ಕರಾವಳಿ ಜಿಲ್ಲೆಗಳಲ್ಲಿ ಭರ್ಜರಿ ಮಳೆ; ಹಲವೆಡೆ ಜೀವನ ಅಸ್ತವ್ಯಸ್ತ!

0
1176

ನ್ಯೂಸ್ ಕನ್ನಡ ವರದಿ (13-6-2019): ಮುಂಗಾರು ಹಾಗೂ ವಾಯು ಚಂಡಮಾರುತದ ಪ್ರಭಾವ ಮೂರು ದಿನಗಳಿಂದ ಭಾರೀ ಮಳೆಯಾಗುತ್ತಾ ಇದ್ದು ದಕ್ಷಿಣ ಕನ್ನಡದಲ್ಲಿ ಸಮುದ್ರ ಪ್ರಕ್ಷುಬ್ಧಗೊಂಡಿದ್ದು ಮಂಗಳೂರಿನ ಉಳ್ಳಾಲದ ಸೋಮೇಶ್ವರದಲ್ಲಿ ಕಡಲ್ಕೊರೆತ ಹೆಚ್ಚಿ ರೆಸಾರ್ಟ್‍ನ ಶೌಚಾಲಯ ಕಟ್ಟಡ ಸಮುದ್ರ ಪಾಲಾಗಿದೆ.

ಉಡುಪಿ ಜಿಲ್ಲೆಯ ಎಲ್ಲ ತಾಲೂಕಿನಲ್ಲಿ ಮಳೆ ಆಗಿದೆ. ಬೈಂದೂರು, ಕುಂದಾಪುರದಲ್ಲಿ ಗಾಳಿ ಸಹಿತ ರಾತ್ರಿಯಿಡೀ ಮಳೆಯಾಗಿದೆ. ಹವಾಮಾನ ಇಲಾಖೆ ಜೂನ್ 15ರವರೆಗೆ ಕರಾವಳಿಯಲ್ಲಿ ಸಾಧಾರಣ ಮಳೆ, ಜೂನ್ 20ರ ನಂತರ ಅಬ್ಬರದ ಮುಂಗಾರು ಮಳೆಯನ್ನು ನಿರೀಕ್ಷೆ ಮಾಡಬಹುದು ಎಂದಿದೆ. ಉತ್ತರ ಕನ್ನಡ ಜಿಲ್ಲೆಯ ಕಾರವಾರದಲ್ಲಿ ಸುರಿದ ಭಾರೀ ಮಳೆಗೆ ಶೇಜಾವಾಡದ ಗುಡ್ಡದ ಬಳಿ ಇರುವ ವಿದ್ಯುತ್ ಕಂಬಗಳು ಉರುಳಿಬಿದ್ದಿವೆ. ಇದರಿಂದಾಗಿ ಕಾರವಾರದ ಅರ್ಧ ಭಾಗ ವಿದ್ಯುತ್ ವ್ಯತ್ಯಯವಾಗಿದೆ ಎಂದು ತಿಳಿದುಬಂದಿದೆ. ನಿನ್ನೆಯಿಂದ ಕಂಬಗಳ ರಿಪೇರಿ ಕೆಲಸ ಸಾಗಿದ್ದರೂ ಪೂರ್ಣವಾಗಿಲ್ಲ. ಹಾಗಾಗಿ, 2 ದಿನದಿಂದ ಜನ ಕತ್ತಲಲ್ಲಿ ಇರುವಂತಾಗಿದೆ. ರಿಪೇರಿ ಕೆಲಸಗಳು ಸಾಗಿವೆಯಾದರೂ ಇನ್ನೂ ಪೂರ್ಣಗೊಂಡಿಲ್ಲ.

LEAVE A REPLY

Please enter your comment!
Please enter your name here