ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಬಿಜೆಪಿಯ 90 ನಾಯಕರ ರಾಜೀನಾಮೆ!: ಮೋದಿ-ಶಾ’ಗೆ ಬಿಗ್ ಶಾಕ್

0
690

ನ್ಯೂಸ್ ಕನ್ನಡ ವರದಿ: ಕೇಂದ್ರ ಸರ್ಕಾರ ಜಾರಿಗೊಳಿಸಿರುವ ಪೌರತ್ವ ಕಾಯ್ದೆಯನ್ನು ಮುಸ್ಲಿಂ ಅಲ್ಪಸಂಖ್ಯಾತ ಸಮುದಾಯ ತೀವ್ರವಾಗಿ ವಿರೋಧಿಸುತ್ತಿದೆ. ಹೀಗಿರುವಾಗ ಬಿಜೆಪಿಯ ಅಲ್ಪಸಂಖ್ಯಾತ ಮೋರ್ಚಾದ ಕಾರ್ಯಕರ್ತರು ಈ ವಿಚಾರವಾಗಿ, ತಮ್ಮ ಸಮುದಾಯದ ಬೆಂಬಲಕ್ಕೆ ನಿಂತು ಸಿಎಎ ವಿರೋಧಿಸುವ ಮೂಲಕ ಬಿಜೆಪಿಗೆ ಬಹುದೊಡ್ಡ ಆಘಾತವೊಂದು ಬಂದೆರಗಿದೆ.

ಇಂದೋರ್ ನ ಬಿಜೆಪಿ ಮಂಡಲ್ ಹಾಗೂ ಮೋರ್ಚಾದ ವಿಭಿನ್ನ ಹುದ್ದೆಗಳಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಸುಮಾರು 90 ಮುಸ್ಲಿಂ ಕಾರ್ಯಕರ್ತರು ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡುವುದಾಗಿ ಘೋಷಿಸಿದ್ದಾರೆ.

ಸಿಎಎ ಮೂಲಕ ದೇಶವನ್ನು ಧಾರ್ಮಿಕವಾಗಿ ವಿಂಗಡಿಸುವ ಕೆಲಸ ನಡೆಯುತ್ತಿದೆ. ಇದು ಸಂವಿಧಾನದ ಮೂಲ ಆಶಯದ ವಿರುದ್ಧವಾಗಿದೆ. ಹೀಗಾಗಿ ತಾವು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ. ಪಿ. ನಡ್ಡಾಗೆ ರಾಜೀನಾಮೆ ನೀಡುವುದಾಗಿ ತಿಳಿಸಿದ್ದಾರೆ.

ಈ ಸಂಬಂಧ ಪ್ರತಿಕ್ರಿಯಿಸಿರುವ ಮುಸ್ಲಿಂ ಅಲ್ಪಸಂಖ್ಯಾತ ನಾಯಕ ರಾಜಿಕ್ ಫರ್ಶೀವಾಲಾ ‘ಕೇಂದ್ರ ಸರ್ಕಾರ ಈ ಕಾನೂನು ಜಾರಿಗೊಳಿಸಿ ಅಸಂವಿಧಾನಿಕ ಹೆಜ್ಜೆ ಇರಿಸಿದೆ. ಹೀಗಾಗಿ ಎಲ್ಲಾ ಕಾರ್ಯಕರ್ತರು ರಾಷ್ಟ್ರೀಯ ಅಧ್ಯಕ್ಷರಿಗೆ ರಾಜೀನಾಮೆ ಸಲ್ಲಿಸುತ್ತಿದ್ದೇವೆ’ ಎಂದಿದ್ದಾರೆ.

LEAVE A REPLY

Please enter your comment!
Please enter your name here