ಇಂಡೊನೇಷ್ಯದಿಂದ ಬೆಂಗಳೂರು ವಿಮಾನ ನಿಲ್ದಾಣಕ್ಕೆ ಬಂದಿಳಿದ 214 ಪ್ರಯಾಣಿಕರ

0
31

ನ್ಯೂಸ್ ಕನ್ನಡ ವರದಿ: ಕೋವಿಡ್-19 ಲಾಕ್ ಡೌನ್ ಪರಿಸ್ಥಿತಿಯಲ್ಲಿ ಇಂಡೋನೇಷ್ಯಾದ ಜರ್ಕಾತದಿಂದ ಇಂದು ಬೆಳಗಿನ ಜಾವ 1:40 ಗಂಟೆಗೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ, ದೇವನಹಳ್ಳಿಯಲ್ಲಿರುವ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದ ಹನ್ನೆರಡನೆಯ ವಿಮಾನದಲ್ಲಿ 214 ಮಂದಿ ಅನಿವಾಸಿ ಭಾರತೀಯರು ಆಗಮಿಸಿದ್ದಾರೆ.

ತಜ್ಞ ವೈದ್ಯರು ಹಾಗೂ ಸಿಬ್ಬಂದಿಗಳು 214 ಪ್ರಯಾಣಿಕರ ಆರೋಗ್ಯ ತಪಾಸಣೆ ನಡೆಸಿದ್ದು, ಯಾವುದೇ ಪ್ರಯಾಣಿಕರಲ್ಲಿ ಕೊರೋನಾ ವೈರಾಣು ಸೋಂಕಿನ ಲಕ್ಷಣಗಳು ಕಂಡುಬಂದಿರುವುದಿಲ್ಲ.

214 ಪ್ರಯಾಣಿಕರನ್ನು 14 ದಿನಗಳ ಕ್ವಾರಂಟೈನ್ ಗಾಗಿ ಹೋಟೆಲ್ ಗಳಿಗೆ ಕಳುಹಿಸಿಕೊಡಲಾಗಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ ಅವರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here