ಕರ್ನಾಟಕ ಉಪಚುನಾವಣೆ: ರಾಜ್ಯದ 15 ಕ್ಷೇತ್ರಗಳಲ್ಲಿ ಮತದಾನಕ್ಕೆ ಕ್ಷಣಗಣನೆ

0
113

ನ್ಯೂಸ್ ಕನ್ನಡ ವರದಿ: ಬಹು ನಿರೀಕ್ಷಿತ ಕರ್ನಾಟಕ ಉಪ ಚುನಾವಣೆಗೆ ಕ್ಷಣಗಣನೆ ಆರಂಭವಾಗಿದೆ. 15 ಕ್ಷೇತ್ರದಲ್ಲಿ ಡಿಸೆಂಬರ್ 5 ಗುರುವಾರ ಬೆಳಗ್ಗೆ 7 ಗಂಟೆಯಿಂದಲೇ ಮತದಾನ ನಡೆಯಲಿದ್ದು ಪಕ್ಷಾಂತರ ಮಾಡುವ ಮೂಲಕ ಮೈತ್ರಿ ಸರ್ಕಾರವನ್ನು ಉರುಳಿಸಿದ್ದ ಅನರ್ಹ ಶಾಸಕರು ಮತ್ತೆ ಗೆದ್ದು ಅರ್ಹರಾಗ್ತಾರ? ಅಥವಾ ಪಕ್ಷಾಂತರಿಗಳಿಗೆ ತಕ್ಕ ಪಾಠ ಕಲಿಸ್ತಾರ? ಎಂಬ ಜಿಜ್ಞಾಸೆ ಮತ್ತು ಕುತೂಹಲ ಇದೀಗ ಎಲ್ಲೆಡೆ ಮನೆಮಾಡಿದೆ.

ಡಿಸೆಂಬರ್ 5 ಅಂದರೆ ಇಂದು ಕರ್ನಾಟಕದಲ್ಲಿ ನಡೆಯಲಿರುವ 15 ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೆ 128 ಸ್ವತಂತ್ರರು ಸೇರಿದಂತೆ 248 ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಡಿಸೆಂಬರ್ 9 ರಂದು ಮತ ಎಣಿಕೆ ನಡೆಯಲಿದೆ.

ಬಿಜೆಪಿ ಮತ್ತು ವಿರೋಧ ಪಕ್ಷದ ಕಾಂಗ್ರೆಸ್ ಮತ್ತು ಜೆಡಿಎಸ್ ಎಲ್ಲಾ 15 ವಿಧಾನಸಭಾ ಕ್ಷೇತ್ರಗಳಲ್ಲಿ ಪ್ರತ್ಯೇಕವಾಗಿ ಸ್ಪರ್ಧಿಸುತ್ತಿದ್ದು ತ್ರಿಕೋನ ಸ್ಪರ್ಧೆ ಏರ್ಪಡುವ ಸಾಧ್ಯತೆಯಿದೆ.

ರಾಯಚೂರು ಜಿಲ್ಲೆಯ ಮಸ್ಕಿ ಮತ್ತು ಆರ್.ಆರ್.ನಗರ ಈ ಎರಡೂ ಕ್ಷೇತ್ರಗಳನ್ನು ಹೊರತುಪಡಿಸಿ ಅಥಣಿ, ಕಾಗವಾಡ, ಗೋಕಾಕ್, ಯೆಲ್ಲಾಪುರ, ಹಿರೇಕೆರೂರ್, ರಾಣಿಬೆನ್ನೂರ್, ವಿಜಯನಗರ, ಚಿಕ್ಕಬಳ್ಳಾಪುರ, ಕೆ.ಆರ್. ಪುರ, ಯಶ್ವಂತಪುರ, ಮಹಾಲಕ್ಷ್ಮಿ ಲೇಔಟ್, ಶಿವಾಜಿನಗರ, ಹೊಸಕೋಟೆ, ಕೆ.ಆರ್. ಪೇಟೆ ಮತ್ತು ಹುಣಸೂರು ವಿಧಾನಸಭಾ ಕ್ಷೇತ್ರಗಳಲ್ಲಿ ಉಪಚುನಾವಣೆ ನಡೆಯಲಿದೆ.

LEAVE A REPLY

Please enter your comment!
Please enter your name here