ಬಿಜೆಪಿಗೆ ಕೈ ಕೊಟ್ಟು, ಕಾಂಗ್ರೆಸ್ ಕೈ ಹಿಡಿದ ರಾಜು ಕಾಗೆ: ಬಿಜೆಪಿಯಲ್ಲಿ ಭುಗಿಲೆದ್ದ ಅಸಮಾಧಾನದ ಹೊಗೆ

0
633

ನ್ಯೂಸ್ ಕನ್ನಡ ವರದಿ: ಕಾಗವಾಡ ವಿಧಾನಸಭಾ ಕ್ಷೇತ್ರದ ಅನರ್ಹ ಕಾಂಗ್ರೆಸ್ ಶಾಸಕ ಶ್ರೀಮಂತ್ ಪಾಟೀಲ್‌ಗೆ ಉಪ ಚುನಾವಣೆಯಲ್ಲಿ ಬಿಜೆಪಿ ಟಿಕೆಟ್ ಸಿಗುವ ಸಾಧ್ಯತೆಗಳಿರುವುದರಿಂದ, ಕಳೆದ ಚುನಾವಣೆಯಲ್ಲಿ ಅತ್ಯಲ್ಪ ಮತಗಳಿಂದ ಪರಾಭವಗೊಂಡಿದ್ದ ಬಿಜೆಪಿಯ ರಾಜು ಕಾಗೆ ಕಾಂಗ್ರೆಸ್ ಸೇರ್ಪಡೆಯಾಗುವ ಸುಳಿವು ನೀಡಿದ್ದಾರೆ.

ಇತ್ತೀಚೆಗಷ್ಟೇ ರಾಜು ಕಾಗೆ, ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಅವರನ್ನು ಭೇಟಿ ಮಾಡಿ ಕಾಂಗ್ರೆಸ್ ಸೇರ್ಪಡೆಯಾದಲ್ಲಿ ತನಗೆ ಉಪ ಚುನಾವಣೆಯಲ್ಲಿ ಟಿಕೆಟ್ ಕೊಡಿಸಬೇಕು ಎಂದು ಚರ್ಚೆ ನಡೆಸಿದ್ದರು ಎಂದು ತಿಳಿದು ಬಂದಿತ್ತು ಇದಕ್ಕೆ ಪುಷ್ಟಿ ಕೊಡುವಂತೆ ಇವತ್ತು ಸುದ್ದಿಗಾರರೊಂದಿಗೆ ಮಾತನಾಡಿದ ರಾಜು ಕಾಗೆ, ನಾನು ಕಾಂಗ್ರೆಸ್ ಸೇರ್ಪಡೆಯಾಗುತ್ತಿದ್ದೇನೆ ನಿರಂತರವಾಗಿ ಕಾಂಗ್ರೆಸ್ ಜೊತೆ ಮಾತುಕತೆಯಲ್ಲಿ ಇದ್ದೆನೆ ಎಂದು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here