ಅತೃಪ್ತ ಶಾಸಕರ ಬೇಟೆಗೆ ಕಣಕ್ಕಿಳಿದ ದೇವೇಗೌಡರು! ಇಲ್ಲಿದೆ ಕಂಪ್ಲೀಟ್ ಡೀಟೇಲ್ಸ್..

0
803

ನ್ಯೂಸ್ ಕನ್ನಡ ವರದಿ : ಶಾಸಕರ ಸಾಮೂಹಿಕ ರಾಜೀನಾಮೆಯಿಂದಾಗಿ ಸಂಕಷ್ಟಕ್ಕೆ ಸಿಲುಕಿರುವ ಸರ್ಕಾರ ಉಳಿಸಿಕೊಳ್ಳಲು ಕಾಂಗ್ರೆಸ್​ ಮತ್ತು ಜೆಡಿಎಸ್​​ ಎಲ್ಲಾ ರೀತಿಯ ಕಾರ್ಯತಂತ್ರ ರೂಪಿಸಿದೆ. ಆದರೂ ಕೂಡ ಒಪ್ಪದ ಅತೃಪ್ತ ಶಾಸಕರು ದೋಸ್ತಿ ನಾಯಕರಿಗೆ ಕೈಕೊಟ್ಟು ಮುಂಬೈಗೆ ಹಾರಿದ್ದಾರೆ.

ಇನ್ನು ಅತೃಪ್ತ ಶಾಸಕರೊಂದಿಗೆ ಮಾತನಾಡಲು ಕಾಂಗ್ರೆಸ್‌-ಜೆಡಿಎಸ್‌ನ ಮಲ್ಲಿಕಾರ್ಜುನ ಖರ್ಗೆ, ಗುಲಾಂ ನಬಿ ಆಜಾದ್ ಮತ್ತು ಜೆಡಿಎಸ್ ವರಿಷ್ಟ ಎಚ್‌.ಡಿ.ದೇವೇಗೌಡ ಇಂದು ಮುಂಬೈಗೆ ತೆರಳಲಿದ್ದಾರೆ. ರಾಜಕೀಯ ಚಾಣಕ್ಯ ಎಂದೇ ಹೆಸರಾದ ಮುತ್ಸದಿ ರಾಜಕಾರಣಿ, ಮಾಜಿ ಪ್ರಧಾನಿ ದೇವೇಗೌಡರು ಇದೀಗ ನೇರವಾಗಿ ಅಖಾಡಕ್ಕೆ ಇಳಿದಿರುವುದು ತೀವ್ರ ಕುತೂಹಲ ಮೂಡಿಸಿದೆ.

ಮೂವರು ಮುಖಂಡರ ಜೊತೆ ಡಿಕೆ.ಶಿವಕುಮಾರ್, ಸಿಎಂ ಕುಮಾರಸ್ವಾಮಿ, ಡಿಸಿಎಂ ಪರಮೇಶ್ವರ್, ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಅವರು ಸಹ ತೆರಳಲಿದ್ದಾರೆ ಎನ್ನಲಾಗಿದೆ. ಪ್ರಮುಖ ನಾಯಕರು ತೆರಳಿ ಮಾತನಾಡಿದರೆ ಅತೃಪ್ತರು ಮನಸ್ಸು ಬದಲಿಸಬಹುದು ಎಂಬ ಕಾರಣಕ್ಕೆ ಈ ನಿರ್ಣಯ ತೆಗೆದುಕೊಳ್ಳಲಾಗಿದೆ. ಮುಂಬೈನ ರಿನೈಸೆನ್ಸ್‌ ಹೊಟೆಲ್ ಗೆ ತೆರಳಿ ಅಲ್ಲಿ ನೆಲೆಸಿರುವ ಕಾಂಗ್ರೆಸ್-ಜೆಡಿಎಸ್‌ ನ 13 ಅತೃಪ್ತ ಶಾಸಕರ ಮನವೊಲಿಸುವ ಪ್ರಯತ್ನ ಮಾಡಲಿದ್ದಾರೆ. ಕೆಲವು ದಿನಗಳ ಹಿಂದೆ ಡಿ.ಕೆ.ಶಿವಕುಮಾರ್ ಅವರು ಇದೇ ಹೊಟೆಲ್ ಮುಂದೆ ನಿಂತು ಪ್ರತಿಭಟನೆ ಮಾಡಿದ ರೀತಿ ಇಲ್ಲಿ ನೆನಪಿಸಿಕೊಳ್ಳಬಹುದು.

LEAVE A REPLY

Please enter your comment!
Please enter your name here