ನೆನ್ನೆ ಒಂದೇ ದಿನ 4537 ಕೊರೊನ ಪಾಸಿಟಿವ್: ಹೆಚ್ಚುತ್ತಿದೆ ಎಲ್ಲೆಡೆ ಕೊರೊನ ಮಹಾಮಾರಿ

0
29

ನ್ಯೂಸ್ ಕನ್ನಡ ವರದಿ: ಶನಿವಾರವೂ ರಾಜ್ಯದಲ್ಲಿ ಕೊರೊನಾ ಮಹಾಮಾರಿ ಮತ್ತೆ ಅಬ್ಬರಿಸಿದ್ದು,ಒಂದೇ ದಿನ 4537 ಕೋವಿಡ್ ಹೊಸ ಸೋಂಕಿತರು ಪತ್ತೆಯಾಗಿದ್ದಾರೆ.

ಇದರಿಂದ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 59,652ಕ್ಕೇರಿಕೆಯಾಗಿದೆ.ಜೊತೆಗೆಕೊರೋನಾ ವೈರಸ್ ಮರಣ ಮೃದಂಗ ಮುಂದುವರೆದಿದ್ದು, ಇಂದು 93 ಮಂದಿ ಮಹಾಮಾರಿಗೆ ಬಲಿಯಾಗಿದ್ದಾರೆ. ಇದರೊಂದಿಗೆ ರಾಜ್ಯದಲ್ಲಿ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 1240ಕ್ಕೆ ಏರಿಕೆಯಾಗಿದೆ.

ರಾಜ್ಯದ ಏಳು ಜಿಲ್ಲೆಗಳಲ್ಲಿ ಲಾಕ್‌ಡೌನ್ ಇದ್ದರೂ ಸೋಂಕಿತರ ಸಂಖ್ಯೆ ಮಾತ್ರ ಹೆಚ್ಚುತ್ತಲೇ ಇದ್ದು ಶನಿವಾರ 4537 ಮಂದಿಯಲ್ಲಿ ಸೋಂಕು ಕಾಣಿಸಿಕೊಂಡಿದೆ.

ರಾಜ್ಯದಲ್ಲಿ ಒಟ್ಟು 93 ಮಂದಿ ಸಾವನ್ನಪ್ಪಿದ್ದಾರೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ ಸುಧಾಕರ್ ಅವರು ತಿಳಿಸಿದ್ದಾರೆ.

ಇದೇ ವೇಳೆ ರಾಜಧಾನಿ ಬೆಂಗಳೂರಿನಲ್ಲಿ ಕೊರೋನಾ ಅಂಕೆ ಮೀರಿದ್ದು ಶನಿವಾರ 2344 ಮಂದಿಯಲ್ಲಿ ಸೋಂಕು ಕಾಣಿಸಿದೆ.ಬೆಂಗಳೂರಿನಲ್ಲಿ ದಿನೇ ದಿನೆ ಸೋಂಕಿತರ ಸಂಖ್ಯೆ ಸಾವಿರದ ಗಡಿ ದಾಟುತ್ತಿದ್ದು ಸಾರ್ವಜನಿಕರಲ್ಲಿ ಆತಂಕ ಮನೆಮಾಡಿದೆ.

ಕೊರೋನಾ ವೈರಸ್ ನಿಂದಾಗಿ ಕಳೆದ 24 ಗಂಟೆಯಲ್ಲಿ ಬೆಂಗಳೂರಿನಲ್ಲಿ 49 ಸೋಂಕಿತರು ಸಾವನ್ನಪ್ಪಿದ್ದಾರೆ.

LEAVE A REPLY

Please enter your comment!
Please enter your name here