ಮಹಾರಾಷ್ಟ್ರದಲ್ಲಿ ರಾಷ್ಟ್ರಪತಿಗಳ’ ಆಡಳಿತ!: ಕೇಂದ್ರ ಸಚಿವ ಸಂಪುಟ ಒಪ್ಪಿಗೆ?

0
160

ನ್ಯೂಸ್ ಕನ್ನಡ ವರದಿ: ಮಹಾರಾಷ್ಟ್ರದಲ್ಲಿ ರಾಷ್ಟ್ರಪತಿ ಆಡಳಿತಕ್ಕೆ ಶಿಫಾರಸ್ಸಿಗೆ ಒಪ್ಪಿಗೆ ನೀಡಿದೆ ಎನ್ನಲಾಗಿದೆ. ಇಂದು ಪ್ರಧಾನಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಕ್ಯಾಬಿನೆಟ್ ಸಭೆಯಲ್ಲಿ ಈ ಬಗ್ಗೆ ತೀರ‍್ಮಾನ ನಡೆಸಲಾಯಿತು.

ಮಹಾರಾಷ್ಟ್ರದಲ್ಲಿ ರಾಷ್ಟ್ರಪತಿ ಆಡಳಿತವನ್ನು ರಾಜ್ಯಪಾಲರು ಶಿಫಾರಸು ಮಾಡಿದ್ದರು. ಯಾರಿಂದಲೂ ಹಕ್ಕು ಮಂಡನೆಯಾಗದ ಸ್ಥಿತಿ ನಿರ್ಮಾಣವಾದ ಹಿನ್ನಲೆಯಲ್ಲಿ, ಮಾಹಾರಾಷ್ಟ್ರ ರಾಜ್ಯಪಾಲ ಭಗತ್ ಸಿಂಗ್ ಕೋಶಿಯಾರಿ ಅವರು ಹಾಲಿ ವಿಧಾನಸಭೆಯನ್ನು ಅಮಾನತಿನಲ್ಲಿಟ್ಟು ರಾಷ್ಟ್ರಪತಿಗಳ ಆಡಳಿತಕ್ಕೆ ರಾಜ್ಯಪಾಲರು ಶಿಫಾರಸು ಮಾಡಿದ್ದರು.ರಾಜ್ಯಪಾಲರ ಶಿಫಾರಸು ಕೇಂದ್ರ ಗೃಹ ಸಚಿವಲಾಯಕ್ಕೆ ತಲುಪಿದ ಬಳಿಕ, ಈ ವಿಷಯವನ್ನು ಕ್ಯಾಬಿನಟ್‌ನಲ್ಲಿ ಇಡಬೇಕು, ನಂತರ ಈ ಬಗ್ಗೆ ಕೇಂದ್ರ ಸಚಿವ ಸಂಪುಟ ಒಪ್ಪಿಗೆ ನೀಡಬೇಕಾಗಿತ್ತು, ಅದರಂತೆ ಇಂದು ಮಧ್ಯಾಹ್ನ ನಡೆದ ಸಚಿವ ಸಂಪುಟ ಸಭೆಯಲ್ಲಿ ಮಹಾರಾಷ್ಟ್ರ ರಾಜ್ಯಪಾಲರ ಶಿಫಾರಸ್ಸಿಗೆ ಒಪ್ಪಿಗೆ ನೀಡಿ, ರಾಷ್ಟ್ರಪತಿಗಳ ಅಡಳಿತಕ್ಕೆ ಒಪ್ಪಿಗೆ ನೀಡಿದೆ.

LEAVE A REPLY

Please enter your comment!
Please enter your name here