ರಾಜ್ಯದಲ್ಲಿ ದಾಖಲೆಯ 87 ಜನ ಸಾವು: ಇವತ್ತು ಒಂದೇ ದಿನ 2,496 ಜನರಿಗೆ ಸೊಂಕು

0
30

ನ್ಯೂಸ್ ಕನ್ನಡ ವರದಿ: ರಾಜ್ಯದಲ್ಲಿ ಮಂಗಳವಾರ ಒಂದೇ ದಿನ ದಾಖಲೆಯ 87 ಕೊರೊನಾಗೆ ಬಲಿಯಾಗಿದ್ದು, 2496 ಸೋಂಕು ಪ್ರಕರಣಗಳು ಪತ್ತೆಯಾಗಿವೆ.

ವೈದ್ಯಕೀಯ ಶಿಕ್ಷಣ ಸಚಿವ ಕೆ.ಸುಧಾಕರ್ ಸುದ್ದಿಗಾರರಿಗೆ ಈ ವಿಷಯ ತಿಳಿಸಿದ್ದು, ರಾಜ್ಯದಲ್ಲಿ ಒಟ್ಟಾರೆ ಸೋಂಕಿತರ ಸಂಖ್ಯೆ 44077ಕ್ಕೆ ಏರಿಕೆಯಾಗಿದ್ದು, ಒಟ್ಟು ಸಾವಿನ ಸಂಖ್ಯೆ 844ಕ್ಕೆ ಏರಿಕೆಯಾಗಿದೆ.

ಬೆಂಗಳೂರಿನಲ್ಲಿ ಕಳೆದ 24 ಗಂಟೆಯಲ್ಲಿ 1267 ಪ್ರಕರಣಗಳು ಪತ್ತೆಯಾಗಿದ್ದು, 56 ಮಂದಿ ಬಲಿಯಾಗಿದ್ದಾರೆ.

ರಾಜ್ಯದಲ್ಲಿ ಇಂದು ಕೊರೋನಾ ಸೋಂಕಿತರ ಸಂಖ್ಯೆ ಕೂಡ ಏರಿಕೆಯಾಗಿದೆ. ರಾಜ್ಯದಲ್ಲಿ ಇಂದು 2,496 ಜನರಿಗೆ ಕೊರೋನಾ ಸೋಂಕು ದೃಢಪಟ್ಟಿದೆ. ಈ ಮೂಲಕ ಸಕ್ರೀಯ ಸೋಂಕಿತರ ಸಂಖ್ಯೆ 25,839 ಆಗಿದೆ. ಅಲ್ಲದೇ ಇಂದು ದಾಖಲೆಯ 87 ಜನರು ಕಿಲ್ಲರ್ ಕೊರೋನಾಗೆ ಬಲಿಯಾಗಿದ್ದಾರೆ ಎಂಬದಾಗಿ ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದ್ದಾರೆ.

ಈ ಕುರಿತಂತೆ ವೀಡಿಯೋ ಕಾನ್ಫೆರೆನ್ಸ್ ಮೂಲಕ ಸುದ್ದಿಗೋಷ್ಠಿ ನಡೆಸಿದ ಅವರು, ರಾಜ್ಯದಲ್ಲಿ ಇಂದು 2,496 ಜನರಿಗೆ ಹೊಸದಾಗಿ ಕೊರೋನಾ ಸೋಂಕು ತಗುಲಿದೆ. ಬೆಂಗಳೂರಿನಲ್ಲಿ 1,267 ಜನರಿಗೆ ಕೊರೋನಾ ಸೋಂಕು ತಗುಲಿದೆ. ಈ ಮೂಲಕ ರಾಜ್ಯದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ 25,839ಕ್ಕೆ ಬಂದು ನಿಂತಿದೆ ಎಂಬುದಾಗಿ ಮಾಹಿತಿ ನೀಡಿದರು.

ಅಂದಹಾಗೇ ರಾಜ್ಯದಲ್ಲಿ ಇಂದು 1,142 ಜನರ ಕೊರೋನಾ ಸೋಂಕಿತರು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಬೆಂಗಳೂರು ಒಂದರಲ್ಲಿಯೇ 664 ಸೋಂಕಿತರು ಸಂಪೂರ್ಣವಾಗಿ ಕೊರೋನಾ ಸೋಂಕಿನಿಂದಾಗಿ ಗುಣಮುಖರಾಗಿರುವುದಾಗಿ ತಿಳಿದು ಬಂದಿದೆ.

LEAVE A REPLY

Please enter your comment!
Please enter your name here