ಕೇಂದ್ರ ಚುನಾವಣಾ ಆಯೋಗದ ಮಾಜಿ ಮುಖ್ಯಆಯುಕ್ತ ಟಿ.ಎನ್.ಶೇಷನ್ ನಿಧನ

0
137

ನ್ಯೂಸ್ ಕನ್ನಡ ವರದಿ: ಭಾರತದ ಚುನಾವಣಾ ವ್ಯವಸ್ಥೆಯ ಸುಧಾರಕ, ಕೇಂದ್ರ ಚುನಾವಣಾ ಆಯೋಗದ ಮಾಜಿ ಮುಖ್ಯಆಯುಕ್ತ ಟಿ.ಎನ್.ಶೇಷನ್(86) ಭಾನುವಾರ ರಾತ್ರಿ ಕೊನೆಯುಸಿರೆಳೆದಿದ್ದಾರೆ.

1990 ಡಿ.12ರಿಂದ 1996 ಡಿ.11ರವರೆಗೆ ಮುಖ್ಯ ಚುನಾವಣಾ ಆಯುಕ್ತರಾಗಿದ್ದ ಶೇಷನ್ ಚುನಾವಣಾ ನೀತಿ ಸಂಹಿತೆ ಜಾರಿಯ ಹರಿಕಾರ ಎಂದೇ ಖ್ಯಾತಿ ಪಡೆದಿದ್ದರು. ಪಾರದರ್ಶಕ ಮತ್ತು ಶಾಂತಿಯುತ ಚುನಾವಣೆ ಪ್ರಕ್ರಿಯೆಯಲ್ಲಿ ಇವರ ಕೊಡುಗೆ ಅಪಾರ. ಕೇರಳದ ಪಾಲಕ್ಕಾಡ್ ಜಿಲ್ಲೆಯ ತಿರುನೆಲ್ಲೆ ೖನಲ್ಲಿ 1932ರ ಡಿ.15ರಂದು ಜನಿಸಿದರು.

ಐಎಎಸ್ ಅಧಿಕಾರಿ ಶೇಷನ್ ಅವರನ್ನು ರಾಜೀವ್ ಗಾಂಧಿ ಸರ್ಕಾರ ರಕ್ಷಣಾ ಇಲಾಖೆ ಕಾರ್ಯದರ್ಶಿಯಾಗಿ ನೇಮಕ ಮಾಡಿತ್ತು. ಬಳಿಕ 1989ರಲ್ಲಿ ಸಂಪುಟ ಕಾರ್ಯದರ್ಶಿಯಾಗಿ ಬಡ್ತಿ ಪಡೆದರು. ವಿ.ಪಿ.ಸಿಂಗ್ ಸರ್ಕಾರ ಇವರನ್ನು ಯೋಜನಾ ಆಯೋಗದ ಸದಸ್ಯರನ್ನಾಗಿ ನೇಮಕ ಮಾಡಿತ್ತು. ಕಳೆದ ಕೆಲವು ವರ್ಷಗಳಿಂದ ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದರು.

LEAVE A REPLY

Please enter your comment!
Please enter your name here