Friday August 11 2017

Follow on us:

Contact Us

ತುಳು ಭಾಷೆ 8ನೇ ಪರಿಚ್ಛೇದಕ್ಕೆ ಸೇರ್ಪಡೆ ಆಗ್ರಹಿಸಿ ಟ್ವಿಟರ್ ಅಭಿಯಾನ

ನ್ಯೂಸ್ ಕನ್ನಡ ವರದಿ-(11.08.17): ತುಳು ಭಾಷೆ 8ನೆ ಪರಿಚ್ಛೇದಕ್ಕೆ ಸೇರ್ಪಡೆಯಾಗಬೇಕೆಂಬ ನಿಟ್ಟಿನಲ್ಲಿ ಕೇಂದ್ರ ಮತ್ತು ರಾಜ್ಯ ಸರಕಾರಕ್ಕೆ ಹಕ್ಕೊತ್ತಾಯ ಮಂಡಿಸಲು ದೇಶ-ವಿದೇಶದಾದ್ಯಂತ ಗುರುವಾರ ನಡೆದ ಟ್ವಿಟರ್ ಅಭಿಯಾನಕ್ಕೆ ಅಭೂತಪೂರ್ವ ಬೆಂಬಲ ವ್ಯಕ್ತವಾಗಿದೆ.

ಬೆಳಗ್ಗೆ 6 ಗಂಟೆಯಿಂದಲೇ ಆರಂಭವಾದ ಈ ಅಭಿಯಾನ ರಾತ್ರಿ 9 ಗಂಟೆ ತನಕವೂ ಮುಂದುವರಿದಿತ್ತು. ಈ ಅಭಿಯಾನದಲ್ಲಿ ಸಿನಿ ತಾರೆಯರು, ರಾಜಕೀಯ ಮುಖಂಡರು, ಕನ್ನಡ ಸೇರಿದಂತೆ ವಿವಿಧ ಭಾಷಾ ಸಂಘಟನೆಗಳ ಮುಖಂಡರು, ಯುವಸಮುದಾಯ, ಕಾಲೇಜು ವಿದ್ಯಾರ್ಥಿಗಳು, ಕಲಾವಿದರು ಸೇರಿದಂತೆ ಸಾವಿರಾರು ಮಂದಿ ಈ ಟ್ವಿಟರ್ ಅಭಿಯಾನದಲ್ಲಿ ಪಾಲ್ಗೊಂಡು ಸರಕಾರಕ್ಕೆ ಹಕ್ಕೊತ್ತಾಯ ಮಂಡಿಸಿದರು.

ಟ್ವೀಟ್ ಕೇವಲ 1 ಅವಧಿಯಲ್ಲಿ 3 ಸಾವಿರ ದಾಟಿತ್ತು. ಸಂಜೆ 6 ಗಂಟೆ ಹೊತ್ತಿಗೆ ಟ್ವೀಟ್ ಸಂಖ್ಯೆ 30 ಸಾವಿರ ದಾಟುವುದರೊಂದಿಗೆ ಅದ್ಭುತ ಪ್ರತಿಕ್ರಿಯೆ ಕಂಡು ಬಂತು. ಈ ಸಂಖ್ಯೆ ಸಂಜೆ 8 ಗಂಟೆಯ ವೇಳೆಗೆ ಟ್ವೀಟ್ ಸಂಖ್ಯೆ 37,200 ದಾಟಿತು ಎನ್ನುತ್ತಾರೆ ಜೈತುಳುನಾಡು (ರಿ ) ಸಂಘಟನೆಯ ಅಧ್ಯಕ್ಷ ಅಶ್ವಥ್.

Tweets 29200
Retweets20700
490 replies
21% females
79% males

Comments

ಸೂಚನೆ : ಯಾವುದೇ ತೆರನಾದ ಧಾರ್ಮಿಕ, ರಾಜಕೀಯ ಮತ್ತು ವ್ಯಕ್ತಿ ನಿಂದನಾತ್ಮಕ ಪ್ರತಿಕ್ರಿಯೆಗಳನ್ನಾಗಲೀ, ಭಾರತ ಒಕ್ಕೂಟ ವ್ಯವಸ್ಥೆಯಡಿ ಬರುವ ಪ್ರದೇಶ, ಭಾಷೆ ಅಥವಾ ಸಂಸ್ಕೃತಿಯನ್ನು ತೆಗಳುವ ಪ್ರತಿಕ್ರಿಯೆಯನ್ನಾಗಲೀ, ಸಾಮಾಜಿಕ ಸ್ವಾಸ್ಥ್ಯದ ಮೇಲೆ ಪರಿಣಾಮ ಬೀರುವ ಅಸಭ್ಯ, ಅಶ್ಲೀಲ ಪ್ರತಿಕ್ರಿಯೆಯನ್ನಾಗಲೀ ಹಾಕಬಾರದಾಗಿ ವಿನಂತಿ. ನಿಮ್ಮ ಪ್ರತಿಕ್ರಿಯೆಗೆ ಆಯಾ ವ್ಯಕ್ತಿ ಸಂಪೂರ್ಣವಾಗಿ ಜವಾಬ್ದಾರರಾಗಿದ್ದು "ನ್ಯೂಸ್ ಕನ್ನಡ" ಬಳಗ ಜವಾಬ್ದಾರರಾಗಿರುವುದಿಲ್ಲ. ಅಲ್ಲದೆ ಇಂಥಹ ಪ್ರತಿಕ್ರಿಯೆಗಳು ಕಾನೂನಾತ್ಮಕವಾಗಿ ಅಪರಾಧವಾಗಿದ್ದು, ಸಂಬಧಪಟ್ಟ ಇಲಾಖೆ ಮಾಹಿತಿಯನ್ನು ಕೇಳಿದರೆ ನಿಮ್ಮ ಸಂಪೂರ್ಣ ಹೆಸರು ಮತ್ತು ಐ.ಪಿ ವಿಳಾಸವನ್ನು ಒದಗಿಸಲು "ನ್ಯೂಸ್ ಕನ್ನಡ" ಬದ್ದವಾಗಿರುತ್ತದೆ.

ಹಫೀಜ್ ಸಯೀದ್ ವಿರುದ್ಧ ಕ್ರಮ ಕೈಗೊಳ್ಳಲು ಸಾವಿರಕ್ಕೂ ಹೆಚ್ಚು ಮೌಲ್ವಿಗಳಿಂದ ಮನವಿ

ಮುಂದಿನ ಸುದ್ದಿ »

ಈ ಊರಿನ ನಾಯಿಗಳೆಲ್ಲಾ ನೀಲಿ ಬಣ್ಣಕ್ಕೆ ತಿರುಗುತ್ತಿರುವುದು ಏಕೆ ಗೊತ್ತೇ?

ಸಿನೆಮಾ

ಹೆಚ್ಚಿನ ಸುದ್ದಿ

More

ನೆನಪಿನ ಸಂಚಿ

ಹೆಚ್ಚಿನ ಸುದ್ದಿ

More

ಭೂತಗನ್ನಡಿ

ಹೆಚ್ಚಿನ ಸುದ್ದಿ

More
Menu
×