ಪಾಕ್ ಪ್ರಾಧಾನಿ ಇಮ್ರಾನ್ ಖಾನ್ ಅವರನ್ನು ಭಾರತಕ್ಕೆ ಆಹ್ವಾನಿಸಿದ ಮೋದಿ ಸರ್ಕಾರ!?

0
54

ನ್ಯೂಸ್ ಕನ್ನಡ ವರದಿ: ಶಾಂಘೈ ಸಹಕಾರ ಸಂಘದ ಶೃಂಗಸಭೆಯಲ್ಲಿ ಭಾಗವಹಿಸುವಂತೆ ಪಾಕ್ ಪ್ರಧಾನಿ ಇಮ್ರಾನ್ ಖಾನ್ ಅವರಿಗೆ ಭಾರತ ಅಧಿಕೃತ ಆಹ್ವಾನ ನೀಡಲಿದೆ.

ವರ್ಷದ ಕೊನೆಯಲ್ಲಿ ನವದೆಹಲಿಯಲ್ಲಿ ಶಾಂಘೈ ಸಹಕಾರ ಸಂಘದ ಶೃಂಗಸಭೆ ನಡೆಯಲಿದ್ದು, ಇದರಲ್ಲಿ ಎಲ್ಲ 8 ಸದಸ್ಯ ರಾಷ್ಟ್ರಗಳು ಹಾಗೂ 4 ವೀಕ್ಷಣಾ ರಾಷ್ಟ್ರಗಳು ಭಾಗವಹಿಸಲಿವೆ.

ಈ ಹಿನ್ನೆಲೆಯಲ್ಲಿ ಪಾಕ್ ಪ್ರಧಾನಿ ಇಮ್ರಾನ್ ಖಾನ್ ಅವರನ್ನೂ ಭಾರತ ಸರ್ಕಾರ ಆಹ್ವಾನಿಸಲಿರುವುದಾಗಿ ವಿದೇಶಾಂಗ ಇಲಾಖೆ ವಕ್ತಾರ ರವೀಶ್ ಕುಮಾರ್ ತಿಳಿಸಿದ್ದಾರೆ.

ಶಾಂಘೈ ಸಹಕಾರ ಸಂಘದ ಶೃಂಗಸಭೆಗೆ ಎಲ್ಲ ಸದಸ್ಯ ರಾಷ್ಟ್ರಗಳನ್ನೂ ಆಹ್ವಾನಿಸಲಾಗುವುದು ಎಂದು ರವೀಶ್ ಕುಮಾರ್ ಸ್ಷಷ್ಟಪಡಿಸಿದ್ದಾರೆ.

LEAVE A REPLY

Please enter your comment!
Please enter your name here