ಕಾಂಗ್ರೆಸ್ ಮೇಲೆ ಬೇಸರ ವ್ಯಕ್ತಪಡಿಸಿದ ‘ಕೈ’ ಶಾಸಕ ಹ್ಯಾರಿಸ್‌..!

0
104

ನ್ಯೂಸ್ ಕನ್ನಡ ವರದಿ: ಒಂದು ಕಾಲದಲ್ಲಿ ಕಾಂಗ್ರೆಸ್‌ ಪಕ್ಷದ ಕಾರ್ಯಕರ್ತ ಎಂದು ಹೇಳಿಕೊಳ್ಳಲು ಹೆಮ್ಮೆ ಅನಿಸುತ್ತಿತ್ತು. ಪ್ರಸ್ತುತ ಕಾಂಗ್ರೆಸ್‌ ಪಕ್ಷ ನಿಷ್ಕ್ರಿಯವಾಗಿ ನಿಂತ ನೀರಾಗಿರುವುದು ಆತಂಕಕಾರಿ ಬೆಳವಣಿಗೆ ಎಂದು ಶಾಂತಿನಗರದ ಕಾಂಗ್ರೆಸ್‌ ಶಾಸಕ ಎನ್‌.ಎ.ಹ್ಯಾರಿಸ್‌ ಟ್ವೀಟರ್‌ನಲ್ಲಿ ಬೇಸರ ವ್ಯಕ್ತಪಡಿಸಿದ್ದಾರೆ.

ದೇಶದಲ್ಲಿ ನಡೆಯುತ್ತಿರುವ ಯಾವ ಬೆಳವಣಿಗೆಗಳ ವಿಚಾರದಲ್ಲೂ ಕಾಂಗ್ರೆಸ್‌ ಪಕ್ಷ ನ್ಯಾಯ ಒದಗಿಸುತ್ತಿಲ್ಲ. ಇದು ಕಾಂಗ್ರೆಸ್‌ ಪಕ್ಷದ ನಿಷ್ಕ್ರಿಯತನವೇ. ಪಕ್ಷ ದೇಶದ ಜವಾಬ್ದಾರಿ ನನ್ನ ಮೇಲಿದೆ ಎಂಬುದನ್ನು ಅರಿತುಕೊಳ್ಳಬೇಕಿದೆ.

ಆಡಳಿತ ಪಕ್ಷದ ಹಲವಾರು ಜನವಿರೋಧಿ ಬೆಳವಣಿಗೆಗಳಿಗೆ ಕಾಂಗ್ರೆಸ್‌ ಪಕ್ಷ ಉತ್ತರ ಕೊಡಬೇಕಾಗುತ್ತದೆ. ನಾನಂತೂ ಕಾಂಗ್ರೆಸ್‌ ಪಕ್ಷದ ಒಬ್ಬ ನಿಷ್ಠಾವಂತ ಕಾರ್ಯಕರ್ತನಾಗಿ ಪಕ್ಷದ ಬೆಳವಣಿಗೆಯ ದೃಷ್ಟಿಯಿಂದ ಆತಂಕಗೊಂಡಿದ್ದೇನೆ ಎಂದು ಟ್ವೀಟರ್‌ನಲ್ಲಿ ಬರೆದುಕೊಂಡಿದ್ದಾರೆ.

LEAVE A REPLY

Please enter your comment!
Please enter your name here