Sunday October 8 2017

Follow on us:

Contact Us

ಪ್ರಥಮ ಹಂತದಲ್ಲಿಯೇ ಪತ್ತೆ ಹಚ್ಚಿ ಚಿಕಿತ್ಸೆ ಪಡೆದರೆ ಮಾತ್ರ ರೋಗ ನಿಯಂತ್ರಿಸಲು ಸಾಧ್ಯ : ಡಾ. ಕಾಂತರಾಜು

ಶಿವಮೊಗ್ಗ: ಡೆಂಗ್ಯೂ ಮತ್ತು ಮಲೇರಿಯಾದಂತಹ ರೋಗಗಳನ್ನು ಪ್ರಥಮ ಹಂತದಲ್ಲಿಯೇ ಪತ್ತೆ ಹಚ್ಚಿ ಚಿಕಿತ್ಸೆ ಪಡೆದರೆ ಮಾತ್ರ ರೋಗ ನಿಯಂತ್ರಿಸಲು ಸಾಧ್ಯ ಎಂದು ಜಿಲ್ಲಾ ರೋಗವಾಹಕ ಆಶ್ರಿತ ರೋಗಿಗಳ ನಿಯಂತ್ರಣಾಧಿಕಾರಿ ಡಾ. ಕಾಂತರಾಜು ತಿಳಿಸಿದರು.

ಇಂದು ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ರಾಷ್ಟ್ರೀಯ ಸೇವಾ ಯೋಜನೆ, ಕುಟುಂಬ ಕಲ್ಯಾಣ ಇಲಾಖೆ ಮತ್ತು ಮಹಾನಗರಪಾಲಿಕೆ ಇವುಗಳ ಸಂಯುಕ್ತಾಶ್ರಯದಲ್ಲಿ ಆಯೋಜಿಸಲಾಗಿದ್ದ ಡೆಂಗ್ಯೂ ಮತ್ತು ಮಲೇರಿಯಾ ಅರಿವು ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಡೆಂಗ್ಯೂ ಮತ್ತು ಮಲೇರಿಯಾ ರೋಗಗಳು ಕಲುಷಿತ ವಾತಾವರಣ, ಕಲುಷಿತ ನೀರು, ಗಾಳಿಯಿಂದ ಉಂಟಾಗುತ್ತದೆ. ರೋಗದ ಲಕ್ಷಣಗಳು ಕಾಣಿಸಿಕೊಂಡಾಗ ನಿರ್ಲಕ್ಷ್ಯ ಮಾಡದೆ ತಕ್ಷಣವೆ ಸೂಕ್ತ ವೈದ್ಯರಿಂದ ಚಿಕಿತ್ಸೆ ಪಡೆಯಬೇಕು. ಸೊಳ್ಳೆಗಳಿಂದ ಹರಡುವ ಈ ರೋಗಗಳು ಮಳೆಗಾಲದಲ್ಲಿ ಹೆಚ್ಚಾಗಿ ಕಂಡು ಬರುತ್ತವೆ ಎಂದರು.

ಮಾನ್ಸೂನ್ ಅವಧಿಯಲ್ಲಿ ಸೊಳ್ಳೆಗಳ ಸಂತಾನೋತ್ಪ್ಪತ್ತಿ ಹೆಚ್ಚಾಗಿರುತ್ತದೆ. ಈ ಸಮಯದಲ್ಲಿ ಸೊಳ್ಳೆಗಳ ಮೂಲಕ ಕಾಯಿಲೆಗಳು ಹರಡುವ ಸಂಭವ ಹೆಚ್ಚಾಗಿರುತ್ತದೆ. ಇಂತಹ ಸಂದರ್ಭದಲ್ಲಿ ಎಲ್ಲರೂ ಆರೋಗ್ಯದ ಕಡೆ ಹೆಚ್ಚು ನಿಗಾವಹಿಸಬೇಕು. ಮನೆಯ ಸುತ್ತಮುತ್ತ ಕಲುಷಿತ ನೀರು ನಿಲ್ಲದಂತೆ ಸ್ವಚ್ಛತೆ ಕಾಪಾಡಿಕೊಳ್ಳಬೇಕು. ವೈರಾಣುಗಳಿಂದ ಬರುವ ರೋಗಗಳಿಗೆ ನಿಖರವಾದ ಚಿಕಿತ್ಸೆಯಿಲ್ಲ. ಇದಕ್ಕೆ ಸ್ವಯಂ ರಕ್ಷಣೆ ಮುಖ್ಯವಾಗುತ್ತದೆ. ನಮ್ಮ ಸುತ್ತಮುತ್ತಲಿನ ಪರಿಸರವನ್ನು ರಕ್ಷಣೆ ಮಾಡಿಕೊಳ್ಳಬೇಕು. ರೋಗದ ಕುರಿತು ಜನರಲ್ಲಿ ಅರಿವು ಮೂಡಿಸುವ ಕೆಲಸಗಳಾಗಬೇಕು ಉದಾಸೀನ ಮಾಡದೇ ಸೂಕ್ತ ಚಿಕಿತ್ಸೆ ಪಡೆದುಕೊಂಡಾಗ ಡೆಂಗ್ಯೂ ಮತ್ತು ಮಲೇರಿಯಾದಂತ ರೋಗಗಳು ನಿರ್ಮೂಲನೆ ಮಾಡಲು ಸಾಧ್ಯ ಎಂದವರು ನುಡಿದರು.

2023 ರೊಳಗಾಗಿ ಮಲೇರಿಯಾ ರೋಗವನ್ನು ಸಂಪೂರ್ಣ ನಿರ್ಮೂಲನೆ ಮಾಡಲು ಉದ್ದೇಶಿಸಿದ್ದು, ಅದರ ವ್ಯವಸ್ಥಿತ ಅನುಷ್ಠಾನಕ್ಕಾಗಿ ಹಲವಾರು ಪರಿಣಾಮಕಾರಿ ಕಾರ್ಯಕ್ರಮಗಳನ್ನು ಸರ್ಕಾರ ನಡೆಸುತ್ತಿದೆ. ಗರ್ಭಿಣಿ, ಶಿಶು ಹಾಗೂ ಹೆಚ್.ಐ.ವಿ ಸೋಂಕಿತ ರೋಗಿಗಳಿಗೆ ಡೆಂಗ್ಯೂ ಅಪಾಯಕಾರಿ ಮಾತ್ರವಲ್ಲ ಹೆಚ್ಚಿನ ಪರಿಣಾಮ ಬೀರುತ್ತದೆ. ಎಂದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲ ಡಾ.ಜಿ.ಆರ್.ಹೆಗಡೆ ಅವರು ಮಾತನಾಡಿ, ಕಾಯಿಲೆ ಬಂದಾಗ ಆತಂಕ ಪಡುವ ಬದಲು ಮೊದಲೇ ಸುರಕ್ಷಿತ ಕ್ರಮಗಳನ್ನು ಅನುಸರಿಸಬೇಕು. ನಿತ್ಯ ನಮ್ಮ ಸುತ್ತಮುತ್ತಲಿನ ಪರಿಸರ ಸ್ವಚ್ಛತೆ ಕಾಪಾಡಿಕೊಂಡಾಗ ಆರೋಗ್ಯವು ಉತ್ತಮವಾಗಿರುತ್ತದೆ ಎಂದರು.

ಕಾರ್ಯಕ್ರಮದಲ್ಲಿ ರಾ.ಸೇ.ಯೋ. ಕಾರ್ಯಕ್ರಮಾಧಿಕಾರಿಗಳಾದ ಎಸ್.ನಾಗರಾಜನಾಯ್ಕ, ಡಾ.ಸೀಮಾ ಇಲಾಖಾ ಸಿಬ್ಬಂದಿ ವರ್ಗದವರು ಹಾಗೂ ಇನ್ನಿತರರು ಉಪಸ್ಥಿತರಿದ್ದರು

Comments

ಸೂಚನೆ : ಯಾವುದೇ ತೆರನಾದ ಧಾರ್ಮಿಕ, ರಾಜಕೀಯ ಮತ್ತು ವ್ಯಕ್ತಿ ನಿಂದನಾತ್ಮಕ ಪ್ರತಿಕ್ರಿಯೆಗಳನ್ನಾಗಲೀ, ಭಾರತ ಒಕ್ಕೂಟ ವ್ಯವಸ್ಥೆಯಡಿ ಬರುವ ಪ್ರದೇಶ, ಭಾಷೆ ಅಥವಾ ಸಂಸ್ಕೃತಿಯನ್ನು ತೆಗಳುವ ಪ್ರತಿಕ್ರಿಯೆಯನ್ನಾಗಲೀ, ಸಾಮಾಜಿಕ ಸ್ವಾಸ್ಥ್ಯದ ಮೇಲೆ ಪರಿಣಾಮ ಬೀರುವ ಅಸಭ್ಯ, ಅಶ್ಲೀಲ ಪ್ರತಿಕ್ರಿಯೆಯನ್ನಾಗಲೀ ಹಾಕಬಾರದಾಗಿ ವಿನಂತಿ. ನಿಮ್ಮ ಪ್ರತಿಕ್ರಿಯೆಗೆ ಆಯಾ ವ್ಯಕ್ತಿ ಸಂಪೂರ್ಣವಾಗಿ ಜವಾಬ್ದಾರರಾಗಿದ್ದು "ನ್ಯೂಸ್ ಕನ್ನಡ" ಬಳಗ ಜವಾಬ್ದಾರರಾಗಿರುವುದಿಲ್ಲ. ಅಲ್ಲದೆ ಇಂಥಹ ಪ್ರತಿಕ್ರಿಯೆಗಳು ಕಾನೂನಾತ್ಮಕವಾಗಿ ಅಪರಾಧವಾಗಿದ್ದು, ಸಂಬಧಪಟ್ಟ ಇಲಾಖೆ ಮಾಹಿತಿಯನ್ನು ಕೇಳಿದರೆ ನಿಮ್ಮ ಸಂಪೂರ್ಣ ಹೆಸರು ಮತ್ತು ಐ.ಪಿ ವಿಳಾಸವನ್ನು ಒದಗಿಸಲು "ನ್ಯೂಸ್ ಕನ್ನಡ" ಬದ್ದವಾಗಿರುತ್ತದೆ.

ಲಾಠಿ, ಬಂದೂಕು ನೀಡಿರುವುದು ದೌರ್ಜನ್ಯ ಎಸಗಲು ಅಲ್ಲ, ಜನರ ರಕ್ಷಣೆಗಾಗಿ: ಪಶ್ಚಿಮ ವಲಯ ಐಜಿಪಿ ಹೇಮಂತ ನಿಂಬಾಳ್ಕರ

ಮುಂದಿನ ಸುದ್ದಿ »

ಮುತಾಲಿಕ್ ಯಾವನು? ಅವನ ಮಾತಿಗೆ ಬೆಲೆ ಕೊಡುವ ಅಗತ್ಯವಿದೆಯಾ?: ಸಚಿವ ರೈ

ಇತ್ತೀಚಿನ ಸುದ್ದಿಗಳು

ಸಿನೆಮಾ

  • ಜಬ್ಬಾರ್ ಎಂಬೋ ಜಬರ್ ದಸ್ತ್ ಶಕ್ತಿ ಮತ್ತು ಸ್ಫೂರ್ತಿ!

    January 9, 2018

    ಅಬ್ದುಲ್ ಜಬ್ಬಾರ್ ಪೊನ್ನೋಡಿ ಮತ್ತು ಸಹಕಲಾವಿದೆ ಮಂಜು ವರ್ಷಾ; ಈ ಇಬ್ಬರನ್ನೂ ನಾನು ಅಪ್ಪಿಕೊಂಡು, ಮುತ್ತಿಟ್ಟು ಶುಭ ಹಾರೈಸಿ ಈಗ ಚಿತ್ರೀಕರಣ ಪ್ರಾರಂಭಿಸೋಣ ಎಂದು ಹೇಳಿದ್ದೇ ಮುಹೂರ್ತ. ಚಿತ್ರೀಕರಣ ಆರಂಭವಾಯಿತು. ಕನ್ನಡ ಮತ್ತು ಇಂಗ್ಲೀಷ್ ಎರಡೂ ಭಾಷೆಗಳ ...

    Read More

ಹೆಚ್ಚಿನ ಸುದ್ದಿ

More

ನೆನಪಿನ ಸಂಚಿ

ಹೆಚ್ಚಿನ ಸುದ್ದಿ

More

ಭೂತಗನ್ನಡಿ

ಹೆಚ್ಚಿನ ಸುದ್ದಿ

More
Menu
×