ಮೈತ್ರಿ ಸರ್ಕಾರಕ್ಕೆ ಮಲ್ಲಿಕಾರ್ಜುನ ಖರ್ಗೆ ಮುಖ್ಯಮಂತ್ರಿಯಾಗಬೇಕಿತ್ತು: ಸಿಎಂ ಕುಮಾರಸ್ವಾಮಿ

0
146

ನ್ಯೂಸ್ ಕನ್ನಡ ವರದಿ (15.5.19): ಕಲಬುರಗಿ ಜಿಲ್ಲೆಯ ಚಿಂಚೋಳಿ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಗೆ ಮಂಗಳವಾರ ಎಚ್.ಡಿ.ಕುಮಾರಸ್ವಾಮಿ ಪ್ರಚಾರ ನಡೆಸಿದ ಕುಮಾರಸ್ವಾಮಿಯವರು ಮಲ್ಲಿಕಾರ್ಜುನ ಖರ್ಗೆಯವರನ್ನು ಹಾಡಿಹೊಗಳಿದರು. ‘ಮಲ್ಲಿಕಾರ್ಜುನ ಖರ್ಗೆ ಅವರು ಎಂದೋ ರಾಜ್ಯದ ಮುಖ್ಯಮಂತ್ರಿ ಆಗಬೇಕಿತ್ತು. ಮೈತ್ರಿ ಸರ್ಕಾರದ ಮುಖ್ಯಮಂತ್ರಿ ಅವರೇ ಆಗಬೇಕಿತ್ತು. ಆದರೆ, ಹೈಕಮಾಂಡ್‌ಗೆ ಕೊಟ್ಟ ಮಾತಿಗೆ ಬದ್ಧರಾಗಿದ್ದಾರೆ ಹಾಗಾಗಿ ತ್ಯಾಗಮಾಡಿದ್ದಾರೆ’ ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹೇಳಿದರು.

ಮಲ್ಲಿಕಾರ್ಜುನ ಖರ್ಗೆ ಅವರಿಂದ ರಾಜಕೀಯವಾಗಿ ಬೆಳೆದವರು ಇಂದು ಅವರ ವಿರುದ್ಧವೇ ತೊಡೆ ತಟ್ಟಿ ಭಾಷಣ ಮಾಡುತ್ತಿದ್ದಾರೆ. ಹೈದರಾಬಾದ್-ಕರ್ನಾಟಕ ಭಾಗದ ಜನರಿಗೆ ಪ್ರಾಮಾಣಿಕ ಕೊಡುಗೆ ಕೊಟ್ಟ ಖರ್ಗೆ ಅವರನ್ನು ಟೀಕಿಸಲಾಗುತ್ತಿದೆ’ ಎಂದು ಕುಮಾರಸ್ವಾಮಿ ಬೇಸರ ವ್ಯಕ್ತಪಡಿಸಿದರು. ಮೇ 19ರಂದು ಚಿಂಚೋಳಿ ಕ್ಷೇತ್ರದ ಉಪ ಚುನಾವಣೆ ನಡೆಯಲಿದೆ. ಮೈತ್ರಿ ಸರಕಾರದಲ್ಲಿ ಬಂಡಾಯದ ಬಿಸಿ ಮುಟ್ಟುತ್ತಾ ಇರುವಂತೆ ಹಿರಿಯ ನಾಯಕರನ್ನು ಕುಮಾರಸ್ವಾಮಿ ಹೊಗಳಿ ಕಾಂಗ್ರೆಸ್ ನ ಬಂಡಾಯ ಶಮನಕ್ಕೆ ಪ್ರಯತ್ನಿಸಿದ್ದಾರೆ.

LEAVE A REPLY

Please enter your comment!
Please enter your name here