆಯಡಿ ಬರುವ ಪ್ರದೇಶ, ಭಾಷೆ ಅಥವಾ ಸಂಸ್ಕೃತಿಯನ್ನು ತೆಗಳುವ ಪ್ರತಿಕ್ರಿಯೆಯನ್ನಾಗಲೀ, ಸಾಮಾಜಿಕ ಸ್ವಾಸ್ಥ್ಯದ ಮೇಲೆ ಪರಿಣಾಮ ಬೀರುವ ಅಸಭ್ಯ, ಅಶ್ಲೀಲ ಪ್ರತಿಕ್ರಿಯೆಯನ್ನಾಗಲೀ ಹಾಕಬಾರದಾಗಿ ವಿನಂತಿ. ನಿಮ್ಮ ಪ್ರತಿಕ್ರಿಯೆಗೆ ಆಯಾ ವ್ಯಕ್ತಿ ಸಂಪೂರ್ಣವಾಗಿ ಜವಾಬ್ದಾರರಾಗಿದ್ದು "ನ್ಯೂಸ್ ಕನ್ನಡ" ಬಳಗ ಜವಾಬ್ದಾರರಾಗಿರುವುದಿಲ್ಲ. ಅಲ್ಲದೆ ಇಂಥಹ ಪ್ರತಿಕ್ರಿಯೆಗಳು ಕಾನೂನಾತ್ಮಕವಾಗಿ ಅಪರಾಧವಾಗಿದ್ದು, ಸಂಬಧಪಟ್ಟ ಇಲಾಖೆ ಮಾಹಿತಿಯನ್ನು ಕೇಳಿದರೆ ನಿಮ್ಮ ಸಂಪೂರ್ಣ ಹೆಸರು ಮತ್ತು ಐ.ಪಿ ವಿಳಾಸವನ್ನು ಒದಗಿಸಲು "ನ್ಯೂಸ್ ಕನ್ನಡ" ಬದ್ದವಾಗಿರುತ್ತದೆ.

ಕಾಮಗಾರಿಯಾದರೂ ನೀರು ಪೂರೈಕೆಯಿಲ್ಲ: ಅಧಿಕಾರಿಗಳಿಂದ ಅವ್ಯವಹಾರ ಜಿ.ಪಂ. ಸದಸ್ಯರಿಂದ ಆರೋಪ

ಮುಂದಿನ ಸುದ್ದಿ »

ಧರ್ಮಸ್ಥಳದ ಜಮೀನು ಸುಳ್ಯ ಚೆನ್ನಕೇಶವ ದೇವಸ್ಥಾನಕ್ಕೆ ಹಸ್ತಾಂತರ

ಸಿನೆಮಾ

 • bhavana

  ನಟಿ ಭಾವನಾರನ್ನು ಅಪಹರಿಸಿ, ಲೈಂಗಿಕ ಕಿರುಕುಳ ನೀಡಿದವನ ಬಂಧನ

  February 18, 2017

  ನ್ಯೂಸ್ ಕನ್ನಡ(18-2-2017): ಚಿತ್ರನಟಿ ಭಾವನಾ ಅವರನ್ನು ಅಪಹರಿಸಿ ಲೈಂಗಿಕ ಕಿರುಕುಳ ನೀಡಿದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಕೇರಳದ ಎರ್ನಾಕುಳಂನಲ್ಲಿ ಭಾವನಾ ಅವರನ್ನು ಅಪಹರಿಸಿದ್ದ ದುಷ್ಕರ್ಮಿಗಳು ಲೈಂಗಿಕ ಕಿರುಕುಳ ನೀಡಿದ್ದರು. ಪ್ರಕರಣಕ್ಕೆ ಸಂಬಂಧಿಸಿದಂತೆ ಭಾವನಾ ಅವರ ಕಾರು ಚಾಲಕನಾಗಿದ್ದ ...

  Read More
 • Marali Manege

  ಸೆನ್ಸಾರ್ ಮಂಡಳಿಯವರನ್ನೂ ಕಣ್ಣೀರು ಹಾಕಿಸಿದ ಚಿತ್ರ ಬಿಡುಗಡೆಗೆ ಸಿದ್ಧ

  February 16, 2017

  ಯೋಗೇಶ್ ಮಾಸ್ಟರ್ ನಿರ್ದೇಶನದ ಚಿತ್ರ ಸಂಘಪರಿವಾರ-ಪ್ರಗತಿಪರರ ಅಭಿಪ್ರಾಯವನ್ನೂ ಬದಲಿಸಬಹುದಂತೆ ನ್ಯೂಸ್ ಕನ್ನಡ ವರದಿ(16.02.2017)-ಮಂಗಳೂರು: ಯೋಗೇಶ್ ಮಾಸ್ಟರ್ ಅವರು ನಿರ್ದೇಶಿಸಿರುವ ‘ಮರಳಿ ಮನೆಗೆ’ ಕನ್ನಡ ಚಿತ್ರವು ಇದೀಗ ಚಿತ್ರರಂಗದಲ್ಲಿ ಹೊಸ ಸಂಚಲನವನ್ನು ಮೂಡಿಸಿದ್ದು, ನಾಯಕರ ವೈಭವೀಕರಣದ ಚಿತ್ರಗಳನ್ನೇ ನೋಡಿ ...

  Read More
 • kaabil-hoon-lyrics-title-song-hrithik-roshan-yami-gautam

  ಬಾಕ್ಸ್ ಆಫೀಸ್ ನಲ್ಲಿ “ಕಮಾಲ್” ಮಾಡಿದ “ಕಾಬಿಲ್”

  February 8, 2017

  ನ್ಯೂಸ್ ಕನ್ನಡ(8-2-2017): ಹೃತಿಕ್ ರೋಶನ್-ಯಾಮಿ ಗೌತಮ್ ನಟನೆಯ ಸಸ್ಪೆನ್ಸ್ ಥ್ರಿಲ್ಲರ್ ಚಲನಚಿತ್ರ “ಕಾಬಿಲ್” ಬಾಕ್ಸಾಫೀಸ್ ನಲ್ಲಿ ಕಮಾಲ್ ಮಾಡಿದ್ದು, ಸುಮಾರು 80 ಕೋಟಿ ರೂ. ಗಳಿಸಿದೆ. ವಿಮರ್ಶಕರಿಂದ ಉತ್ತಮ ಅಭಿಪ್ರಾಯ ಗಳಿಸಿದ ಕಾಬಿಲ್ ಎರಡನೆ ವಾರಾಂತ್ಯದಲ್ಲಿ 14.55 ...

  Read More

ಹೆಚ್ಚಿನ ಸುದ್ದಿ

More

ನೆನಪಿನ ಸಂಚಿ

ಹೆಚ್ಚಿನ ಸುದ್ದಿ

More

ಭೂತಗನ್ನಡಿ

ಹೆಚ್ಚಿನ ಸುದ್ದಿ

More
Menu
×