ತಿಹಾರ್ ಜೈಲಿನಲ್ಲಿ ಡಿಕೆಶಿ ಭೇಟಿಯಾದ ಹೆಚ್.ಡಿ.ಕುಮಾರಸ್ವಾಮಿ

0
163

ನ್ಯೂಸ್ ಕನ್ನಡ ವರದಿ: ಅಕ್ರಮ ಹಣ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ತಿಹಾರ್ ಜೈಲಿನಲ್ಲಿರುವ ಕಾಂಗ್ರೆಸ್ ನಾಯಕ, ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಅವರನ್ನು ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಭೇಟಿಯಾಗಿದ್ದಾರೆ.

ಡಿ.ಕೆ.ಶಿವಕುಮಾರ್ ಅವರ ಸಹೋದರ ಸಂಸದ ಡಿ.ಕೆ. ಸುರೇಶ್ ಜೊತೆ ತಿಹಾರ್ ಜೈಲಿಗೆ ತೆರಳಿದ ಹೆಚ್.ಡಿ.ಕುಮಾರಸ್ವಾಮಿ ಡಿ.ಕೆ.ಶಿವಕುಮಾರ್ ಅವರನ್ನು ಭೇಟಿಯಾಗಿ ಅವರ ಆರೋಗ್ಯ ವಿಚಾರಿಸಿದರು.

ಇನ್ನು, ಡಿ.ಕೆ. ಶಿವಕುಮಾರ್ ಪತ್ನಿಗೆ ಜಾರಿ ನಿರ್ದೆಶನಾಲಯ ನೀಡಿರುವ ಸಮನ್ಸ್ ರದ್ದು ಕೋರಿ ದೆಹಲಿ ಹೈಕೋರ್ಟ್ ಗೆ ಸಲ್ಲಿಸಿರುವ ಅರ್ಜಿ ವಿಚಾರಣೆ ಕೂಡ ಇಂದು ನಡೆಯಲಿದೆ. ಹೀಗಾಗಿ ಇಂದೂ ಡಿಕೆಶಿಗೆ ರಿಲೀಫ್ ಸಿಗಲಿದೆಯಾ ಎನ್ನುವುದು ಕಾದು ನೋಡಬೇಕು.

LEAVE A REPLY

Please enter your comment!
Please enter your name here