ಮಂಗಳೂರು ಗೋಲಿಬಾರ್: ರಾಜ್ಯ ಸರ್ಕಾರಕ್ಕೆ ಹೈಕೋರ್ಟ್​ ನೋಟಿಸ್​​​​

0
47

ನ್ಯೂಸ್ ಕನ್ನಡ ವರದಿ: ಮಂಗಳೂರು ಗೋಲಿಬಾರ್ ಪ್ರಕರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನೋಟೀಸ್ ಜಾರಿಗೊಳಿಸಿದೆ.

ಕಳೆದ ಡಿಸೆಂಬರ್ ​​​​ 19 ರಂದು ನಡೆದ ಮಂಗಳೂರು ಗೋಲಿಬಾರ್​​ನಲ್ಲಿ ಇಬ್ಬರು ಅಮಾಯಕರು ಮೃತಪಟ್ಟಿದ್ಧಾರೆ. ಪ್ರತಿಭಟನಾಕಾರರ ಮೇಲಿನ ಪೊಲೀಸರ ದೌರ್ಜನ್ಯದ ಬಗ್ಗೆ ನ್ಯಾಯಾಂಗ ತನಿಖೆಗೆ ಆದೇಶಿಸುವಂತೆ ಕೋರಿ ಹೈಕೋರ್ಟ್​ಗೆ ಜೆಡಿಎಸ್ ಮುಖಂಡ ಮುಹಮ್ಮದ್ ಇಕ್ಬಾಲ್ ಮತ್ತು ಉಮರ್ ಎಂಬುವರು ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್​​ ರಾಜ್ಯ ಸರ್ಕಾರಕ್ಕೆ ನೋಟೀಸ್​​ ಜಾರಿಗೊಳಿಸಿದೆ. ಪೊಲೀಸರ ಗೋಲಿಬಾರ್​​ ಕುರಿತಂತೆ ಸೂಕ್ತ ದಾಖಲೆಗಳನ್ನು ನೀಡುವಂತೆ ಆದೇಶಿಸಿದೆ. ಜನವರಿ 28ರೊಳಗೆ ದಾಖಲೆ ಸಮೇತ ಮಾಹಿತಿ ನೀಡುವಂತೆ ಸೂಚಿಸಿದ್ದು, ಮುಂದಿನ ವಿಚಾರಣೆಯನ್ನು ಫೆಬ್ರವರಿ 5ಕ್ಕೆ ಮುಂದೂಡಿದೆ.

LEAVE A REPLY

Please enter your comment!
Please enter your name here