Saturday October 14 2017

Follow on us:

Contact Us

“ಮಹಿಳೆಯರನ್ನು ಅನುಮತಿಸಿದರೆ ಶಬರಿಮಲೆಯು ಥಾಯ್ಲೆಂಡ್ ನಂತೆ ಸೆಕ್ಸ್ ಟೂರಿಸಂ ಕೇಂದ್ರವಾಗುತ್ತದೆ!”

ತಿರುವನಂತಪುರಂಶಬರಿಮಲೆ ದೇಗುಲಕ್ಕೆ ಎಲ್ಲ ವಯಸ್ಸಿನ ಮಹಿಳೆಯರಿಗೆ ಪ್ರವೇಶ ಅನುಮತಿ ನೀಡಬೇಕು ಎಂಬ ಅರ್ಜಿಯನ್ನು ಸುಪ್ರೀಂಕೋರ್ಟ್ ಸಂವಿಧಾನ ಪೀಠಕ್ಕೆ ವರ್ಗಾಯಿಸಿದ ಬೆನ್ನಲ್ಲೇ ತಿರುವಾಂಕೂರ್ ದೇವಸ್ವಂ ಮಂಡಳಿ ಮುಖ್ಯಸ್ಥರ ಹೇಳಿಕೆಯೊಂದು ವಿವಾದಕ್ಕೀಡಾಗಿದೆ.

ಶಬರಿಮಲೆಯಲ್ಲಿ ಮಹಿಳೆಯರಿಗೆ ಪ್ರವೇಶ ಅವಕಾಶ ನೀಡಿದರೆ ಅಲ್ಲಿ ಅನೈತಿಕ ಚಟುವಟಿಕೆಗಳು ನಡೆಯುವ ಸಾಧ್ಯತೆ ಇದೆ. ಹೀಗಾದರೆ ಶಬರಿಮಲೆ ಥಾಯ್ಲೆಂಡ್ ನಂತೆ ಸೆಕ್ಸ್ ಟೂರಿಸಂ ಕೇಂದ್ರವಾಗಿ ಮಾರ್ಪಡುತ್ತದೆ ಎಂದು ತಿರುವಾಂಕೂರ್ ದೇವಸ್ವಂ ಮಂಡಳಿ ಮುಖ್ಯಸ್ಥ ಪ್ರಾಯರ್ ಗೋಪಾಲಕೃಷ್ಣನ್ ಹೇಳಿರುವುದಾಗಿ ಹಿಂದೂಸ್ತಾನ್ ಟೈಮ್ಸ್ ಪತ್ರಿಕೆ ವರದಿ ಮಾಡಿದೆ. ಶಬರಿಮಲೆಯಲ್ಲಿ ಮಹಿಳೆಯರಿಗೆ ಪ್ರವೇಶ ನಿಷೇಧಿಸಿರುವುದು ಪುರಾತನ ಸಂಪ್ರದಾಯ. ನಾವೆಲ್ಲರೂ ಅದನ್ನು ಗೌರವಿಸಲೇ ಬೇಕು. ಮಹಿಳೆಯರಿಗೆ ಪ್ರವೇಶ ಅನುಮತಿ ನೀಡಿದರೆ ದೇವಸ್ಥಾನದಲ್ಲಿ  ಭಕ್ತರ ನೂಕು ನುಗ್ಗಲು ವೇಳೆ ಹಲವಾರು ಸಮಸ್ಯೆಗಳು ಎದುರಾಗುತ್ತವೆ. ಅವರಿಗೆ ಭದ್ರತೆ ಒದಗಿಸಲು ಸಾಧ್ಯವಿಲ್ಲ. ಹೀಗಿರುವಾಗ ಅನೈತಿಕ ಚಟುವಟಿಕೆಗಳೂ ನಡೆಯುವ ಸಾಧ್ಯತೆ ಇದೆ ಎಂದು ಗೋಪಾಲಕೃಷ್ಣನ್ ಹೇಳಿದ್ದಾರೆ.

ದೇಗುಲಕ್ಕೆ ಮಹಿಳೆಯರಿಗೆ ಪ್ರವೇಶ ಅವಕಾಶ ನೀಡುವ ಬಗ್ಗೆ  ಪ್ರಕರಣದ ವಿಚಾರಣೆ ನಡೆಸುತ್ತಿರುವ ಸುಪ್ರೀಂಕೋರ್ಟ್‌ನ ತ್ರಿಸದಸ್ಯ ಪೀಠವು ವಿಚಾರಣೆಯನ್ನು ಸಂವಿಧಾನ ಪೀಠಕ್ಕೆ ವರ್ಗಾಯಿಸಿದ ಬೆನಲ್ಲೇ ಗೋಪಾಲ ಕೃಷ್ಣನ್‌ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದು,’ಇದರಲ್ಲಿ ವೈಯಕ್ತಿಕವೇನು ಇಲ್ಲ, ನಮಗೆ ಸಂಪ್ರದಾಯ ಮತ್ತು ಆಚರಣೆಗಳೆರಡೂ ಮುಖ್ಯವಾಗಿದ್ದು, 10 ರಿಂದ 50 ವರ್ಷದ ಒಳಗಿನ ಮಹಿಳೆಯರು ದೇವಾಲಯ ಪ್ರವೇಶಿಸಬಹುದು ಎಂದು ಕೋರ್ಟ್‌ ತೀರ್ಪು ನೀಡಿದರೂ ಸುಸಂಸ್ಕೃತ ಕುಟುಂಬದ ಯಾವ ಹೆಣ್ಣೂ ಬರುವುದಿಲ್ಲ ಎನ್ನುವ ವಿಶ್ವಾಸವಿದೆ’ ಎಂದಿದ್ದಾರೆ.

Comments

ಸೂಚನೆ : ಯಾವುದೇ ತೆರನಾದ ಧಾರ್ಮಿಕ, ರಾಜಕೀಯ ಮತ್ತು ವ್ಯಕ್ತಿ ನಿಂದನಾತ್ಮಕ ಪ್ರತಿಕ್ರಿಯೆಗಳನ್ನಾಗಲೀ, ಭಾರತ ಒಕ್ಕೂಟ ವ್ಯವಸ್ಥೆಯಡಿ ಬರುವ ಪ್ರದೇಶ, ಭಾಷೆ ಅಥವಾ ಸಂಸ್ಕೃತಿಯನ್ನು ತೆಗಳುವ ಪ್ರತಿಕ್ರಿಯೆಯನ್ನಾಗಲೀ, ಸಾಮಾಜಿಕ ಸ್ವಾಸ್ಥ್ಯದ ಮೇಲೆ ಪರಿಣಾಮ ಬೀರುವ ಅಸಭ್ಯ, ಅಶ್ಲೀಲ ಪ್ರತಿಕ್ರಿಯೆಯನ್ನಾಗಲೀ ಹಾಕಬಾರದಾಗಿ ವಿನಂತಿ. ನಿಮ್ಮ ಪ್ರತಿಕ್ರಿಯೆಗೆ ಆಯಾ ವ್ಯಕ್ತಿ ಸಂಪೂರ್ಣವಾಗಿ ಜವಾಬ್ದಾರರಾಗಿದ್ದು "ನ್ಯೂಸ್ ಕನ್ನಡ" ಬಳಗ ಜವಾಬ್ದಾರರಾಗಿರುವುದಿಲ್ಲ. ಅಲ್ಲದೆ ಇಂಥಹ ಪ್ರತಿಕ್ರಿಯೆಗಳು ಕಾನೂನಾತ್ಮಕವಾಗಿ ಅಪರಾಧವಾಗಿದ್ದು, ಸಂಬಧಪಟ್ಟ ಇಲಾಖೆ ಮಾಹಿತಿಯನ್ನು ಕೇಳಿದರೆ ನಿಮ್ಮ ಸಂಪೂರ್ಣ ಹೆಸರು ಮತ್ತು ಐ.ಪಿ ವಿಳಾಸವನ್ನು ಒದಗಿಸಲು "ನ್ಯೂಸ್ ಕನ್ನಡ" ಬದ್ದವಾಗಿರುತ್ತದೆ.

ವಿವಾಹಕ್ಕೆ ಮುನ್ನ ಪದವಿ ಶಿಕ್ಷಣವನ್ನು ಪೂರೈಸಿದ ಮುಸ್ಲಿಮ್ ಯುವತಿಯರಿಗೆ ಮೋದಿ ಸರ್ಕಾರದಿಂದ 51,000 ರೂ. ಉಡುಗೊರೆ

ಮುಂದಿನ ಸುದ್ದಿ »

ಬೇರೆ ನೆಟ್ ವರ್ಕ್‍ಗಳೊಂದಿಗಿನ ಪೈಪೋಟಿಯಲ್ಲಿ ಜಿಯೋಗೆ ಆದ ನಷ್ಟವೆಷ್ಟು ಗೊತ್ತೇ?

ಇತ್ತೀಚಿನ ಸುದ್ದಿಗಳು

ಸಿನೆಮಾ

  • ಜಬ್ಬಾರ್ ಎಂಬೋ ಜಬರ್ ದಸ್ತ್ ಶಕ್ತಿ ಮತ್ತು ಸ್ಫೂರ್ತಿ!

    January 9, 2018

    ಅಬ್ದುಲ್ ಜಬ್ಬಾರ್ ಪೊನ್ನೋಡಿ ಮತ್ತು ಸಹಕಲಾವಿದೆ ಮಂಜು ವರ್ಷಾ; ಈ ಇಬ್ಬರನ್ನೂ ನಾನು ಅಪ್ಪಿಕೊಂಡು, ಮುತ್ತಿಟ್ಟು ಶುಭ ಹಾರೈಸಿ ಈಗ ಚಿತ್ರೀಕರಣ ಪ್ರಾರಂಭಿಸೋಣ ಎಂದು ಹೇಳಿದ್ದೇ ಮುಹೂರ್ತ. ಚಿತ್ರೀಕರಣ ಆರಂಭವಾಯಿತು. ಕನ್ನಡ ಮತ್ತು ಇಂಗ್ಲೀಷ್ ಎರಡೂ ಭಾಷೆಗಳ ...

    Read More

ಹೆಚ್ಚಿನ ಸುದ್ದಿ

More

ನೆನಪಿನ ಸಂಚಿ

ಹೆಚ್ಚಿನ ಸುದ್ದಿ

More

ಭೂತಗನ್ನಡಿ

ಹೆಚ್ಚಿನ ಸುದ್ದಿ

More
Menu
×