ಪರಮೇಶ್ವರ್ ಪಿಎ ಆತ್ಮಹತ್ಯೆಗೆ ಐಟಿ ಇಲಾಖೆಯೇ ಕಾರಣ: ಉಗ್ರಪ್ಪ ಕಿಡಿ

0
223

ನ್ಯೂಸ್ ಕನ್ನಡ ವರದಿ: ಮಾಜಿ ಡಿಸಿಎಂ ಪರಮೇಶ್ವರ್ ಅವರ ಪಿಎ ರಮೇಶ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳು ಪ್ರಚೋದನೆ ನೀಡಿದ್ದಾರೆ ಎಂದು ಮಾಜಿ ಸಂಸದ ವಿ.ಎಸ್. ಉಗ್ರಪ್ಪ ಆರೋಪಿಸಿದ್ದಾರೆ.

ನಗರದಲ್ಲಿ ಮಾತನಾಡಿದ ಉಗ್ರಪ್ಪ, ರಮೇಶ್ ಆತ್ಮಹತ್ಯೆಗೆ ಸಂಬಂಧಿಸಿದಂತೆ ಪೊಲೀಸರು ಕೂಡಲೇ ಕೇಸ್ ದಾಖಲಿಸಬೇಕು ಎಂದು ಆಗ್ರಹಿಸಿದರು. ಐಟಿ ಅಧಿಕಾರಿಗಳು ಕೇಂದ್ರ ಸರ್ಕಾರದ ಅಣತಿಯಂತೆ ಜಿ. ಪರಮೇಶ್ವರ್ ಮನೆ, ಕಚೇರಿ ಮೇಲೆ ದಾಳಿ ಮಾಡಿದ್ದಾರೆ. ಜೊತೆಗೆ ಅವರ ಆಪ್ತ ಸಹಾಯಕನ ಮನೆ ಮೇಲೂ ದಾಳಿ ಮಾಡಿದ್ದಾರೆ.

ರಮೇಶ್ ಐಟಿ ಕಿರುಕುಳದ ಬಗ್ಗೆ ಮೊದಲು ಮಾಧ್ಯಮದವರಿಗೆ ತಿಳಿಸಿದ್ದಾರೆ, ಆತ್ಮಹತ್ಯೆ ಮಾಡಿಕೊಳ್ಳುವ ಬಗ್ಗೆಯೂ ತಿಳಿಸಿದ್ದಾರೆ. ರಮೇಶ್​ ಆತ್ಮ ಹತ್ಯೆಗೆ ಐಟಿ ಅಧಿಕಾರಿಗಳೇ ಕಾರಣ. ಹೀಗಾಗಿ, ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಅಧಿಕಾರಿಗಳ ಮೇಲೆ ಕ್ರಮ ತೆಗೆದುಕೊಳ್ಳಬೇಕು ಅಂತಾ ಉಗ್ರಪ್ಪ ಆಗ್ರಹಿಸಿದರು.

LEAVE A REPLY

Please enter your comment!
Please enter your name here