Saturday August 12 2017

Follow on us:

Contact Us

ಉತ್ತರಪ್ರದೇಶದ ಬಾಬಾ ರಾಘವ್ ದಾಸ್ ಆಸ್ಪತ್ರೆಯಲ್ಲಿ 6 ವರ್ಷಗಳಲ್ಲಿ 3000 ಮಕ್ಕಳು ಮೃತ್ಯು!

ನ್ಯೂಸ್ ಕನ್ನಡ ವರದಿ-(12.08.17): ಉತ್ತರಪ್ರದೇಶದ ಪೂರ್ವದಲ್ಲಿರುವ ಗೋರಖ್ ಪುರ ಎಂಬಲ್ಲಿನ ಬಾಬಾ ರಾಘವ್ ದಾಸ್ ಆಸ್ಪತ್ರೆಯಲ್ಲಿ ಎರಡು ದಿನಗಳ ಅಂತರದಲ್ಲಿ ಆಕ್ಸಿಜನ್ ಸಮರ್ಪಕವಾಗಿ ಪೂರೈಕೆಯಾಗದ ಕಾರಣ ಮೂವತ್ತು ಮಕ್ಕಳು ಉಸಿರುಗಟ್ಟಿ ಮೃತಪಟ್ಟಿದ್ದರು. ಇದೀಗ ಈ ಮೆಡಿಕಲ್ ಕಾಲೇಜಿನ ಕುರಿತದಾಂತಹ ಮಾಹಿತಿಯು ಹೊರಬಂದಿದ್ದು, ಕೇವಲ ಆರು ವರ್ಷಗಳ ಅಂತರದಲ್ಲಿ ಸುಮಾರು 3000 ಮಕ್ಕಳು ಇಲ್ಲಿ ಮೃತಪಟ್ಟಿದ್ದಾರೆಂದು ತಿಳಿದು ಬಂದಿದೆ.

ಹಿಂದುಸ್ತಾನ್ ಟೈಮ್ಸ್ ವರದಿ ಪ್ರಕಾರ, ಮೆದುಳಿನ ನಿಷ್ಕ್ರಿಯತೆಯಿಂದ ಮತ್ತು ಜಪಾನಿಸ್ ಎನ್ಸೆಫಾಲಿಟಿಸ್ ಎಂಬ ರೋಗಗಳಿಂದ ದಾಖಲಾಗಿದ್ದ ಮಕ್ಕಳು ಅತಿಹೆಚ್ಚಾಗಿ ಮೃತಪಟ್ಟಿದ್ದಾರೆಂದು ವರದಿಯಾಗಿದೆ. ಇದಲ್ಲದೇ ಈ ಆಸ್ಪತ್ರೆಯಲ್ಲಿರುವ ವೈದ್ಯರು ಮತ್ತು ಸಿಬ್ಬಂದಿಗಳು ರೋಗಿಗಳೊಂದಿಗೆ ಸರಿಯಾಗಿ ವರ್ತಿಸುತ್ತಿಲ್ಲ, ರೋಗಿಗಳ ಕಷ್ಟಗಳಿಗೆ ಸ್ಪದಿಸುತ್ತಿಲ್ಲ ಎಂಬ ಆರೋಪವೂ ಕೇಳಿ ಬಂದಿದೆ. ಈ ಪ್ರಕರಣವನ್ನು ಯೋಗಿ ಆದಿತ್ಯನಾಥ್ ನೇತೃತ್ವದ ರಾಜ್ಯ ಸರಕಾರವು ಗಂಭಿರವಾಗಿ ಪರಿಗಣಿಸಿದೆ.

Comments

ಸೂಚನೆ : ಯಾವುದೇ ತೆರನಾದ ಧಾರ್ಮಿಕ, ರಾಜಕೀಯ ಮತ್ತು ವ್ಯಕ್ತಿ ನಿಂದನಾತ್ಮಕ ಪ್ರತಿಕ್ರಿಯೆಗಳನ್ನಾಗಲೀ, ಭಾರತ ಒಕ್ಕೂಟ ವ್ಯವಸ್ಥೆಯಡಿ ಬರುವ ಪ್ರದೇಶ, ಭಾಷೆ ಅಥವಾ ಸಂಸ್ಕೃತಿಯನ್ನು ತೆಗಳುವ ಪ್ರತಿಕ್ರಿಯೆಯನ್ನಾಗಲೀ, ಸಾಮಾಜಿಕ ಸ್ವಾಸ್ಥ್ಯದ ಮೇಲೆ ಪರಿಣಾಮ ಬೀರುವ ಅಸಭ್ಯ, ಅಶ್ಲೀಲ ಪ್ರತಿಕ್ರಿಯೆಯನ್ನಾಗಲೀ ಹಾಕಬಾರದಾಗಿ ವಿನಂತಿ. ನಿಮ್ಮ ಪ್ರತಿಕ್ರಿಯೆಗೆ ಆಯಾ ವ್ಯಕ್ತಿ ಸಂಪೂರ್ಣವಾಗಿ ಜವಾಬ್ದಾರರಾಗಿದ್ದು "ನ್ಯೂಸ್ ಕನ್ನಡ" ಬಳಗ ಜವಾಬ್ದಾರರಾಗಿರುವುದಿಲ್ಲ. ಅಲ್ಲದೆ ಇಂಥಹ ಪ್ರತಿಕ್ರಿಯೆಗಳು ಕಾನೂನಾತ್ಮಕವಾಗಿ ಅಪರಾಧವಾಗಿದ್ದು, ಸಂಬಧಪಟ್ಟ ಇಲಾಖೆ ಮಾಹಿತಿಯನ್ನು ಕೇಳಿದರೆ ನಿಮ್ಮ ಸಂಪೂರ್ಣ ಹೆಸರು ಮತ್ತು ಐ.ಪಿ ವಿಳಾಸವನ್ನು ಒದಗಿಸಲು "ನ್ಯೂಸ್ ಕನ್ನಡ" ಬದ್ದವಾಗಿರುತ್ತದೆ.

ಆತ್ಮಹತ್ಯೆಗೈದ ಐಎಎಸ್ ಅಧಿಕಾರಿ ತನ್ನ ಕೊನೆಯ ವೀಡಿಯೊದಲ್ಲಿ ಹೇಳಿದ್ದೇನು?

ಮುಂದಿನ ಸುದ್ದಿ »

ಸರಕಾರಿ ಕಾಲೇಜಿಗೆ ದೊರಕದಿರುವ ಅನ್ನಭಾಗ್ಯ ಖಾಸಗಿ ಶಾಲೆಗೆ ದೊರಕಿರುವುದು ಆಶ್ಚರ್ಯ!: ಸಚಿನ್ ರಾಜ್ ಶೆಟ್ಟಿ

ಇತ್ತೀಚಿನ ಸುದ್ದಿಗಳು

ಸಿನೆಮಾ

  • ತನಗಿರುವ ಅಪರೂಪದ ಕಾಯಿಲೆಯನ್ನು ಬಹಿರಂಗಪಡಿಸಿದ ನಟ ಇರ್ಫಾನ್ ಖಾನ್!

    March 16, 2018

    ನ್ಯೂಸ್ ಕನ್ನಡ ವರದಿ-(16.3.18): ಬಾಲಿವುಡ್‌ನ‌ ಪ್ರತಿಭಾವಂತ ನಟ ಇರ್ಫಾನ್‌ ಖಾನ್‌ ಅವರು ತಮ್ಮನ್ನು ಬಾಧಿಸುತ್ತಿರುವ ಅತ್ಯಪರೂಪದ ಕಾಯಿಲೆ ಯಾವುದೆಂಬುದನ್ನು ಬಹಿರಂಗಪಡಿಸಿದ್ದಾರೆ. ತಾನು ನ್ಯೂರೋ ಎಂಡೋಕ್ರೈನ್‌ ಟ್ಯೂಮರ್‌ನಿಂದ ಬಳಲುತ್ತಿರುವುದಾಗಿ ಅವರು ತಿಳಿಸಿದ್ದಾರೆ. ಕೆಲ ದಿನಗಳ ಹಿಂದೆ ಇರ್ಫಾನ್‌ ಖಾನ್‌ ...

    Read More

ಹೆಚ್ಚಿನ ಸುದ್ದಿ

More

ನೆನಪಿನ ಸಂಚಿ

ಹೆಚ್ಚಿನ ಸುದ್ದಿ

More
Menu
×