ಗುಂಡ್ಲುಪೇಟೆ: ವಿಗ್ರಹ ಧ್ವಂಸ ಆರೋಪದಲ್ಲಿ ದಲಿತ ವ್ಯಕ್ತಿಯನ್ನು ಬೆತ್ತಲೆಗೊಳಿಸಿ ಹಲ್ಲೆ: ಸಿಎಂ ಖಂಡನೆ

0
392

ನ್ಯೂಸ್ ಕನ್ನಡ ವರದಿ: (12.06.19): ಚಾಮರಾಜನಗರದ ಗುಂಡ್ಲುಪೇಟೆಯ ವೀರನಪುರ ಎಂಬಲ್ಲಿ ದೇವರ ವಿಗ್ರಹ ಧ್ವಂಸಗೊಳಿಸಿದ್ದಾನೆ ಎಂಬ ಆರೋಪದ ಮೇರೆಗೆ ಹಲವಾರು ಮಂದಿ ಆತನಿಗೆ ಹಲ್ಲೆ ನಡೆಸಿದ್ದು ಮಾತ್ರವಲ್ಲದೇ ಆತನನ್ನು ಬೆತ್ತಲೆ ಮಾಡಿ ಥಳಿಸಿದ ಕೃತ್ಯಕ್ಕೆ ರಾಜ್ಯಾದ್ಯಂತ ವ್ಯಾಪಕ ಖಂಡನೆ ವ್ಯಕ್ತವಾಗಿದೆ. ಇದೀಗ ಈ ಕುರಿತಾದಂತೆ ಮುಖ್ಯಮಂತ್ರಿ ಕುಮಾರಸ್ವಾಮಿ ಕೂಡಾ ಖಂಡನೆ ವ್ಯಕ್ತಪಡಿಸಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಸೂಕ್ತ ಕ್ರಮ ಕೈಗೊಳ್ಳಲು ಪೊಲೀಸರಿಗೆ ಸೂಚನೆ ನೀಡಿದ್ದಾರೆ ಎಂದು ತಿಳಿದು ಬಂದಿದೆ.

ಗುಂಡ್ಲಪೇಟೆ ತಾಲ್ಲೂಕಿನಲ್ಲಿ ದಲಿತ ವ್ಯಕ್ತಿಯ ಮೇಲೆ ಹಲ್ಲೆ ನಡೆಸಿ, ಬೆತ್ತಲೆ ಮೆರವಣಿಗೆ ಮಾಡಿರುವುದು ಅತ್ಯಂತ ಅಮಾನವೀಯ. ಈ ಕುರಿತು ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲು ಪೊಲೀಸರಿಗೆ ತಿಳಿಸಿದ್ದೇನೆ. ಸಮಾಜದಲ್ಲಿ ಜಾತಿ ವೈಷಮ್ಯ ಇನ್ನೂ ಮುಂದುವರಿದಿರುವುದು ದುರದೃಷ್ಟಕರ. ಇಂಥ ಕೃತ್ಯಗಳನ್ನು ಒಕ್ಕೊರಲಿನಿಂದ ವಿರೋಧಿಸಬೇಕು.’ ಎಂದು ಟ್ವೀಟ್‌ ಮಾಡಿದ್ದಾರೆ.

LEAVE A REPLY

Please enter your comment!
Please enter your name here