ಕರ್ನಾಟಕದಲ್ಲಿ ಒಂದೇ ದಿನ 45 ಮಂದಿಗೆ ಕೊರೊನಾ: ಸೋಂಕಿತರ ಸಂಖ್ಯೆ 750ಕ್ಕೆ ಏರಿಕೆ

0
117

ನ್ಯೂಸ್ ಕನ್ನಡ ವರದಿ: ನೊವೆಲ್ ಕೊರೊನಾ ವೈರಸ್ ಸೋಂಕಿತರ ಗಣನೀಯ ಮಟ್ಟದಲ್ಲಿ ಏರಿಕೆ ಕಂಡು ಬಂದಿದೆ. ಒಂದೇ ದಿನ ರಾಜ್ಯದಲ್ಲಿ 45 ಮಂದಿಗೆ ಮಹಾಮಾರಿ ಅಂಟಿಕೊಂಡಿದ್ದು, ಸೋಂಕಿತರ ಸಂಖ್ಯೆ 750ಕ್ಕೆ ಏರಿಕೆಯಾಗಿದೆ.

ದಾವಣಗೆರೆಯಲ್ಲೇ 14 ಮಂದಿಗೆ ಸೋಂಕು ಪತ್ತೆಯಾಗಿದ್ದು, ಉತ್ತರ ಕನ್ನಡ ಜಿಲ್ಲೆಯಲ್ಲಿ 12 ಜನರಿಗೆ ಬೆಳಗಾವಿಯಲ್ಲಿ 11 ಮಂದಿಗೆ ಹಾಗೂ ಬೆಂಗಳೂರಿನಲ್ಲಿ 07 ಮತ್ತು ಬಳ್ಳಾರಿಯಲ್ಲಿ ಒಬ್ಬರಿಗೆ ಸೋಂಕು ತಗಲಿರುವುದು ದೃಢಪಟ್ಟಿದೆ.

ಒಂದೇ ಒಂದು ದಿನಗಳಲ್ಲಿ ಮೂರು ಜಿಲ್ಲೆಗಳ ಸಂಪೂರ್ಣ ಚಿತ್ರಣವೇ ಬದಲಾಗಿದೆ. ಕೊರೊನಾ ವೈರಸ್ ರಣಕೇಕೆಗೆ ದಾವಣಗೆರೆ, ಉತ್ತರ ಕನ್ನಡ ಹಾಗೂ ಬೆಳಗಾವಿ ಜಿಲ್ಲೆಗಳ ತತ್ತರಿಸಿ ಹೋಗಿವೆ. ಒಂದೇ ದಿನ ಹತ್ತಕ್ಕಿಂತ ಹೆಚ್ಚು ಮಂದಿಗೆ ಕೊರೊನಾ ವೈರಸ್ ಸೋಂಕು ಪತ್ತೆಯಾಗಿದ್ದು, ಒಂದೇ ದಿನ ಮೂರು ಜಿಲ್ಲೆಗಳಲ್ಲಿ 37 ಮಂದಿಗೆ ಕೊರೊನಾ ವೈರಸ್ ಸೋಂಕು ಪತ್ತೆಯಾಗಿದೆ. ಇದರಿಂದ ಜಿಲ್ಲೆಯ ಜನರಲ್ಲಿ ಆತಂಕ ಮತ್ತಷ್ಟು ಹೆಚ್ಚಿಸಿದೆ.

LEAVE A REPLY

Please enter your comment!
Please enter your name here