ಸಿಎಎ ವಿರುದ್ಧ ವಿಧಾನಸಭೆಯಲ್ಲಿ ನಿರ್ಣಯ ಅಂಗೀಕಾರ.!: ಮಮತ ಬ್ಯಾನರ್ಜಿ

0
88

ನ್ಯೂಸ್ ಕನ್ನಡ ವರದಿ: ಕೇಂದ್ರ ಸರ್ಕಾರದ ವಿವಾದಾತ್ಮಕ ಪೌರತ್ವ ತಿದ್ದುಪಡಿ ಕಾಯ್ದೆ(ಸಿಎಎ)ಯ ವಿರುದ್ಧ ವಿಧಾನಸಭೆಯಲ್ಲಿ ನಿರ್ಣಯ ಅಂಗೀಕರಿಸುವುದಾಗಿ ಪಶ್ಚಮಿ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಸೋಮವಾರ ಹೇಳಿದ್ದಾರೆ. ಅಲ್ಲದೆ ಸಿಎಎ ವಿರುದ್ಧ ವಿಧಾನಸಭೆಯಲ್ಲಿ ನಿರ್ಣಯ ಅಂಗೀಕರಿಸುವಂತೆ ಈಶಾನ್ಯ ರಾಜ್ಯಗಳಿಗೆ ಮತ್ತು ಪ್ರತಿಪಕ್ಷಗಳ ಆಡಳಿತವಿರುವ ರಾಜ್ಯಗಳಿಗೆ ದೀದಿ ಕರೆ ನೀಡಿದ್ದಾರೆ.

ರಾಷ್ಟ್ರೀಯ ಜನಸಂಖ್ಯಾ ನೋಂದಣಿ (ಎನ್ ಪಿಆರ್ ) ಜಾರಿಗೊಳಿಸುವ ಮುನ್ನ ಆ ಬಗ್ಗೆ ಸಂಪೂರ್ಣ ಅಧ್ಯಯನ ನಡೆಸುವಂತೆ ಮತ್ತು ಸಿಎಎ ವಿರುದ್ಧ ನಿರ್ಣಯ ಅಂಗೀಕರಿಸುವಂತೆ ಈಶಾನ್ಯ ರಾಜ್ಯಗಳಿಗೆ ಮತ್ತು ಪ್ರತಿಪಕ್ಷಗಳ ಆಡಳಿತವಿರುವ ರಾಜ್ಯಗಳಿಗೆ ನಾನು ಮನವಿ ಮಾಡುತ್ತೇನೆ ಎಂದು ಮಮತಾ ಬ್ಯಾನರ್ಜಿ ಅವರು ಹೇಳಿದ್ದಾರೆ.

LEAVE A REPLY

Please enter your comment!
Please enter your name here