ಬಿಜೆಪಿ ಪ್ರಚಾರ ವೇದಿಕೆಯಲ್ಲಿ ಜನಾರ್ದನ ರೆಡ್ಡಿ ಕಂಡು ಬಂದರೆ ನನಗೆ ಕೂಡಲೇ ವಾಟ್ಸಪ್ ಮಾಡಿ!

0
1369

ನ್ಯೂಸ್ ಕನ್ನಡ ವರದಿ: ರಾಜ್ಯದಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಹೇಗಾದರೂ ಮಾಡಿ ಮತ್ತೊಮ್ಮೆ ಅಧಿಕಾರಕ್ಕೆ ಬರುವ ಉದ್ದೇಶದಿಂದ ಭಾರತೀಯ ಜನತಾ ಪಕ್ಷ ರಾಜ್ಯಾದ್ಯಂತ ತಮ್ಮದೇ ಶೈಲಿಯಲ್ಲಿ ಅಬ್ಬರದ ಪ್ರಚಾರದಲ್ಲಿ ತೊಡಗಿದ್ದರೆ ಇತ್ತ ಮತ್ತೊಮ್ಮೆ ರಾಜಕೀಯ ಪ್ರವೇಶ ಮಾಡಲು ಕಾಯುತ್ತಿರುವ ಗಣಿಧನಿ ಜನಾರ್ದನ ರೆಡ್ಡಿ ತನ್ನ ಗೆಳೆಯ ಶ್ರೀರಾಮುಲು ಪರ ಮೊಳಕಾಲ್ಮೂರಿನಲ್ಲಿ ಮತ್ತು ಬಾದಾಮಿಯಲ್ಲಿ ಪ್ರಚಾರ ಕಾರ್ಯದಲ್ಲಿ ತೊಡಗಿದ್ದರು.

ಆದರೆ ಜನಾರ್ದನ ರೆಡ್ಡಿ ಮೇಲಿರುವ ಭೃಷ್ಟಾಚಾರ ಆರೋಪದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಅದೇ ವಿಷಯವನ್ನು ತಮ್ಮ ವಿರುದ್ಧ ಬಳಸುವ ಸಂಭವವಿರುವ ಕಾರಣ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಷಾ ಜನಾರ್ದನ ರೆಡ್ಡಿಗೂ ಬಿಜೆಪಿಗೂ ಯಾವುದೇ ರೀತಿಯ ಸಂಬಂಧವಿಲ್ಲ ಎಂದು ಸ್ಪಷ್ಟಪಡಿಸಿದ್ದರು, ಆದರೂ ನಂತರ ಬಾದಾಮಿಯಲ್ಲಿ ಯಡಿಯೂರಪ್ಪ ಮತ್ತು ಜನಾರ್ದನ ರೆಡ್ಡಿ ವೇದಿಕೆ ಹಂಚಿಕೊಂಡಿದ್ದರು.

ಇದೀಗ ಬಿಜೆಪಿ ರಾಷ್ಟ್ರೀಯ ನಾಯಕರು ಯಡಿಯೂರಪ್ಪ ಮತ್ತು ಶ್ರೀರಾಮುಲು ಅವರಿಗೆ ಖಡಕ್ ಸಂದೇಶ ನೀಡಿ ಜನಾರ್ದನ ರೆಡ್ಡಿಯನ್ನು ದೂರ ಇಡಲು ಆದೇಶ ನೀಡಿದೆ. ಜನಾರ್ದನ ರೆಡ್ಡಿ ಬಿಜೆಪಿ ಸ್ಟಾರ್ ಪ್ರಚಾರಕ ಅಲ್ಲ. ರೆಡ್ಡಿ ಬಿಜೆಪಿಯ ಯಾವುದೇ ವೇದಿಕೆಗೂ ಹತ್ತಬಾರದು. ಒಂದು ವೇಳೆ ರೆಡ್ಡಿ ವೇದಿಕೆ ಏರಿದ್ರೆ ನನಗೆ ವಾಟ್ಸಪ್ ಮಾಡಿ ಎಂದು ಬಿಜೆಪಿ ರಾಜ್ಯ ಉಸ್ತುವಾರಿ ಪಿ. ಮುರಳಿಧರ ರಾವ್ ಎಚ್ಚರಿಸಿದ್ದಾರೆ.

LEAVE A REPLY

Please enter your comment!
Please enter your name here