16 ಅನರ್ಹ ಶಾಸಕರು ಬಿಜೆಪಿಗೆ ಸೇರ್ಪಡೆ: ಅತಂತ್ರ ಸ್ಥಿತಿಯಲ್ಲಿ ಮತ್ತೋರ್ವ ಅನರ್ಹ ಶಾಸಕ!

0
220

ನ್ಯೂಸ್ ಕನ್ನಡ ವರದಿ: ಸ್ಪೀಕರ್ ನಿರ್ಧಾರವನ್ನು ಎತ್ತಿ ಹಿಡಿದರೂ, ಅನರ್ಹಗೊಂಡ ಶಾಸಕರು ಉಪ ಚುನಾವಣೆಯಲ್ಲಿ ಸ್ಪರ್ಧಿಸಬಹುದು ಎಂದು ಸುಪ್ರೀಂಕೋರ್ಟ್ ತೀರ್ಪು ನೀಡಿರುವುದು ರಾಜ್ಯ ರಾಜಕಾರಣದಲ್ಲಿ ಚಟುವಟಿಕೆಗಳು ಬಿರುಸುಗೊಳ್ಳುವಂತೆ ಮಾಡಿದೆ. ಅನರ್ಹ ಶಾಸಕರಿಗೆ ಸ್ಪರ್ಧಿಸಲು ಅವಕಾಶ ಇದೆ ಎಂಬ ತೀರ್ಪಿನ ಬೆನ್ನಲ್ಲೇ, ಕಾಂಗ್ರೆಸ್ ಮತ್ತು ಜೆಡಿಎಸ್‌ನಿಂದ ಅನರ್ಹಗೊಂಡಿದ್ದ ಶಾಸಕರು ಬಿಜೆಪಿ ಸೇರ್ಪಡೆಗೆ ಮುಂದಾಗಿದ್ದಾರೆ.

ಈಗ ಸುಪ್ರೀಂಕೋರ್ಟ್ ತೀರ್ಪು ಹೊರಬೀಳುತ್ತಿದ್ದಂತೆಯೇ ಗುರುವಾರ ಬಿಜೆಪಿ ಕಚೇರಿಯಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ರೋಷನ್ ಬೇಗ್‌ ಬಿಟ್ಟು ಇನ್ನುಳಿದ 16 ಮಂದಿ ಅನರ್ಹ ಶಾಸಕರು ಬಿಜೆಪಿ ಸೇರಿಕೊಳ್ಳುತ್ತಿದ್ದಾರೆ. ಈ ಬಗ್ಗೆ ಬಿಜೆಪಿ ಅಧಿಕೃತವಾಗಿ ಪಟ್ಟಿ ನೀಡಿದೆ. ಆದರೆ ಕಾಂಗ್ರೆಸ್ ವಿರುದ್ಧ ಸೆಡ್ಡು ಹೊಡೆದು ರಾಜೀನಾಮೆ ನೀಡಿದ್ದಲ್ಲದೆ, ಬಿಜೆಪಿ ಪಾಳೆಯದಲ್ಲಿ ಕಾಣಿಸಿಕೊಂಡಿದ್ದ ಶಿವಾಜಿನಗರದ ಶಾಸಕ ರೋಷನ್ ಬೇಗ್ ಹೆಸರು ಈ ಪಟ್ಟಿಯಲ್ಲಿ ಇಲ್ಲ. ಇದರ ಅರ್ಥ ಅವರು ಬಿಜೆಪಿ ಸೇರಿಕೊಳ್ಳುತ್ತಿಲ್ಲ.

ಗುರುವಾರ ಬೆಂಗಳೂರಿನ ಮಲ್ಲೇಶ್ವರಂನಲ್ಲಿರುವ ಬಿಜೆಪಿ ಕಚೇರಿಯಲ್ಲಿ ಬೆಳಿಗ್ಗೆ 10.30ಕ್ಕೆ ನಡೆಯಲಿರುವ ಕಾರ್ಯಕ್ರಮದಲ್ಲಿ 16 ಮಂದಿ ಅನರ್ಹ ಶಾಸಕರು ಮತ್ತು ಅವರ ಬೆಂಬಲಿಗರು ಬಿಜೆಪಿ ಸೇರಿಕೊಳ್ಳಲಿದ್ದಾರೆ.

ಬಿಜೆಪಿಗೆ ಸೇರುತ್ತಿದ್ದರು ಅನರ್ಹ ಶಾಸಕರ ಪಟ್ಟಿ ಈಗಿದೆ:

ಮಹೇಶ್ ಕುಮಟಳ್ಳಿ, ರಮೇಶ್ ಜಾರಕಿಹೊಳಿ, ಆರ್. ಶಂಕರ್, ಆನಂದ್ ಸಿಂಗ್, ಶಿವರಾಂ ಹೆಬ್ಬಾರ್, ಬಿ.ಸಿ. ಪಾಟೀಲ್, ಎಸ್ ಟಿ ಸೋಮಶೇಖರ್, ಬೈರತಿ ಬಸವರಾಜ್, ಎಂ. ಮುನಿರತ್ನ, ಎಂಟಿಬಿ ನಾಗರಾಜ್, ಕೆ. ಸುಧಾಕರ್ ಮತ್ತು ಶ್ರೀಮಂತ ಪಾಟೀಲ್- ಕಾಂಗ್ರೆಸ್‌ನಿಂದ ಬಿಜೆಪಿಗೆ ಸೇರ್ಪಡೆಯಾಗಲಿದ್ದಾರೆ. ಎಚ್. ವಿಶ್ವನಾಥ್, ನಾರಾಯಣ ಗೌಡ ಮತ್ತು ಕೆ. ಗೋಪಾಲಯ್ಯ ಜೆಡಿಎಸ್ ತೊರೆದು ಕಮಲ ಪಾಳೆಯ ಸೇರಿಕೊಳ್ಳಲಿದ್ದಾರೆ.

LEAVE A REPLY

Please enter your comment!
Please enter your name here