Thursday October 12 2017

Follow on us:

Contact Us

ಎರಡು ಕೋಟಿ ರೂ ವೆಚ್ಚದಲ್ಲಿ ಉಚ್ಚಿಲ-ಮುದರಂಗಡಿ ರಸ್ತೆ ದ್ವಿಪಥ; ಶೀಘ್ರದಲ್ಲಿ ಕಾಮಗಾರಿ ಪ್ರಾರಂಭ

ನ್ಯೂಸ್ ಕನ್ನಡ ವರದಿ-(12.10.17): ಪಡುಬಿದ್ರಿ:  ಬಡಾ ಗ್ರಾಮ ಪಂಚಾಯತ್ ಉಚ್ಚಿಲ-ಮುದರಂಗಡಿ  2.60 ಮೀಟರ್ ದ್ವಿಪಥ ರಸ್ತೆಯ ಅಭಿವೃದ್ಧಿಗೆ ಶಾಸಕರ ನಿಧಿಯಿಂದ ಎರಡು ಕೋಟಿ ಅನುದಾನ ಮಂಜೂರಾಗಿದ್ದು, ಇದರ ಗುದ್ದಲಿ ಪೂಜಾ ಕಾರ್ಯಕ್ರಮವನ್ನು ಮಾಜಿ ಸಚಿವ ಕಾಪು ಶಾಸಕ ವಿನಯ್ ಕುಮಾರ್ ಸೊರಕೆಯವರು ನೆರವೇರಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು ಬೆಳಪುವಿನಲ್ಲಿ ಪ್ರಾರಂಭಗೊಳ್ಳಲಿರುವ ವಿಜ್ಞಾನ ಸಂಶೋಧನಾ ಕೇಂದ್ರ ,ಕೈಗಾರಿಕಾ ವಲಯ, ಐಟಿಎ ಕಾಲೇಜು ಹಾಗು ಈ ಭಾಗದ ಜನರ ಅನುಕೂಲದ ಉದ್ದೇಶವನ್ನಿಟ್ಟುಕೊಂಡು ದ್ವಿಪಥ ರಸ್ತೆ ಕಾಮಗಾರಿಯನ್ನು ನಡೆಸುತ್ತಿದ್ದೇವೆ. 2.60 ಮೀಟರ್ ದೂರದ ರಸ್ತೆ ನಿರ್ಮಾಣವಾಗಲಿದೆ. ಈಗಾಗಲೆ ಇರುವ 5.5 ಮೀ ಅಗಲದ ರಸ್ತೆಯನ್ನು 9.5 ರಷ್ಟು ಅಗಲೀಕರಣಗೊಳಿಸಿ ಸುಮಾರು 300 ಮೀ ಚರಂಡಿ ,40 ಮೀ ವಿಭಜಕ ವ್ಯವಸ್ಥೆಯೊಂದಿಗೆ ಸಮರ್ಪಕವಾದ ರಸ್ತೆ ನಿರ್ಮಿಸಲಾಗುವುದು. ಮುಂದಿನ ದಿನಗಳಲ್ಲಿ ಪಣಿಯೂರು-ಬೆಳಪು ದ್ವಿಪಥ  ರಸ್ತೆ ಕಾಮಗಾರಿ ಶೀಘ್ರವಾಗಿ ನಡೆಯಲಿದೆ.ಈ ಬಗ್ಗೆ ಈಗಾಗಲೇ ಸರಕಾರಕ್ಕೆ ಪ್ರಸ್ತಾಪ ಸಲ್ಲಿಕೆಯಾಗಿದೆ ಎಂದರು.

ಜನರ ಬೇಡಿಕೆಗೆ ಶಾಸಕರ ನಿರಂತರ ಸ್ಪಂದನೆ; ದೇವಿಪ್ರಸಾದ್ ಶೆಟ್ಟಿ: ಈ ಭಾಗದ ಜನರಿಗೆ ಶಾಸಕರ ಕೊಡುಗೆ ಅಪಾರ. ಅಭಿವೃದ್ಧಿಯಲ್ಲಿ ಮುಂಚೂಣಿಯಲ್ಲಿರುವ ಉಚ್ಚಿಲ ,ಬೆಳಪು ,ಎಲ್ಲೂರು ಹಾಗು ಪರಿಸರದ ಗ್ರಾಮದ ಜನರಿಗೆ ಈ ದ್ವಿಪಥ ರಸ್ತೆ ಬಹಳಷ್ಟು ಅನುಕೂಲವಾಗಲಿದೆ. ಶಾಸಕರು ಈ ಭಾಗದ ಜನರ ಬೇಡಿಕೆಗೆ ನಿರಂತರವಾಗಿ ಸ್ಪಂದನೆ ನೀಡುತ್ತಿದ್ದಾರೆ. ಈಗಾಗಲೇ ರಸ್ತೆ ನಿರ್ಮಾಣ ಕಾಮಗಾರಿಯ ಟೆಂಡರ್ ಪ್ರಕ್ರಿಯೆ ಪೂರ್ಣಗೊಂಡಿದ್ದು ಶೀಘ್ರವಾಗಿ ಕಾಮಗಾರಿ ಪ್ರಾರಂಭವಾಗಲಿದೆ ಎಂದು ಬೆಳಪು ಗ್ರಾಮ ಪಂ ಅಧ್ಯಕ್ಷ ಡಾ.ದೇವಿ ಪ್ರಸಾದ್ ಶೆಟ್ಟಿ ಮಾಹಿತಿ ನೀಡಿದ್ದಾರೆ.

ಕಾರ್ಯಕ್ರಮದಲ್ಲಿ ತಾ.ಪಂ ಸದಸ್ಯ ಯು.ಸಿ ಶೇಖಬ್ಬ ಬಡಾ ಗ್ರಾ.ಪಂ ಅಧ್ಯಕ್ಷೆ ನಾಗರತ್ನ, ಬೆಳಪು ಗ್ರಾ.ಪಂ ಉಪಾಧ್ಯಕ್ಷೆ ಶೋಭಾ ಭಟ್, ಜಿಲ್ಲಾ ಇಂಟ್ಯಾಕ್ ಉಪಾಧ್ಯಕ್ಷ ದೀರಜ್ ಹುಸೈನ್, ಬಡಾ ಗ್ರಾ.ಪಂ ಸದಸ್ಯರುಗಳಾದ ರಫೀಕ್ ದೀವ್, ಅಬ್ದುಲ್ ರಝಾಕ್, ರಫೀಕ್ ಸುಲೈಮಾನ್,ಕಾಪು ಬ್ಲಾಕ್ ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕದ ಕಾರ್ಯದರ್ಶಿ ಸಿರಾಜ್ ಎನ್.ಎಚ್,ಝಹೀರ್ ಬೆಳಪು, ಕಾಂತಿ ಆಚಾರ್ಯ ಹಾಗೂ ಮತ್ತಿತರರು ಉಪಸ್ಥಿತರಿದ್ದರು.

Comments

ಸೂಚನೆ : ಯಾವುದೇ ತೆರನಾದ ಧಾರ್ಮಿಕ, ರಾಜಕೀಯ ಮತ್ತು ವ್ಯಕ್ತಿ ನಿಂದನಾತ್ಮಕ ಪ್ರತಿಕ್ರಿಯೆಗಳನ್ನಾಗಲೀ, ಭಾರತ ಒಕ್ಕೂಟ ವ್ಯವಸ್ಥೆಯಡಿ ಬರುವ ಪ್ರದೇಶ, ಭಾಷೆ ಅಥವಾ ಸಂಸ್ಕೃತಿಯನ್ನು ತೆಗಳುವ ಪ್ರತಿಕ್ರಿಯೆಯನ್ನಾಗಲೀ, ಸಾಮಾಜಿಕ ಸ್ವಾಸ್ಥ್ಯದ ಮೇಲೆ ಪರಿಣಾಮ ಬೀರುವ ಅಸಭ್ಯ, ಅಶ್ಲೀಲ ಪ್ರತಿಕ್ರಿಯೆಯನ್ನಾಗಲೀ ಹಾಕಬಾರದಾಗಿ ವಿನಂತಿ. ನಿಮ್ಮ ಪ್ರತಿಕ್ರಿಯೆಗೆ ಆಯಾ ವ್ಯಕ್ತಿ ಸಂಪೂರ್ಣವಾಗಿ ಜವಾಬ್ದಾರರಾಗಿದ್ದು "ನ್ಯೂಸ್ ಕನ್ನಡ" ಬಳಗ ಜವಾಬ್ದಾರರಾಗಿರುವುದಿಲ್ಲ. ಅಲ್ಲದೆ ಇಂಥಹ ಪ್ರತಿಕ್ರಿಯೆಗಳು ಕಾನೂನಾತ್ಮಕವಾಗಿ ಅಪರಾಧವಾಗಿದ್ದು, ಸಂಬಧಪಟ್ಟ ಇಲಾಖೆ ಮಾಹಿತಿಯನ್ನು ಕೇಳಿದರೆ ನಿಮ್ಮ ಸಂಪೂರ್ಣ ಹೆಸರು ಮತ್ತು ಐ.ಪಿ ವಿಳಾಸವನ್ನು ಒದಗಿಸಲು "ನ್ಯೂಸ್ ಕನ್ನಡ" ಬದ್ದವಾಗಿರುತ್ತದೆ.

ಆರುಷಿ ತಲ್ವಾರ್ ಕೊಲೆ ಪ್ರಕರಣ: ಆರುಷಿ ಪೋಷಕರನ್ನು ಖುಲಾಸೆಗೊಳಿಸಿದ ನ್ಯಾಯಾಲಯ

ಮುಂದಿನ ಸುದ್ದಿ »

400 ಮೀ ಓಟದಲ್ಲಿ ಪ್ರಥಮ ಸ್ಥಾನ ತನ್ನದಾಗಿಸಿಕೊಂಡ ತೃಶಾ ರಾಜ್ಯಮಟ್ಟಕ್ಕೆ ಆಯ್ಕೆ

ಇತ್ತೀಚಿನ ಸುದ್ದಿಗಳು

ಸಿನೆಮಾ

  • ತನಗಿರುವ ಅಪರೂಪದ ಕಾಯಿಲೆಯನ್ನು ಬಹಿರಂಗಪಡಿಸಿದ ನಟ ಇರ್ಫಾನ್ ಖಾನ್!

    March 16, 2018

    ನ್ಯೂಸ್ ಕನ್ನಡ ವರದಿ-(16.3.18): ಬಾಲಿವುಡ್‌ನ‌ ಪ್ರತಿಭಾವಂತ ನಟ ಇರ್ಫಾನ್‌ ಖಾನ್‌ ಅವರು ತಮ್ಮನ್ನು ಬಾಧಿಸುತ್ತಿರುವ ಅತ್ಯಪರೂಪದ ಕಾಯಿಲೆ ಯಾವುದೆಂಬುದನ್ನು ಬಹಿರಂಗಪಡಿಸಿದ್ದಾರೆ. ತಾನು ನ್ಯೂರೋ ಎಂಡೋಕ್ರೈನ್‌ ಟ್ಯೂಮರ್‌ನಿಂದ ಬಳಲುತ್ತಿರುವುದಾಗಿ ಅವರು ತಿಳಿಸಿದ್ದಾರೆ. ಕೆಲ ದಿನಗಳ ಹಿಂದೆ ಇರ್ಫಾನ್‌ ಖಾನ್‌ ...

    Read More

ಹೆಚ್ಚಿನ ಸುದ್ದಿ

More

ನೆನಪಿನ ಸಂಚಿ

ಹೆಚ್ಚಿನ ಸುದ್ದಿ

More
Menu
×