ಬಿಜೆಪಿ ಪ್ರತಿಭಟನೆಯಿಂದ ಗಢ ಗಢ ನಡುಗುತ್ತಿದ್ದೇನೆ: ಡಿಕೆ‌. ಶಿವಕುಮಾರ್ ವ್ಯಂಗ್ಯ

0
23

ನ್ಯೂಸ್ ಕನ್ನಡ ವರದಿ: ಕನಕಪುರ ಚಲೋ ಹಮ್ಮಿಕೊಂಡಿರುವ ಬಿಜೆಪಿಯ ನಡೆಯಿಂದ ಗಢ ಗಢ ನಡುಗುತ್ತಿದ್ದೇನೆ. ಈಗಲೂ ನಡುಗುತ್ತಾ ಅವರಿಗೆ ಹೆದರಿ ಮನೆಯಿಂದ ಹೊರಗಡೆ ಬಂದಿದ್ದೇನೆ ಎಂದು ಮಾಜಿ ಸಚಿವ ಡಿ.ಕೆ. ಶಿವಕುಮಾರ್‌ ಬಿಜೆಪಿ ನಾಯಕರಿಗೆ ವ್ಯಂಗ್ಯವಾಗಿ ತಿರುಗೇಟು ನೀಡಿದ್ದಾರೆ.

ಏಸು ಪ್ರತಿಮೆ ನಿರ್ಮಾಣದ ವಿರುದ್ಧ ಬಿಜೆಪಿ ಹಾಗೂ ಆರ್‌ಎಸ್‌ಎಸ್‌ ವತಿಯಿಂದ ಕನಕಪುರ ಚಲೋ ಹಮ್ಮಿಕೊಂಡಿರುವ ಕುರಿತು ಸೋಮವಾರ ಬೆಂಗಳೂರಿನ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.

ಬಿಜೆಪಿಯವರ ಬಳಿ ಇದೆ. ಅವರು ಏನು ಬೇಕಾದರೂ ಮಾಡಲಿ. ನನ್ನ ಕ್ಷೇತ್ರದಲ್ಲಿ ಅಶಾಂತಿ ಉಂಟು ಮಾಡಿದರೂ ನಾನು ಮಾತನಾಡುವುದಿಲ್ಲ. ನನ್ನ ಕಾರ್ಯಕರ್ತರಿಗೂ ಅವರು ಏನೇ ಮಾತನಾಡಿದರೂ ಯಾರೂ ಪ್ರತಿಕ್ರಿಯಿಸಬೇಡಿ ಎಂದು ಹೇಳಿದ್ದೇನೆ. ಬಿಜೆಪಿಯವರು ರಾಜಕೀಯಕ್ಕೆ ಏನು ಬೇಕೋ ಅದನ್ನು ಮಾಡಿಕೊಳ್ಳಲಿ ಎಂದಿದ್ದಾರೆ.

LEAVE A REPLY

Please enter your comment!
Please enter your name here