ಮಹಾರಾಷ್ಟ್ರ ಆಘಾತದ ಬೆನ್ನಲ್ಲೇ, ಜಾರ್ಖಂಡ್‌ ನಲ್ಲಿಯೂ ಬಿಜೆಪಿಗೆ ಬಿಗ್ ಶಾಕ್

0
538

ನ್ಯೂಸ್ ಕನ್ನಡ ವರದಿ: ಮಹಾರಾಷ್ಟ್ರದಲ್ಲಿ ಚುನಾವಣೆಗೂ ಮುನ್ನ ಶಿವಸೇನೆ ಜತೆ ಮೈತ್ರಿ ಮಾಡಿಕೊಂಡಿದ್ದ ಬಿಜೆಪಿಗೆ ಸರ್ಕಾರ ರಚಿಸಲು ಆಗದೆ ಬಿಜೆಪಿಗೆ ತೀವ್ರ ಮುಖಭಂಗವಾಗಿತ್ತು ಇದರ ನಡುವೆಯೇ ಮುಂಬರುವ ಜಾರ್ಖಂಡ್ ವಿಧಾನಸಭಾ ಚುನಾವಣೆಯಲ್ಲಿ ಲೋಕಜನ ಶಕ್ತಿ ಪಕ್ಷ ಏಕಾಂಗಿಯಾಗಿ ಸ್ಪರ್ಧಿಸಲಿದೆ ಎಂದು ಮಂಗಳವಾರ ಘೋಷಿಸುವ ಮೂಲಕ ಬಿಜೆಪಿಗೆ ಶಾಕ್ ನೀಡಿದೆ.

ನವೆಂಬರ್ 30ರಿಂದ 5 ಹಂತಗಳಲ್ಲಿ ನಡೆಯಲಿರುವ ಜಾರ್ಖಂಡ್ ವಿಧಾನಸಭಾ ಚುನಾವಣೆಯಲ್ಲಿ ನಾವು ಏಕಾಂಗಿಯಾಗಿ ಅಖಾಡಕ್ಕಿಳಿಯಲಿದ್ದು, 50 ಸ್ಥಾನಗಳಲ್ಲಿ ಸ್ಪರ್ಧಿಸುವುದಾಗಿ ಲೋಕಜನಶಕ್ತಿ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಚಿರಾಗ್ ಪಾಸ್ವಾನ್ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here