Wednesday January 11 2017

Follow on us:

Contact Us

ಉಮೇಶ್ ಶೆಟ್ಟಿ ಕೊಲೆ ಪ್ರಕರಣ: ನಾಲ್ವರು ಆರೋಪಿಗಳ ಬಂಧನ- ಕಮಿಷನರ್ ಚಂದ್ರಶೇಖರ್

ನ್ಯೂಸ್ ಕನ್ನಡ ವರದಿ(11.01.2017)-ಮಂಗಳೂರು: ಮೂಡಬಿದ್ರೆ ಹಾಗೂ ಮುಲ್ಕಿ ಪೊಲೀಸರ ಜಂಟಿ ಕಾರ್ಯಾಚರಣೆಯಲ್ಲಿ ಉಮೇಶ್ ಶೆಟ್ಟಿ ಕೊಲೆ ಪ್ರಕರಣದ 4 ಮಂದಿ ಕೊಲೆ ಆರೋಪಿಗಳನ್ನು ಬಂಧನ ಮಾಡಲಾಗಿದೆ ಎಂದು ಪೊಲೀಸ್ ಕಮಿಷನರ್ ಚಂದ್ರಶೇಖರ್ ಹೇಳಿಕೆ ನೀಡಿದ್ದಾರೆ.

ಮಂಗಳೂರಿನ ಕಮಿಷನರ್ ಕಚೇರಿಯಲ್ಲಿ ಕರೆದ ಸುದ್ದಿಗೋಷ್ಠಿಯಲ್ಲಿ  ಮಾಹಿತಿ ನೀಡಿದ ಅವರು, ಎಂ ಆರ್ ಪಿಎಲ್ ಉದ್ಯೋಗಿಗಳಾದ ಪ್ರಸಾದ್  ಆಚಾರ್ಯ, ರಾಜೇಶ್ ಶೆಟ್ಟಿ, ತಿಲಕ್ ಪೂಜಾರಿ, ಹಾಗೂ ಚಿಕ್ಕಮಗಳೂರು ಮೂಡಿಗೆರೆ ನಿವಾಸಿ ಪ್ರಕಾಶ್ ಬಂಧಿತ ಆರೋಪಿಗಳಾಗಿದ್ದಾರೆ ಎಂದು ಹೇಳಿದರು.

ಡಿಸೆಂಬರ್ 28ರಂದು ಉಮೇಶ್ ನಾಪತ್ತೆಯಾಗಿದ್ದರು. ಈ ಬಗ್ಗೆ ಮುಲ್ಕಿ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿತ್ತು. ಜನವರಿ 1 ರಂದು ಕಲ್ಲಮುಂಡ್ಕೂರು ಗ್ರಾಮ ನಿಡ್ಡೋಡಿ ಉಮೇಶ್ ಮೃತ ದೇಹ ಪತ್ತೆಯಾಗಿತ್ತು. ಈ ಪ್ರಕರಣವನ್ನು ಬೇಧಿಸಿ ಪೊಲೀಸರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ ಎಂದು ಹೇಳಿದ ಕಮಿಷನರ್,  ಉಮೇಶ್ ಶೆಟ್ಟಿ ಕೊಲೆಯು ಆಸ್ತಿ ಮಾರಾಟದ ಹಣಕ್ಕಾಗಿ ಹತ್ಯೆ ಮಾಡಲಾಗಿದೆ ಎಂದು ಸ್ಪಷ್ಟಪಡಿಸಿದರು.

ಸುದ್ದಿಗೋಷ್ಠಿಯಲ್ಲಿ ಡಿಸಿಪಿಗಳಾದ ಶಾಂತರಾಜು, ಡಾ. ಸಂಜೀವ್ ಪಾಟೀಲ್ ಉಪಸ್ಥಿತರಿದ್ದರು.

ಟ್ರಾಫಿಕ್ ಸಮಸ್ಯೆಗೆ ಬಸ್ ಸ್ಟ್ಯಾಂಡ್ ಕಾರಣ

ನಗರದಲ್ಲಿ ಹೆಚ್ಚುತ್ತಿರುವ ಟ್ರಾಫಿಕ್ ಸಮಸ್ಯೆಗೆ  ಅಸಮರ್ಪಕ ಬಸ್ ಸ್ಟ್ಯಾಂಡ್ ನಿಂದ ಸಮಸ್ಯೆ ಉಂಟಾಗುತ್ತಿದೆ. ನಗರದ ಕೆಲವೆಡೆ ಬಸ್ ನಿಲ್ದಾಣಗಳ ಸ್ಥಳಾಂತರ ಅಗತ್ಯವಿದೆ. ಇದರಿಂದಾಗಿ ಟ್ರಾಫಿಕ್ ಸಮಸ್ಯೆ ಭಾಗಶಃ ಪರಿಹಾರ ಕಾಣಲು ಸಾಧ್ಯ ಎಂದು ಪೊಲೀಸ್ ಕಮೀಷನರ್ ಚಂದ್ರಶೇಖರ್ ಹೇಳಿದರು.

nknvfgkp

Comments

ಸೂಚನೆ : ಯಾವುದೇ ತೆರನಾದ ಧಾರ್ಮಿಕ, ರಾಜಕೀಯ ಮತ್ತು ವ್ಯಕ್ತಿ ನಿಂದನಾತ್ಮಕ ಪ್ರತಿಕ್ರಿಯೆಗಳನ್ನಾಗಲೀ, ಭಾರತ ಒಕ್ಕೂಟ ವ್ಯವಸ್ಥೆಯಡಿ ಬರುವ ಪ್ರದೇಶ, ಭಾಷೆ ಅಥವಾ ಸಂಸ್ಕೃತಿಯನ್ನು ತೆಗಳುವ ಪ್ರತಿಕ್ರಿಯೆಯನ್ನಾಗಲೀ, ಸಾಮಾಜಿಕ ಸ್ವಾಸ್ಥ್ಯದ ಮೇಲೆ ಪರಿಣಾಮ ಬೀರುವ ಅಸಭ್ಯ, ಅಶ್ಲೀಲ ಪ್ರತಿಕ್ರಿಯೆಯನ್ನಾಗಲೀ ಹಾಕಬಾರದಾಗಿ ವಿನಂತಿ. ನಿಮ್ಮ ಪ್ರತಿಕ್ರಿಯೆಗೆ ಆಯಾ ವ್ಯಕ್ತಿ ಸಂಪೂರ್ಣವಾಗಿ ಜವಾಬ್ದಾರರಾಗಿದ್ದು "ನ್ಯೂಸ್ ಕನ್ನಡ" ಬಳಗ ಜವಾಬ್ದಾರರಾಗಿರುವುದಿಲ್ಲ. ಅಲ್ಲದೆ ಇಂಥಹ ಪ್ರತಿಕ್ರಿಯೆಗಳು ಕಾನೂನಾತ್ಮಕವಾಗಿ ಅಪರಾಧವಾಗಿದ್ದು, ಸಂಬಧಪಟ್ಟ ಇಲಾಖೆ ಮಾಹಿತಿಯನ್ನು ಕೇಳಿದರೆ ನಿಮ್ಮ ಸಂಪೂರ್ಣ ಹೆಸರು ಮತ್ತು ಐ.ಪಿ ವಿಳಾಸವನ್ನು ಒದಗಿಸಲು "ನ್ಯೂಸ್ ಕನ್ನಡ" ಬದ್ದವಾಗಿರುತ್ತದೆ.

ಸಮುದ್ರದಲ್ಲಿ ಮುಳುಗಿ ವಿದ್ಯಾರ್ಥಿ ಮೃತ್ಯು

ಮುಂದಿನ ಸುದ್ದಿ »

ಹೊಳೆಯಲ್ಲಿ ಮುಳುಗಿ ಒಂದೇ ಕುಟುಂಬದ ನಾಲ್ವರ ದಾರುಣ ಸಾವು

ಇತ್ತೀಚಿನ ಸುದ್ದಿಗಳು

ಸಿನೆಮಾ

  • ತನಗಿರುವ ಅಪರೂಪದ ಕಾಯಿಲೆಯನ್ನು ಬಹಿರಂಗಪಡಿಸಿದ ನಟ ಇರ್ಫಾನ್ ಖಾನ್!

    March 16, 2018

    ನ್ಯೂಸ್ ಕನ್ನಡ ವರದಿ-(16.3.18): ಬಾಲಿವುಡ್‌ನ‌ ಪ್ರತಿಭಾವಂತ ನಟ ಇರ್ಫಾನ್‌ ಖಾನ್‌ ಅವರು ತಮ್ಮನ್ನು ಬಾಧಿಸುತ್ತಿರುವ ಅತ್ಯಪರೂಪದ ಕಾಯಿಲೆ ಯಾವುದೆಂಬುದನ್ನು ಬಹಿರಂಗಪಡಿಸಿದ್ದಾರೆ. ತಾನು ನ್ಯೂರೋ ಎಂಡೋಕ್ರೈನ್‌ ಟ್ಯೂಮರ್‌ನಿಂದ ಬಳಲುತ್ತಿರುವುದಾಗಿ ಅವರು ತಿಳಿಸಿದ್ದಾರೆ. ಕೆಲ ದಿನಗಳ ಹಿಂದೆ ಇರ್ಫಾನ್‌ ಖಾನ್‌ ...

    Read More

ಹೆಚ್ಚಿನ ಸುದ್ದಿ

More

ನೆನಪಿನ ಸಂಚಿ

ಹೆಚ್ಚಿನ ಸುದ್ದಿ

More
Menu
×