“ಧರ್ಮದ ಮೇಲೆ ದೇಶ ಕಟ್ಟಲು ಹೋಗುತ್ತಿರುವ ಮೋದಿ ನಿಜವಾದ ದೇಶದ್ರೋಹಿ!”

0
184

ನ್ಯೂಸ್ ಕನ್ನಡ ವರದಿ: ನಮ್ಮನ್ನು ಆಳುವುದು ಈ ದೇಶದ ಕಾನೂನೇ ಹೊರತು ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್‌ ಶಾ ಅಲ್ಲ. ಧರ್ಮದ ಮೇಲೆ ದೇಶ ಕಟ್ಟಲು ಹೋಗುತ್ತಿರುವ ಮೋದಿ ನಿಜವಾದ ದೇಶದ್ರೋಹಿ. ಮುಸ್ಲಿಮರನ್ನು ಟಾರ್ಗೆಟ್‌ ಮಾಡಿರುವ ಮೋದಿ ಮುಸ್ಲಿಂ ಸಮುದಾಯಕ್ಕೆ ನೇರವಾಗಿ ಚೂರಿ ಚುಚ್ಚುತ್ತಿದ್ದಾರೆ ಎಂದು ಉರಿಲಿಂಗಪೆದ್ದಿ ಮಠದ ಜ್ಞಾನಪ್ರಕಾಶ ಸ್ವಾಮೀಜಿ ಹೇಳಿದ್ದಾರೆ.

ಪೌರತ್ವ ಮಸೂದೆ ಕಾಯ್ದೆಯನ್ನು ಹಿಂಪಡೆಯಬೇಕು ಹಾಗೂ ಎನ್‌ಆರ್‌ಸಿ, ಸಿಎಎ, ಮತ್ತು ಎನ್‌ಪಿಆರ್‌ನ್ನು ಜಾರಿಗೊಳಿಸಬಾರದು ಎಂದು ಆಗ್ರಹಿಸಿ ಹನೂರು ಅಲ್ಪಸಂಖ್ಯಾತರು, ದಲಿತರು ಹಾಗೂ ಹಿಂದುಳಿದ ವರ್ಗಗಳ ಒಕ್ಕೂಟದ ವತಿಯಿಂದರ ಮಹದೇಶ್ವರ ಕ್ರೀಡಾಂಗಣದಲ್ಲಿ ಗುರುವಾರ ಏರ್ಪಡಿಸಲಾಗಿದ್ದ ವೇದಿಕೆ ಕಾರ್ಯಕ್ರಮದಲ್ಲಿ ಅವರು ಮಾತನಾಡುತ್ತಿದ್ದರು.

ದಲಿತರು, ಹಿಂದುಳಿದ ವರ್ಗಗಳ ಜನತೆಗೆ ಬೆನ್ನ ಹಿಂದೆ ಚೂರಿ ಹಾಕಲು ಹೊರಟಿದ್ದಾರೆ. ಈ ದೇಶದಲ್ಲಿ ಜನತೆಯ ರಕ್ತಹೀರುತ್ತಿರುವ ತಿಗಣೆಗಳು ಇದ್ದರೆ. ಅದು ಮೋದಿ ಮತ್ತು ಅಮಿತ್‌ ಶಾ. ಅಷ್ಟಲ್ಲದೇ ಮೋದಿ ಸರ್ಕಾರ ರೈತರ ರಕ್ತವನ್ನು ಹೀರುವಂತ ಸರ್ಕಾರವಾಗಿದೆ. ಡಾ.ಬಿ.ಆರ್‌. ಅಂಬೇಡ್ಕರ್‌ ಹೇಳಿರುವಂತೆ ಸಂವಿಧಾನ ಉಳಿಯದೇ ಹೋದರೆ ಈ ದೇಶ ಮತ್ತೊಮ್ಮೆ ಗುಲಾಮ ರಾಷ್ಟ್ರವಾಗುತ್ತದೆ. ಹಿಂದೂ ರಾಷ್ಟ್ರ ಮಾಡಿದರೆ ದೇಶ ಚಿಂದಿಯಾಗುತ್ತದೆ. ಪೆನ್ನುಗಳ ಭಾರತ ಬೇಕೆ ಹೊರತು ಗನ್ನುಗಳ ಭಾರತ ಬೇಕಿಲ್ಲ. ಪ್ರಧಾನಿ ಮೋದಿ ಅವರು ಟಿಪ್ಪು ಸುಲ್ತಾನ್‌, ನಾಲ್ವಡಿ ಕೃಷ್ಣರಾಜರ ಆದರ್ಶ ಆಡಳಿತವನ್ನು ನಡೆಸಬೇಕು. ಎನ್‌ಆರ್‌ಸಿ , ಸಿಎಎ, ಇನ್ನು ಎರಡು ವರ್ಷಗಳಲ್ಲಿ ನಾಶವಾಗಲಿದೆ ಎಂದು ಹರಿಹಾಯ್ದರು.

LEAVE A REPLY

Please enter your comment!
Please enter your name here