ಕಾರ್ಯಕರ್ತರ ಸಮಾವೇಶದಲ್ಲಿ ದೇವೇಗೌಡರು ನೀಡಿದ ಸೂಚನೆ ಏನುಗೊತ್ತೇ?

0
457

ನ್ಯೂಸ್ ಕನ್ನಡ ವರದಿ: ಯಾವಾಗ ಚುನಾವಣೆ ಎದುರಾದರೂ ಅದನ್ನು ಎದುರಿಸಲು ಪಕ್ಷ ಸಿದ್ದವಾಗಿರಬೇಕು. ಅದಕ್ಕಾಗಿ ಪಕ್ಷ ಸಂಘಟನೆಗೆ ಆದ್ಯತೆ ನೀಡಿದ್ದೇವೆ ಎಂದು ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಇಂದಿಲ್ಲಿ ತಿಳಿಸಿದರು. ಬೆಂಗಳೂರು ನಗರದಲ್ಲಿ ಆಯೋಜಿಸಲಾಗಿದ್ದ ಜೆಡಿಎಸ್ ಸಮಾವೇಶದಲ್ಲಿ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿ ಮತ್ತು ಅಮಿತ್ ಷಾ ಅವರು ಯಾವಾಗ ಏನು ನಿರ್ಧಾರ ತೆಗೆದುಕೊಳ್ಳುತ್ತಾರೆ ಎಂಬುದು ತಿಳಿದಿಲ್ಲ. ಹಾಗಾಗಿ ಚುನಾವಣೆ ಯಾವಾಗ ಬೇಕಾದರೂ ಎದುರಾಗಬಹುದು. ಅದಕ್ಕೆ ಪಕ್ಷ ಸಿದ್ದವಾಗಿರಬೇಕು ಎಂದರು.

ಈ ತಿಂಗಳ ಅಂತ್ಯಕ್ಕೆ ಮಹಿಳಾ ಸಮಾವೇಶ ನಡೆಸಿ ಮಹಿಳಾ ಮೀಸಲಾತಿಗೆ ಒತ್ತಾಯಿಸಲಾಗುವುದು. ಮುಂದಿನ ತಿಂಗಳು ಹಿಂದುಳಿದ ವರ್ಗ, ಎಸ್ಸಿ-ಎಸ್ಟಿ ಸಮಾವೇಶವನ್ನು ಉತ್ತರ ಕರ್ನಾಟಕದಲ್ಲಿ ಆಯೋಜಿಸಲಾಗುವುದು. ಪಕ್ಷ ಉಳಿಸಲು ನಿಷ್ಠಾವಂತ ಕಾರ್ಯಕರ್ತರನ್ನುಒಗ್ಗೂಡಿಸುವ ಕೆಲಸ ನಡೆಯಲಿದೆ. ಪಕ್ಷ ಕಟ್ಟುವ ಕೆಲಸಕ್ಕೆ ಎಲ್ಲರೂ ಮುಂದಾಗಿ ಎಂದು ಕರೆ ನೀಡಿದರು. ಮಳೆಯ ನಡುವೆಯೂ ಇಷ್ಟೊಂದು ಮಂದಿ ಸಮಾವೇಶದಲ್ಲಿ ಪಾಲ್ಗೊಂಡಿರುವುದು ತಮಗೆ ಮತ್ತಷ್ಟು ಆತ್ಮವಿಶ್ವಾಸ ಹೆಚ್ಚಿಸಿದೆ. ನಾರಾಯಣಗೌಡ,ಗೋಪಾಲಯ್ಯ ಹಾಗೂ ಎಚ್.ವಿಶ್ವನಾಥ್ ಅವರ ಕ್ಷೇತ್ರಗಳಿಗೆ ಆಯಾ ಕ್ಷೇತ್ರದವರನ್ನೇ ಕಣಕ್ಕಿಳಿಸಲಾಗುವುದು ಎಂದು ತಿಳಿಸಿದರು.

LEAVE A REPLY

Please enter your comment!
Please enter your name here