ಡಿ.9ರ ನಂತರ ಯಡಿಯೂರಪ್ಪ ಸರ್ಕಾರ ಪತನ!

0
1286

ನ್ಯೂಸ್ ಕನ್ನಡ ವರದಿ:‌ ಉಪಚುನಾವಣೆ ಫಲಿತಾಂಶ ಬಂದು ಡಿ.9ರ ನಂತರ ರಾಜ್ಯದಲ್ಲಿ ಈಗಿನ ಸರ್ಕಾರ ಬದಲಾವಣೆಯಾಗುತ್ತದೆ ಎಂದು ಮಾಜಿ ಸಚಿವ ಎಚ್‌.ಡಿ.ರೇವಣ್ಣ ಭವಿಷ್ಯ ನುಡಿದಿದ್ದಾರೆ.

ಹುಣಸೂರಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನೇನು ಜ್ಯೋತಿಷಿ ಅಲ್ಲ, ನಂಗೆ ಜ್ಯೋತಿಷ್ಯ ಗೊತ್ತಿಲ್ಲ. ಆದರೆ, ಪರಿಸ್ಥಿತಿ ನೋಡಿದರೆ ಸರ್ಕಾರ ಬದಲಾಗುತ್ತೆ ಅನಿಸುತ್ತಿದೆ. ಬಿಜೆಪಿಯ ಹಲವರು ನಮ್ಮ ಪಕ್ಷಕ್ಕೆ ಬರುತ್ತಾರೆ. ಮತ್ತೊಂದು ಚುನಾವಣೆ ಸಹ ಬರಲಿದೆ. ನಮ್ಮ ಪಕ್ಷದಿಂದ ಯಾರೂ ಬಿಜೆಪಿಗೆ ಹೋಗಲ್ಲ. ಈಗ ಹೋಗಿರುವ ಅನರ್ಹರೆ ನನಗೆ ಫೋನ್‌ ಮಾಡಿ ಯಾಕಾದರೂ ಹೋದ್ವೋ, ಇದೆಲ್ಲ ನಮಗೆ ಬೇಕಿತ್ತಾ ಅನ್ನುತ್ತಿದ್ದಾರೆ ಎಂದರು.

LEAVE A REPLY

Please enter your comment!
Please enter your name here