ಮಾಜಿ ಕೇಂದ್ರ ಸಚಿವ ಅರುಣ್ ಜೇಟ್ಲಿ ದಾಖಲಾಗಿರುವ ಏಮ್ಸ್ ಆಸ್ಪತ್ರೆಯಲ್ಲಿ ಅಗ್ನಿ ದುರಂತ!

0
719

ನ್ಯೂಸ್ ಕನ್ನಡ ವರದಿ (18-8-2019): ಮಾಜಿ ಕೇಂದ್ರ ಸಚಿವ ಅರುಣ್ ಜೇಟ್ಲಿ ದಾಖಲಾಗಿರುವ ನವದೆಹಲಿಯ ಪ್ರತಿಷ್ಟಿತ ಏಮ್ಸ್‌ ಆಸ್ಪತ್ರೆಯಲ್ಲಿ ಬೆಂಕಿ ಅವಘಡ ಸಂಭವಿಸಿದ್ದು, 40 ಜನ ಅಗ್ನಿ ಶಾಮಕ ದಳದ ಸಿಬ್ಬಂದಿ ಬೆಂಕಿ ಆರಿಸುವ ಕಾರ್ಯದಲ್ಲಿ ನಿರತರಾಗಿದ್ದಾರೆ. ಏಮ್ಸ್‌ ಆಸ್ಪತ್ರೆಯ ಎರಡನೇಯ ಮಹಡಿಯಲ್ಲಿ ಭಾರಿ ಪ್ರಮಾಣದ ಬೆಂಕಿ ಕಾಣಿಸಿಕೊಂಡಿದ್ದು, ಕೂಡಲೇ ಸ್ಥಳಕ್ಕೆ ಆಗಮಿಸಿದ ಅಗ್ನಿ ಶಾಮಕ ದಳ ಬೆಂಕಿಯನ್ನು ನಿಯಂತ್ರಿಸಲು ಯತ್ನಿಸುತ್ತಿವೆ. ಶಾರ್ಟ್‌ ಸರ್ಕ್ಯೂಟ್‌ನಿಂದಾಗಿ ಬೆಂಕಿ ಹೊತ್ತಿಕೊಂಡಿದೆ ಎನ್ನಲಾಗಿದ್ದು, ಅದೃಷ್ಟವಶಾತ್ ಈ ವರೆಗೆ ಯಾವುದೇ ಸಾವು-ನೋವಿನ ವರದಿ ಆಗಿಲ್ಲ.

ಬೆಂಕಿ ಕಾಣಿಸಿಕೊಂಡಿರುವ ಕೊಠಡಿಯು ಆಸ್ಪತ್ರೆಯ ಎಮರ್ಜೆನ್ಸಿ ವಾರ್ಡ್‌ಗೆ ಸನಿಹವೇ ಇದ್ದು, ಬೆಂಕಿ ಕಾಣಿಸಿಕೊಂಡಿರುವ ಕೊಠಡಿಗಳು ಆಸ್ಪತ್ರೆಯ ತರಬೇತಿ ಕೊಠಡಿಗಳಾಗಿದ್ದವು. ಬೆಂಕಿ ಕಾಣಿಸಿಕೊಂಡ ಕೂಡಲೇ ತುರ್ತು ಚಿಕಿತ್ಸಾ ಘಟಕವನ್ನು ಮುಚ್ಚಲಾಗಿದ್ದು, ರೋಗಿಗಳನ್ನು ಬೇರೆಡೆ ಸ್ಥಳಾಂತರಿಸಲಾಗಿದೆ ಎಂದು ತಿಳಿದುಬಂದಿದೆ. ಇದೇ ಏಮ್ಸ್‌ ಆಸ್ಪತ್ರೆಯಲ್ಲಿ ಪ್ರಸ್ತುತ ಮಾಜಿ ಹಣಕಾಸು ಸಚಿವ ಅರುಣ್ ಜೇಟ್ಲಿ ಅವರಿಗೆ ಕೂಡಾ ಚಿಕಿತ್ಸೆ ನೀಡಲಾಗಿತ್ತಿದೆ. ಅರುಣ್ ಜೇಟ್ಲಿ ಅವರು ತೀವ್ರ ನಿಗಾ ಘಟಕದಲ್ಲಿದ್ದಾರೆ.

LEAVE A REPLY

Please enter your comment!
Please enter your name here