ಜಿಂದಾಲ್’ಗೆ ಭೂಮಿ ಮಾರಾಟ ವಿವಾದ; ಸಿಎಂ ಕುಮಾರಸ್ವಾಮಿ ಟ್ವೀಟ್!

0
310

ನ್ಯೂಸ್ ಕನ್ನಡ ವರದಿ (12-6-2019): ಸಚಿವ ಸಂಪುಟ ಸಭೆಯಲ್ಲಿ ಬಳ್ಳಾರಿ ಜಿಲ್ಲೆಯ ತೋರಣಗಲ್ಲು ಮತ್ತು ಕರೆಕುಪ್ಪ ಗ್ರಾಮಗಳಲ್ಲಿ 2001 ಎಕರೆ, ಸಂಡೂರು ತಾಲೂಕಿನ ಮುಸೇ ನಾಯಕನಹಳ್ಳಿ ಮತ್ತು ಯರಬನಹಳ್ಳಿ ಗ್ರಾಮಗಳಲ್ಲಿ 1666 ಎಕರೆ ಭೂಮಿ ಸೇರಿ ಜಿಂದಾಲ್‌ಗೆ 3667 ಎಕರೆ ಭೂಮಿಯನ್ನು ನೀಡಲು ಸರ್ಕಾರ ತೀರ್ಮಾನಿಸಿದೆ. ಆದರೆ, ಮಾರುಕಟ್ಟೆ ದರಕ್ಕಿಂತ ಕಡಿಮೆ ದರದಲ್ಲಿ ಜಾಗವನ್ನು ಸರ್ಕಾರ ನೀಡಲು ಮುಂದಾಗಿರುವುದು ವಿವಾದಕ್ಕೆ ಕಾರಣವಾಗಿದೆ. ಪ್ರತಿಪಕ್ಷ ಬಿಜೆಪಿ ಈ ವಿಚಾರವನ್ನು ಹೋರಾಟಕ್ಕಾಗಿ ತೆಗೆದುಕೊಂಡಿದ್ದು,  ಸರ್ಕಾರ ತನ್ನ ನಿರ್ಧಾರ ವಾಪಸ್ ಪಡೆಯಬೇಕು ಎಂದು ಒತ್ತಾಯಿಸಿದೆ.

ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಈ ಕುರಿತು ಟ್ವೀಟ್ ಮಾಡಿದ್ದಾರೆ. “ಜಿಂದಾಲ್ ಗೆ ಭೂಮಿ ಮಾರಾಟ ಮಾಡುವ ವಿಷಯದ ಕುರಿತು ಇಂದು ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ ಹಾಗೂ ಕೈಗಾರಿಕಾ ಸಚಿವ ಕೆ.ಜೆ.ಜಾರ್ಜ್ ಅವರೊಂದಿಗೆ ಚರ್ಚಿಸಿದ್ದೇನೆ. ಈ ವಿಷಯವನ್ನು ಮರುಪರಿಶೀಲನೆ ಮಾಡಿ ಸಂಪುಟ ಸಭೆಯಲ್ಲಿ ಚರ್ಚೆಗಾಗಿ ಪುನಃ ಮಂಡಿಸುವಂತೆ ಸೂಚಿಸಿದ್ದೇನೆ” ಎಂದು ಕುಮಾರಸ್ವಾಮಿ ಟ್ವೀಟ್‌ ಮಾಡಿದ್ದಾರೆ.

LEAVE A REPLY

Please enter your comment!
Please enter your name here